ಸಂಘದ ನಿಷೇಧ ಕನಸಿನ ಮಾತು: ಬಿರಾದಾರ
Ban on Sangh is a pipe dream: Biradar
ಲೋಕದರ್ಶನ ವರದಿ
ಸಂಘದ ನಿಷೇಧ ಕನಸಿನ ಮಾತು: ಬಿರಾದಾರ
ಸಿಂದಗಿ 13: ರಾಷ್ಟ್ರೀಯ ಸ್ವಯಂಸೇವಕ ಸಂಘದ ಇತಿಹಾಸ, ಹಿನ್ನೆಲೆ, ಅದರ ಕಾರ್ಯ ಚಟುವಟಿಕೆಯ ಮಾಹಿತಿ ಇಲ್ಲದೇ ಇದ್ದವರು ಪ್ರಚಾರದ ಗಿಳಿನಿಂದ ಇಂತಹ ಹೇಳಿಕೆ ನೀಡುತ್ತಾರೆ. ಪ್ರಿಯಾಂಕ್ ಖರ್ಗೆ ಅವರ ಕಣ್ಣು ಸಿಎಂ ಗದ್ದುಗೆಯ ಮೇಲೆ ಇರುವಂತೆ ಗೋಚರಿಸುತ್ತದೆ. ಹಾಗಾಗಿ ಹೈಕಮಾಂಡ್ ಮತ್ತು ಗಾಂಧಿ ಕುಟುಂಬವನ್ನು ಓಲೈಕೆ ಮಾಡುವ ನಿಟ್ಟಿನಲ್ಲಿ ಈ ರೀತಿಯ ಪತ್ರ ಬರೆದಂತೆ ಎದ್ದು ಕಾಣುತ್ತಿದೆ ಎಂದು ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ ಹೇಳಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಆರ್‌ಎಸ್‌ಎಸ್ 100 ವರ್ಷ ಪೂರೈಸಿದ ಈ ಶುಭ ಘಳಿಗೆಯಲ್ಲಿ ದೇಶದಾದ್ಯಂತ ಪಥ ಸಂಚಲನದ ಮೂಲಕ ಮತ್ತಷ್ಟು ದೇಶವನ್ನು ಜಾಗೃತವಾಗುವಂತೆ ಮಾಡುತ್ತಿದೆ. ಒಂದು ಜವಾಬ್ದಾರಿಯುತ ಸ್ಥಾನದಲ್ಲಿರುವ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್ ಚಟುವಟಿಕೆಯ ನಿಷೇಧದ ಕುರಿತು ಇಷ್ಟೊಂದು ಬೇಜವಾಬ್ದಾರಿಯಿಂದ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ ಎಂದರೆ ಇದು ಅವರ ಮೂರ್ಖತನದ ಪ್ರದರ್ಶನ ಎಂದು ಕಿಡಿಕಾರಿದ್ದಾರೆ. ಸಚಿವರಾಗಿ ರಾಜ್ಯ ಸರಕಾರವನ್ನು ಮುಜುಗರಕ್ಕೆ ತರುವಂತಹ ಕಾರ್ಯ ಮಾಡುವ ಮತ್ತು ಉಡಾಫೆಯಾಗಿ ಮಾತನಾಡುತ್ತಿರುವುದಕ್ಕೆ ಕಾಲವೇ ಉತ್ತರ ಕೊಡಲಿದೆ. ಸಂಘವನ್ನು ಯಾರಿಂದಲೂ ನಿಷೇಧ ಮಾಡಲು ಸಾಧ್ಯವಿಲ್ಲ. ಸಂಘದ ನಿಷೇಧ ಕನಸಿನ ಮಾತು ಎಂದಿದ್ದಾರೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 