ಬಂಜಾರ ಸಮುದಾಯದ ಮುಖಂಡ ಐ.ಎಸ್. ಪೂಜಾರ ಬಿಜೆಪಿ ಸೇರೆ್ಡ
Banjara community leader I.S. Pujara joins BJP
ಲೋಕದರ್ಶನ ವರದಿ
ಗದಗ 16: ಇಂದು ಗದಗ ನಗರಕ್ಕೆ ಬಿಜೆಪಿಯ ರಾಜ್ಯಾಧ್ಯಕ್ಷರಾದ ಬಿ. ವಾಯ್. ವಿಜಯೇಂದ್ರರವರ ಆಗಮಿಸಿದ್ದರು. ಅವರ ಸಮ್ಮುಖದಲ್ಲಿ ಬಂಜಾರ ಸಮುದಾಯದ ಯುವ ಮುಖಂಡರಾದ ಐ.ಎಸ್.ಪೂಜಾರ ಅವರು ಪ್ರಧಾನಿ ನರೇಂದ್ರ ಮೋದಿಯವರ ಸತತ 12 ವರ್ಷದ ಆಡಳಿತವನ್ನು ಮತ್ತು ಅವರ ದೂರದೃಷ್ಟಿಯ ನಾಯಕತ್ವವನ್ನು ಮೆಚ್ಚಿ ಮತ್ತು ರಾಜ್ಯಾಧ್ಯಕ್ಷರಾದ ಬಿ. ವಾಯ್. ವಿಜಯೇಂದ್ರರವರ ಯುವ ನಾಯಕತ್ವದಲ್ಲಿ ಬಿಜೆಪಿಯು ಉತ್ತುಂಗಕ್ಕೆ ಏರುತ್ತಿರುವದನ್ನು ನೋಡಿ ಅವರ ಮೇಲೆ ನಂಬಿಕೆ ಇಟ್ಟು ಶಿರಹಟ್ಟಿ ಮತಕ್ಷೇತ್ರದಲ್ಲಿ ಬಿಜೆಪಿ ಪಕ್ಷವನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಸಂಘಟಿತಗೊಳಿಸಲು ಅಪಾರ ಬೆಂಬಲಿಗರೊಂದಿಗೆ ಶಿರಹಟ್ಟಿ ಮತಕ್ಷೇತ್ರದ ಮುಖಂಡರೊಂದಿಗೆ ಸಮಾಜದ ಮುಖಂಡರೊಂದಿಗೆ ಬಿಜೆಪಿಗೆ ಸೇರೆ್ಡಗೊಂಡರು. ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶರಣು ತಳ್ಳಿಕೇರಿ, ಶಿರಹಟ್ಟಿ ಬಂಜಾರ ಸಮಾಜದ ಅಧ್ಯಕ್ಷರಾದ ಶಿವಣ್ಣ ಲಮಾಣಿ, ಕಾರ್ಯದರ್ಶಿಯಾದ ಪುಂಡಲೀಕ ಲಮಾಣಿ, ಬಿಜೆಪಿಯ ಮುಖಂಡರಾದ ಥಾವರೆಪ್ಪ ಲಮಾಣಿ, ದೇವಿಹಾಳದ ರೆಡ್ಡಿಯವರು ಉಪಸ್ಥಿತರಿದ್ದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 