ಬೆಂಗಳೂರು, ಮೇ 26, ಕರೋನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸದ್ಯಕ್ಕೆ ಬಾರ್ ಅಂಡ್ ರೆಸ್ಟೋರೆಂಟ್ ತೆರೆಯುವ ಬಗ್ಗೆ ಸರ್ಕಾರ ಯಾವುದೇ ನಿರ್ಧಾರ ಮಾಡಿಲ್ಲ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ. ಆಯುಷ್ ಇಲಾಖೆ ಅಧಿಕಾರಿಗಳು ಮತ್ತು ವೈದ್ಯರೊಂದಿಗಿನ ಸಭೆಯ ನಂತರ ವಿಧಾನಸೌಧದಲ್ಲಿ ಸುದ್ದಿಗಾರರರಿಗೆ ಅವರು ಈವಿಷಯ ತಿಳಿಸಿದರು. ಸದ್ಯಕ್ಕೆ ಬಾರ್ ಅಂಡ್ ರೆಸ್ಟೋರೆಂಟ್ ತೆರೆಯುವ ಬಗ್ಗೆ ಯಾವುದೇ ತೀರ್ಮಾನ ಮಾಡಿಲ್ಲ ಮಂದೆ ಪರಿಸ್ಥಿತಿ ನೋಡಿಕೊಂಡು ತೀರ್ಮಾನ ತೆಗೆದುಕೊಳ್ಳುಲಾಗುವುದು ಎಂದು ಹೇಳಿದರು.
ಅಲೋಪತಿ ಡಾಕ್ಟರ್ ಜೊತೆಗೆ ಆಯೂಷ್ ಇಲಾಖೆ ವೈದ್ಯರು ಸಹ ವೇತನ ಹೆಚ್ಚಳ ಮಾಡಬೇಕು ಎಂದು ಒತ್ತಾಯ ಮಾಡಿದ್ದಾರೆ ಅಲೋಪತಿ ಗುತ್ತಿಗೆ ವೈದ್ಯರಿಗೆ ಯಾವ ಆಧಾರದ ಮೇಲೆ ವೇತನ ಹೆಚ್ಚಿಸಲಾಗಿದೆಯೋ ಅದೇ ಮಾನದಂಡ ದ ಆಧಾರದ ಮೇಲೆ ಆಯುಷ್ ವೈದ್ಯರಿಗೂ ಸಹ ವೇತನ ಹೆಚ್ಚಿಸಲು ನಿರ್ಧರಿಸಲಾಗಿದೆ ಮೇಲಾಗಿ ಆಯುಷ್ ಯುಜಿ ಮತ್ತು ಪಿಜಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹೆಚ್ಚಿಸಲು ಸಹ ತೀರ್ಮಾನಿಸಲಾಗಿದೆ ಎಂದರು. ವೈದ್ಯರನ್ನು ನೇಮಕಾತಿ ಮಾಡಿಕೊಳ್ಳುವ ಮಾದರಿಯಲ್ಲಿ ಎರಡು ಸಾವಿರ ಆಯುಷ್ ವೈದ್ಯರನ್ನು ಸಹ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ.ರಾಜ್ಯಾದ್ಯಂತ ಮುಷ್ಕರ ನಡೆಸುತ್ತಿದ್ದ ಆಯುಷ್ ಇಲಾಖೆ ವೈದ್ಯರು ಮತ್ತು ಸಿಬ್ಬಂದಿ ವರ್ಗದ ಕುಂದು ಕೊರತೆ ಹಾಗೂ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕರೆದಿದ್ದ ಸಭೆ ಯಶಸ್ವಿ ಆಗಿದೆ ಸಿಬ್ಬಂದಿ ಸಹ ಮುಷ್ಕರ ವಾಪಸ್ ಪಡೆಯಲು ಸಮ್ಮತಿಸಿದ್ದಾರೆ ಎಂದೂ ಸಚಿವ ರಾಮುಲು ಹೇಳಿದರು.