ಬಂಜಾರಾ ಸಂಸ್ಕೃತಿ ಕಾರ್ಯಾಗಾರಕ್ಕೆ ಚಾಲನೆ
Banjara Culture Workshop Inaugurated
ಲೋಕದರ್ಶನ ವರದಿ
ವಿಜಯಪುರ 21:: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಹಾಗೂ ಬಂಜಾರಾ ಸಾಂಸ್ಕೃತಿಕ ಭಾಷಾ ಅಕಾಡೆಮಿ, ಬೆಂಗಳೂರು ಇವರ ಸಹಯೋಗದಲ್ಲಿ ಬಂಜಾರಾ ಯುವಕ-ಯುವತಿಯರಿಗಾಗಿ ಮೂರು ದಿನಗಳ ವಿಶೇಷ ತರಬೇತಿ ಕಾರ್ಯಾಗಾರವನ್ನು ಆಗಸ್ಟ್ 23ರಿಂದ 25ರವರೆಗೆ ಬಾಗಲಕೋಟೆ ನಗರದ ಡಾ. ಬಾಬು ಜಗಜೀವನರಾಮ ಭವನದಲ್ಲಿ ಆಯೋಜಿಸಲಾಗಿದೆ.
ಕಾರ್ಯಾಗಾರದಲ್ಲಿ ಬಂಜಾರಾ ಸಮುದಾಯದ ಹವೇಲಿ, ವಳಂಗ, ವಿತಿ, ಕಸಳಾತ್, ಸಿಕ್ವಾಡಿ, ಡಾವಲೋ, ಹೋಳಿ ಹಾಡುಗಳು, ವಾಂಜಣ, ಮೇರಾ ಗೀತೆ, ವದಾವೋ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಲೆಗಳ ಕುರಿತು ತರಬೇತಿ ನೀಡಲಾಗುತ್ತದೆ.
ಬಂಜಾರಾ ಸಂಸ್ಕೃತಿ ಮತ್ತು ಭಾಷೆಯ ಉಳಿವಿಗಾಗಿ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ಅವಳಿ ಜಿಲ್ಲೆಯ ತಾಂಡಾಗಳ ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ಭಾಷಾ ಅಕಾಡೆಮಿ ಅಧ್ಯಕ್ಷ ಡಾ. ಮೋತಿಲಾಲ್ ರೂ. ಚವಾಣ್ ಹಾಗೂ ಸದಸ್ಯ ಸಂಚಾಲಕ ಆರಿ್ಬ. ನಾಯಕ್ ಮನವಿ ಮಾಡಿದ್ದಾರೆ.
ತರಬೇತಿ ಹಾಗೂ ಕಾರ್ಯಾಗಾರದಲ್ಲಿ ಭಾಗವಹಿಸಲು ಆಸಕ್ತರು ಬಂಜಾರಾ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಸದಸ್ಯ ಸಂಚಾಲಕ ಆರಿ್ಬ. ನಾಯಕ್ ಅವರನ್ನು 9900451688 ಸಂಖ್ಯೆಯಲ್ಲಿ ಸಂಪರ್ಕಿಸಬಹುದು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 