ಪರೀಕ್ಷಾ ಶುಲ್ಕ ಪಾವತಿಯ ಅಂತಿಮ ದಿನಾಂಕ ಮುಂದೂಡಿದ ಬೆಂಗಳೂರು ವಿಶ್ವವಿದ್ಯಾಲಯ
ಬೆಂಗಳೂರು, ಏ.3, ಯುಜಿಸಿಯ ಮಾರ್ಗಸೂಚಿ ಪ್ರಕಾರವಾಗಿ ಬೆಂಗಳೂರು ವಿಶ್ವವಿದ್ಯಾಲಯವು ತನ್ನ ಎಲ್ಲಾ ವಿಭಾಗಗಳಲ್ಲೂ ಆನ್‌ಲೈನ್ ತರಗತಿಯನ್ನು ಯಶಸ್ವಿಯಾಗಿ ನಡೆಸುತ್ತಿದೆ. ಈ ಸಂಬಂಧ ವಿಭಾಗದ ಮುಖ್ಯಸ್ಥರು ತಮ್ಮ ಸಿಬ್ಬಂದಿ ವರ್ಗದೊಂದಿಗೆ ಆನ್ಲೈನ್ ಸಭೆಯನ್ನು ನಡೆಸಿ ತರಗತಿಗಳನ್ನು ನಡೆಸುವಂತೆ ಸೂಚಿಸಿದ್ದಾರೆ. ಇದರಂತೆ ಜೂಮ್ ಎಂಬುವ ತಂತ್ರಾಂಶವನ್ನು ಬಳಸಿಕೊಂಡು ಎಂದಿನಂತೆ ಆನ್‌ಲೈನ್ ಮೂಲಕವೇ ತರಗತಿ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳೂ ಸಹ ಇದಕ್ಕೆ ಅಭೂತಪೂರ್ವ ಪ್ರತಿಕ್ರಿಯೆ ನೀಡಿದ್ದು ಶೇಕಡ 90ರಷ್ಟು ವಿದ್ಯಾರ್ಥಿಗಳು ಈಗಾಗಲೇ ಆನ್‌ಲೈನ್ ತರಗತಿಗೆ ನೋಂದಾಯಿಸಿಕೊಂಡಿದ್ದಾರೆ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಆರ್. ವೇಣುಗೋಪಾಲ್ ತಿಳಿಸಿದ್ದಾರೆ. ಶಿಕ್ಷಕರು ಆನ್‌ಲೈನ್ ಸಾಧನೆಗಳಾದ ಸ್ಕೈಪ್, ಗೂಗಲ್, ಸಿಸ್ಕೊ, ಜೂಮ್, ವೆಬೆಕ್ಸ್ ಮುಂತಾದವುಗಳನ್ನು ಬಳಸಿಕೊಂಡು ಸೆಮಿನಾರ್, ಆನ್‌ಲೈನ್ ಟೆಸ್ಟ್, ಪ್ರಾಜೆಕ್ಟ್ ಹಾಗೂ ಅಸೈನ್ಮೆಂಟ್ ನೀಡುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಕೊರೊನಾದ ಕರಿ ನೆರಳಿನ ಹಿನ್ನೆಲೆಯಲ್ಲಿ ದೇಶಕ್ಕೆ ದೇಶವೇ ಲಾಕ್ ಡೌನ್ ಆದನಂತರ, ಹೋಂ ಕ್ವಾರಂಟೈನಾಗಿದ್ದ ವಿದ್ಯಾರ್ಥಿಗಳು ಮಾನಸಿಕವಾಗಿ ಏಕತಾನತೆ ಮತ್ತು ಖಿನ್ನತೆಗೆ ತುತ್ತಾಗಿದ್ದರು. ಆದರೆ, ತಂತ್ರಜ್ಞಾನದ ಸಹಾಯದಿಂದಾಗಿ ವಿದ್ಯಾರ್ಥಿಗಳು ಆನ್‌ಲೈನ್ ತರಗತಿಯಲ್ಲಿ ಭಾಗವಹಿಸುವ ಮೂಲಕ ಹೊಸ ಚೈತನ್ಯ ಪಡೆದುಕೊಂಡಿದ್ದಾರೆ ಹಾಗೂ ಜೂಮ್ ತಂತ್ರಾಂಶದ ಬಳಕೆ ಸರಳವಾಗಿರುವ ಕಾರಣ ವಿದ್ಯಾರ್ಥಿ ಸ್ನೇಹಿಯಾಗಿದೆ. ಅಷ್ಟೇ ಅಲ್ಲದೆ ಇದರಿಂದ ವಿದ್ಯಾರ್ಥಿ ಮತ್ತು ಶಿಕ್ಷಕರ ನಡುವೆ ಏರ್ಪಟ್ಟಿದ ಅಂತರ ಕುಗ್ಗಿದೆ ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಂಡತಾಗಿದೆ ಎಂದು ವೇಣುಗೋಪಾಲ್ ತಿಳಿಸಿದ್ದಾರೆ.ಗ್ರಾಮೀಣ ಪ್ರದೇಶದಲ್ಲಿನ ಕೆಲವು ವಿದ್ಯಾರ್ಥಿಗಳು ಅಂತರ್ಜಾಲದ ಕುಂಠಿತ ವೇಗ ಮತ್ತು ಕನೆಕ್ಟಿವಿಟಿ ಸಮಸ್ಯೆ ಎದುರಿಸುತ್ತಿದ್ದರು, ಆನ್ಲೈನ್ ತರಗತಿಗೆ ಸಂತಸ ವ್ಯಕ್ತಪಡಿಸಿದ್ದಾರೆ. ಮುಂದಿನ ಎರಡು ವಾರಗಳಲ್ಲಿ ಶಿಕ್ಷಕರು ಮೊದಲಿನ ವೇಳಾಪಟ್ಟಿಯ ಪ್ರಕಾರ ಪಠ್ಯಕ್ರಮವನ್ನು ಪೂರ್ಣಗೊಳಿಸುವ ಭರವಸೆ ಇದೆ. ಬೆಂಗಳೂರು ವಿಶ್ವವಿದ್ಯಾಲಯವು ಪರೀಕ್ಷಾ ಶುಲ್ಕ ಪಾವತಿಯ ಅಂತಿಮ ದಿನಾಂಕವನ್ನು ಮುಂದೂಡಿದ್ದು, ವಿಶ್ವವಿದ್ಯಾಲಯ ಪುನರಾರಂಭಗೊಂಡ ಬಳಿಕ ದಿನಾಂಕವನ್ನು ಪ್ರಕಟಿಸುವುದು. ಅಲ್ಲಿಯ ತನಕ ವಿದ್ಯಾರ್ಥಿಗಳು ಮನೆಯಲ್ಲೇ ಇದ್ದುಕೊಂಡು ತಮ್ಮ ವ್ಯಾಸಂಗದ ಮೇಲೆ ಗಮನ ಹರಿಸಬೇಕು ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಆರ್. ವೇಣುಗೋಪಾಲ್ ತಿಳಿಸಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 