ಬೆಂಗಳೂರು, ಅ. 16: ಅಲಯನ್ಸ್ ವಿಶ್ವವಿದ್ಯಾಲಯ ಸದಸ್ಯರೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಆನೇಕಲ್ ಹತ್ತಿರವಿರುವ ಅಲಯನ್ಸ್ ವಿಶ್ವವಿದ್ಯಾಲಯ ಸದಸ್ಯ ಅಯ್ಯಪ್ಪ ದೊರೆ, ನಿನ್ನೆ ರಾತ್ರಿ ಮನೆಯಿಂದ ವಾಕಿಂಗ್ ಹೋಗಿದ್ದರು.
ಬಹಳ ಹೊತ್ತಾದರೂ ಮರಳಿ ಮನೆಗೆ ವಾಪಸ್ಸಾಗದ ಹಿನ್ನೆಲೆಯಲ್ಲಿ ಆತಂಕಗೊಂಡ ಕುಟುಂಬಸ್ಥರು ಹುಡುಕಾಟ ನಡೆಸಿದಾಗ ದುಷ್ಕರ್ಮಿಗಳು ಅವರನ್ನು ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ಆರ್ ಟಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.