ಬಾಪೂಜಿ ಪ್ರಬಂಧ ಸ್ಪರ್ಧೆ : ರಾಜ್ಯಮಟ್ಟದಲ್ಲಿ ತೃತೀಯ ಸ್ಥಾನ ಪಡೆದ ನಸೀಮಾಗೆ ಮುಖ್ಯಮಂತ್ರಿಗಳಿಂದ ಬಹುಮಾನ ವಿತರಣೆ

ವಿಜಯಪುರ 03:  ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪದವಿ / ಸ್ನಾತಕೋತ್ತರ ಪದವಿ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದ ವಿಜಯಪುರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ನಸೀಮಾ ಇ.ಚಪ್ಪರಬಂದ ಅವರಿಗೆ ಅಕ್ಟೋಬರ್ 2 ರಂದು  ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ವಾರ್ತಾ ಸೌಧದ ಸುಲೋಚನಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಹಿ 2024, ಟೀಯೆಸ್ಸಾರ್ ಹಾಗೂ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಹುಮಾನ ವಿತರಿಸಿದರು. 

ಮಹಾತ್ಮ ಗಾಂಧೀಜಿಯವರ 155ನೇ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಜಿಲ್ಲಾ ಮಟ್ಟದಲ್ಲಿ ಪ್ರೌಢಶಾಲೆ, ಪದವಿಪೂರ್ವ ಮತ್ತು ಪದವಿ-ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳಿಗಾಗಿ "ಬಾಪೂಜಿ ಪ್ರಬಂಧ ಸ್ಪರ್ಧೆ" ಏರಿ​‍್ಡಸಲಾಗಿತ್ತು. 

ಗಾಂಧೀಜಿಯವರ ತತ್ವಗಳಿಂದ ದೇಶ ಕಟ್ಟುವ ಬಗೆ, ಗಾಂಧೀಜಿ ವಿಚಾರದಲ್ಲಿ ಸತ್ಯಾಗ್ರಹ, ಅಸ್ಪೃಶ್ಯತೆ ನಿವಾರಣೆಗೆ ಗಾಂಧೀಜಿಯವರ ಪ್ರಯೋಗಗಳು, ಗಾಂಧೀಜಿ ಹಾಗೂ ಪ್ರಜಾಪ್ರಭುತ್ವ, ಸ್ವರಾಜ್ ಆರ್ಥಿಕ ಚಿಂತನೆಗಳು, ಸತ್ಯದ ಪರಿಕಲ್ಪನೆ ಮತ್ತಿತರ ವಿಷಯಗಳ ಕುರಿತು ಪ್ರಬಂಧ ಸ್ಪರ್ಧೆ ನಡೆದಿತ್ತು. ರಾಜ್ಯದಾದ್ಯಂತ ಪ್ರೌಢಶಾಲೆ ವಿಭಾಗದಲ್ಲಿ 1,24,392 ವಿದ್ಯಾರ್ಥಿಗಳು, ಪಿಯುಸಿ ವಿಭಾಗದಲ್ಲಿ 12,840 ವಿದ್ಯಾರ್ಥಿಗಳು, ಕಾಲೇಜು ಹಾಗೂ ಸ್ನಾತಕೋತ್ತರ ವಿಭಾಗದಲ್ಲಿ 17,062 ವಿದ್ಯಾರ್ಥಿಗಳು ಸೇರಿ ಒಟ್ಟು 1,54,294 ವಿದ್ಯಾರ್ಥಿಗಳು ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.