ಸರ್ಕಾರಿ ಕಚೇರಿಗಳಲ್ಲಿ, ಸರ್ಕಾರಿ ಕಾರ್ಯಕ್ರಮಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ
Ban on single use plastic in government offices, government events
ಬೆಂಗಳೂರು 05: ಸರ್ಕಾರಿ ಕಚೇರಿಗಳಲ್ಲಿ ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್ಗಳಲ್ಲಿ ಕುಡಿಯುವ ನೀರು ಕೊಡುವಂತಿಲ್ಲ ಎಂಬ ಆದೇಶವನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದೆ.
ಪರಿಸರದ ಮೇಲೆ ಪ್ಲಾಸ್ಟಿಕ್ ಬಳಕೆಯಿಂದ ಆಗುವ ಗಂಭೀರ ಹಾನಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಈ ಮಹತ್ವದ ಆದೇಶ ಹೊರಡಿಸಿದೆ.
ಎಲ್ಲ ಇಲಾಖೆಗಳ ಮುಖ್ಯಸ್ಥರು ತಮ್ಮ ಅಧೀನದಲ್ಲಿ ಬರುವ ಎಲ್ಲಾ ಕ್ಷೇತ್ರ, ಇಲಾಖೆ, ಮಂಡಳಿ, ನಿಗಮಗಳಿಗೆ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಬೇಕು ಎಂದೂ ಸುತ್ತೋಲೆಯಲ್ಲಿ ನಿರ್ದೇಶನ ನೀಡಲಾಗಿದೆ.
ಪ್ಲಾಸ್ಟಿಕ್ ವಸ್ತುಗಳ ಅತಿಯಾದ ಬಳಕೆಯಿಂದ ಆರೋಗ್ಯ ಮತ್ತು ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಯುವ ದೃಷ್ಟಿಯಿಂದ ಸಚಿವಾಲಯ ಸೇರಿದಂತೆ ರಾಜ್ಯಾದ್ಯಾಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸೌಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಏರ್ಪಡಿಸಲ್ಪಡುವ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲ್ನ ನೀರಿನ ಬಳಕೆ/ ಸರಬರಾಜು ಮಾಡುವುದನ್ನು ನಿಷೇಧಿಸಲಾಗಿದೆ.
ಇಂತಹ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರನ್ನು ಸಂದರ್ಭಾನುಸಾರ ಶುಚಿತ್ವ ಉಳ್ಳ ಗ್ಲಾಸ್, ಸ್ಟೀಲ್, ಪೇಪರ್ ಮತ್ತಿತರ ಪ್ಲಾಸ್ಟಿಕ್ ಅಲ್ಲದ ಲೋಟಗಳಲ್ಲಿ ಸರಬರಾಜು ಮಾಡಲು ಕ್ರಮವಹಿಸುವಂತೆ ಅಧಿಸೂಚನೆ / ಆದೇಶ / ಸುತ್ತೋಲೆ ಹೊರಡಿಸಲಾಗಿದೆ ಎಂದು ಸರ್ಕಾರಿ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಎಲ್ಲ ಇಲಾಖೆಗಳ ಮುಖ್ಯಸ್ಥರು ತಮ್ಮ ಅಧೀನದಲ್ಲಿ ಬರುವ ಎಲ್ಲಾ ಕ್ಷೇತ್ರ, ಇಲಾಖೆ, ಮಂಡಳಿ, ನಿಗಮಗಳಿಗೆ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಬೇಕು ಎಂದೂ ಸುತ್ತೋಲೆಯಲ್ಲಿ ನಿರ್ದೇಶನ ನೀಡಲಾಗಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 