ಆಲಮೇಲದಲ್ಲಿ ಆ. 2ರಂದು ಬಣಜಿಗ ಸಮಾಜದ ತಾಲೂಕು ಸಮಾವೇಶ
Banajiga community taluk convention in Alamel on August 2
ಆಲಮೇಲ 1: ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘ (ರಿ.), ಬೆಂಗಳೂರು ಹಾಗೂ ತಾಲೂಕು ಘಟಕ ಆಲಮೇಲದ ಆಶ್ರಯದಲ್ಲಿ ಬಣಜಿಗ ಸಮಾಜದ ತಾಲೂಕು ಸಮಾವೇಶ, ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಆಗಸ್ಟ್ 2ರಂದು (ಭಾನುವಾರ) ಬೆಳಿಗ್ಗೆ 10 ಗಂಟೆಗೆ ಆಲಮೇಲ ಪಟ್ಟಣದ ಶ್ರೀ ವಿಶ್ವೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ ಎಂದು ತಾಲೂಕು ಅಧ್ಯಕ್ಷ ಸಿದ್ದಲಿಂಗ ಜಿ. ಸುಬೇದಾರ ತಿಳಿಸಿದ್ದಾರೆ.
ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾರಂಭವನ್ನು ಮಾಜಿ ಮುಖ್ಯಮಂತ್ರಿ ಹಾಗೂ ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಉದ್ಘಾಟಿಸಲಿದ್ದಾರೆ. ಶಿರೋಳದ ಶಂಕರಾರೂಢ ಮಹಾಸ್ವಾಮೀಜಿ, ಗುರು ಸಂಸ್ಥಾನ ಹಿರೇಮಠದ ಚಂದ್ರಶೇಖರ ಶಿವಾಚಾರ್ಯರು, ವಿರಕ್ತಮಠದ ಜಗದೇವಮಲ್ಲಿಬೊಮ್ಮಯ್ಯ ಮಹಾಸ್ವಾಮೀಜಿ ಹಾಗೂ ಅಳಕೊಳ್ಳಿ ಹಿರೇಮಠದ ಶ್ರೀಶೈಲಯ್ಯ ಮಹಾಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿಶ್ವಗುರು ಬಸವೇಶ್ವರರ ಭಾವಚಿತ್ರಕ್ಕೆ ಶಾಸಕ ಅಶೋಕ್ ಎಂ. ಮನಗೂಳಿ ಹಾಗೂ ಅಕ್ಕಮಹಾದೇವಿ ಭಾವಚಿತ್ರಕ್ಕೆ ಮಾಜಿ ಸಚಿವ ಅಪ್ಪಾಸಾಹೇಬ ಎಂ. ಪಟ್ಟಣಶೆಟ್ಟಿ ಪುಷ್ಪಾರ್ಚನೆ ನೆರವೇರಿಸಲಿದ್ದಾರೆ. ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಜಿ. ರೋಡಗಿ, ಮಾಜಿ ಶಾಸಕ ರಮೇಶ ಬಿ. ಭೂಸನೂರು, ಮಾಜಿ ವಿಧಾನ ಪರಿಷತ್ ಸದಸ್ಯ ಅರುಣ ಆರ್. ಶಹಾಪುರ ಹಾಗೂ ಮಾಜಿ ಶಾಸಕ ದೊಡ್ಡಪ್ಪಗೌಡ ಎಸ್. ಪಾಟೀಲ ಗೌರವ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 