ಪಂಚ ಗ್ಯಾರಂಟಿ ಯೋಜನೆಗಳ ಬ್ಯಾನರ್ ಬಿಡುಗಡೆ

ಪಂಚ ಗ್ಯಾರಂಟಿ ಯೋಜನೆಗಳ ಬ್ಯಾನರ್ ಬಿಡುಗಡೆ Banner of five guarantee schemes released


ಚಿತ್ರ ಶಿರ್ಷಿಕೆ: ಸರ್ಕಾರದ ಮಹಾತ್ವಾಂಕ್ಷಿ ಯೋಜನೆಯ ಪಂಚ ಗ್ಯಾರಂಟಿ ಯೋಜನೆಗಳ ಬ್ಯಾನರ್‌ನ್ನು ತಾಲೂಕು ಪಂಚಾಯತ ಸಭಾಂಗಣದಲ್ಲಿ ಗುರುವಾರ ಕರ್ನಾಟಕ ರಾಜ್ಯ ಮಾರ್ಕೆಟಿಂಗ್ ಕಮ್ಯೂನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಏಜೆನ್ಸಿ ಲಿಮಿಟೆಡ್ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಕೆ. ಸೈಲ್ ಬಿಡುಗಡೆಗೊಳಿಸಿದರು. 

ಬಳಿಕ ಮಾತನಾಡಿ, ಈ ಬ್ಯಾನರ್‌ನ್ನು ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರದರ್ಶಿಸಬೇಕು ಎಂದರು.ತಾಲೂಕು ಪಂಚಾಯತ ಆಡಳಿತಾಧಿಕಾರಿ ಸೋಮ ಶೇಖರ್ ಮೇಸ್ತಾ, ಕಾರ್ಯನಿರ್ವಾಹಕ ಅಧಿಕಾರಿ ವೀರನಗೌಡ ಪಿ. ಏನಗಗೌಡರ, ತಹಶಿಲ್ದಾರರು ನಿಶ್ಚಲ್ ನರೋನಾ, ತಾಲೂಕು ಗ್ಯಾರಂಟಿ ಯೋಜನಾ ಸಮಿತಿಯ ತಾಲೂಕು ಅಧ್ಯಕ್ಷ ರಾಜೇಂದ್ರ ರಾಣೆ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.