ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಬಳ್ಳಾರಿ ಸಜ್ಜು: ಸಚಿವ ರಘುಮೂರ್ತಿ ಧ್ವಜಾರೋಹಣ

 ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಬಳ್ಳಾರಿ ಸಜ್ಜು: ಸಚಿವ ರಘುಮೂರ್ತಿ ಧ್ವಜಾರೋಹಣ   Ballari gears up for Kalyana Karnataka Utsava: Minister Raghumurthy to hoist the flag


ಬಳ್ಳಾರಿ, ಸೆ.15 (ಕರ್ನಾಟಕ ವಾರ್ತೆ):  ಸೆ.17ರಂದು ನಡೆಯಲಿರುವ ಐತಿಹಾಸಿಕ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಬಳ್ಳಾರಿ ಜಿಲ್ಲಾ ಕೇಂದ್ರದಲ್ಲಿ ಧ್ವಜಾರೋಹಣ ನೆರವೇರಿಸಲು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಟಿ. ರಘುಮೂರ್ತಿ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ.  

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ರಾಜ್ಯ ಶಿಷ್ಟಾಚಾರ) ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, ಕಲ್ಯಾಣ ಕರ್ನಾಟಕ ಭಾಗದ ಒಟ್ಟು ಏಳು ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನಿಯೋಜಿಸಲಾಗಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿಗಳು ತಿಳಿಸಿದ್ದಾರೆ.