ತಾಲೂಕು ಮಟ್ಟದ ಇಲಾಖಾ ಕ್ರೀಡಾಕೂಟಕ್ಕೆ ಬಾನೆಸರಕಾರ ಚಾಲನೆ
Banesarakar launches taluk level departmental sports meet
ರಾಯಬಾಗ, 31 ; ಕ್ರೀಡಾಕೂಟದಲ್ಲಿ ಭಾಗವಹಿಸುವ ಆಟಗಾರರು ಕ್ರೀಡಾ ಮನೋಭಾವದಿಂದ ಆಡಬೇಕೆಂದು ಗಜಾನನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸಂಜೀವಕುಮಾರ ಬಾನೆಸರಕಾರ ಹೇಳಿದರು.
ಶನಿವಾರ ತಾಲೂಕಿನ ಮೊರಬ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಉಪ ನಿರ್ದೇಶಕರು, ಶಾಲಾ ಶಿಕ್ಷಣ (ಪದವಿಪೂರ್ವ) ಚಿಕ್ಕೋಡಿ ಹಾಗೂ ಎಸ್.ಆರ್.ಬಾನೆಸರಕಾರ ಪದವಿಪೂರ್ವ ಕಾಲೇಜ ಸಹಯೋಗದಲ್ಲಿ ನಡೆದ ತಾಲೂಕು ಮಟ್ಟದ ಇಲಾಖಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕ್ರೀಡಾಕೂಟದಲ್ಲಿ ಭಾಗವಹಿಸುವುದರಿಂದ ದೈಹಿಕವಾಗಿ ಸದೃಢವಾಗಲು ಸಾಧ್ಯ, ನಿರ್ಣಾಯಕರು ಯಾವುದೇ ತಾರತಮ್ಯ ಮಾಡದೇ ಸರಿಯಾದ ನಿರ್ಣಯ ನೀಡಬೇಕೆಂದರು.
ಡಿ.ಎಸ್.ನಾಯಿಕ, ಎನ್.ಎಸ್.ಚೌಗಲಾ, ಡಾ.ಸಿ.ಬಿ.ಕುಲಗೋಡ, ಅಶೋಕ ಕೊಪ್ಪದ, ಕುಮಾರ ಕಾನಡೆ, ಆಯ್.ಕೆ.ಅಕಿವಾಟ, ದಾದಪ್ಪ ರಾಮತೀರ್ಥ, ರುದ್ರೇಶ ಅಸೋದೆ ಹಾಗೂ ವಿದ್ಯಾರ್ಥಿಗಳು ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 