ಬಾಗಲಕೋಟೆ10: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಬಾದಾಮಿ ಬನಶಂಕರಿ ಜಾತ್ರೆಯಲ್ಲಿ ದಿನದ 24*7 ತುರ್ತು ಚಿಕಿತ್ಸಾ ಕೇಂದ್ರ ಸ್ಥಾಪಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎ.ಎನ್.ದೇಸಾಯಿ ತಿಳಿಸಿದರು.
ಈ ತುರ್ತು ಚಿಕಿತ್ಸಾ ಕೇಂದ್ರದಲ್ಲಿ ದಿನದ 24 ಗಂಟೆಗಳಲ್ಲಿ ವೈದ್ಯಾಧಿಕಾರಿಗಳು ಕಾರ್ಯನಿರ್ವಹಿಸಲಿದ್ದಾರೆ. ನಾಲ್ಕು ಅಂಬುಲೆನ್ಸ್ ವ್ಯವಸ್ಥೆ, ಔಷಧಿ ದಾಸ್ತಾನು ಇಡಲಾಗಿದೆ. ಜಾತ್ರೆಯ ಪ್ರಸಾದವನ್ನು ಪ್ರತಿದಿನ ತಪಾಸಣೆ ಮಾಡಲಾಗುತ್ತಿದೆ. ಐಇಸಿ ಇಂದ ವಿವಿಧ ಆರೋಗ್ಯ ಸೇವೆಯನ್ನು ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದ್ದಾರೆ. ರಕ್ತದಾನದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ದಾವಣಗೇರೆಯ ಬಸವರಾಜ ಅವರು ರಡ್ಮ್ಯಾನ್ ಆಗಿ ಎಲ್ಲರ ಗಮನ ಸೆಳೆದರು. ಇದೇ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಪವಾಡೆಪ್ಪ ಅವರು ರಕ್ತದಾನ ಮಾಡಿದರು