ಪ್ರಜಾಪ್ರಭುತ್ವಕ್ಕೆ ಬಸವ ತತ್ವಗಳೇ ಮಾರ್ಗದರ್ಶನ: ಡಾ. ಮೈತ್ರೇಯಿಣಿ ಗಡಿಗೆಪ್ಪಗೌಡರ
Basava's principles guide democracy: Dr. Maitreyini Gadigeppagoudar
ಬೆಳಗಾವಿ: ಪ್ರಜಾಪ್ರಭುತ್ವದ ದೇಶದಲ್ಲಿ ಜನಪ್ರತಿನಿಧಿಗಳು ಹಾಗೂ ಜನರು ಹೇಗೆ ಬದುಕಬೇಕು ಎಂಬುದಕ್ಕೆ 12ನೇ ಶತಮಾನದ ಬಸವಾದಿ ಶರಣರು ಮಾರ್ಗದರ್ಶನ ನೀಡಿದ್ದಾರೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯೆ ಡಾ. ಮೈತ್ರೇಯಿಣಿ ಗಡಿಗೆಪ್ಪಗೌಡರ ಹೇಳಿದರು.
ನಗರದ ಶಿವಬಸವ ನಗರದ ಕಾರಂಜಿ ಮಠದಲ್ಲಿ ನಡೆದ ಮಾಸಿಕ ಶಿವಾನುಭವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು "ಬಸವಾದಿ ಶರಣರು ಕಟ್ಟಿದ ಮಾನವತಾ ಧರ್ಮ" ವಿಷಯದ ಕುರಿತು ಉಪನ್ಯಾಸ ನೀಡಿದ ಅವರು, ಸಕಲ ಜೀವಾತ್ಮರ ಒಳಿತನ್ನೇ ಬಯಸಿದ ಬಸವಾದಿ ಶರಣರು ವರ್ಣ, ಜಾತಿ, ಲಿಂಗ ಹಾಗೂ ವರ್ಗಭೇದಗಳನ್ನು ತೊರೆದು ಅಹಿಂಸೆ, ಸಮಾನತೆ ಮತ್ತು ಮಾನವೀಯತೆಯ ಸಂದೇಶವನ್ನು ಸಾರಿದರು ಎಂದು ತಿಳಿಸಿದರು.
ಕಾರಂಜಿ ಮಠದ ಗುರುಸಿದ್ಧ ಮಹಾಸ್ವಾಮಿಗಳು ಮಾತನಾಡಿ, ಜಗತ್ತಿನಲ್ಲಿ ದಯೆಯಿಲ್ಲದ ಧರ್ಮ ಯಾವುದೂ ಇಲ್ಲ. ಎಲ್ಲ ಧರ್ಮಗಳಲ್ಲಿಯೂ ದಯೆಗೆ ವಿಶೇಷ ಸ್ಥಾನವಿದ್ದು, ಬಸವ ಧರ್ಮದಲ್ಲಿ ‘ದಯೆಯೇ ಧರ್ಮದ ಮೂಲ’ ಎಂಬ ತತ್ವಕ್ಕೆ ಅತ್ಯಂತ ಮಹತ್ವ ನೀಡಲಾಗಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ವಚನೋತ್ಸವ ತರಬೇತಿ ನೀಡಿದ ಕೆ.ಎಲ್.ಇ. ಸಂಸ್ಥೆಯ ಸಂಗೀತ ವಿದ್ಯಾಲಯದ ಪ್ರಾಧ್ಯಾಪಕಿ ಡಾ. ಸುನಿತಾ ಪಾಟೀಲ, ಸುಜಾತ ಕಲ್ಮೇಶ, ನಯನಾ ಗಿರಿಗೌಡರ ಹಾಗೂ ಸಹನಾ ಭೋಗಾರ ಅವರನ್ನು ಕಾರಂಜಿ ಮಠದ ವತಿಯಿಂದ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಜಿಲ್ಲಾ ಘಟಕದ ಅಧ್ಯಕ್ಷೆ ರತ್ನಪ್ರಭಾ ಬೆಳ್ಳದ, ಸಹಕಾರಿ ಧುರೀಣೆ ಶೈಲಜಾ ಭಿಂಗೆ, ಶ್ರೀರಂಗ ಜೋಶಿ, ವಿ.ವಿ. ದೊಡ್ಡಮನಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ಪ್ರಾಧ್ಯಾಪಕ ಎ.ಕೆ. ಪಾಟೀಲ ಸ್ವಾಗತಿಸಿ, ನಿರೂಪಿಸಿದರು. ಕಾರಂಜಿ ಮಠದ ಕುಮಾರೇಶ್ವರ ಸಂಗೀತ ಪಾಠಶಾಲೆಯ ವಿದ್ಯಾರ್ಥಿಗಳು ವಚನ ಪ್ರಾರ್ಥನೆ ನಡೆಸಿದರು. ನ್ಯಾಯವಾದಿ ವಿ.ಕೆ. ಪಾಟೀಲ ವಂದಿಸಿದರು.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 