ಚಾರಿಟೇಬಲ್ ಆಸ್ಪತ್ರೆಯಲ್ಲಿ ಬಸವ ಜಯಂತಿ ಆಚರಣೆ
Basava Jayanti celebration at Charitable Hospital
ಲೋಕದರ್ಶನ ವರದಿ
ಬೆಳಗಾವಿ 23: ಕೆ.ಎಲ್.ಇ ಶತಮಾನೋತ್ಸವ ಚಾರೀಟೆಬಲ್ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರ ಯಳ್ಳೂರ ರಸ್ತೆ ಬೆಳಗಾವಿಯಲ್ಲಿ ಬಸವ ಜಯಂತಿಯನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ.ಸಂಜಯ ಕಂಬಾರ ಮಾತನಾಡಿ ಬಸವಣ್ಣರ ಸಮಾನತೆ, ಸತ್ಯ, ಸೇವಾ ಸಂದೇಶಗಳು ಇಂದಿಗೂ ಪ್ರತಿಯೊಬ್ಬರ ಜೀವನಕ್ಕೆ ಮಾರ್ಗದರ್ಶಕವಾಗಿವೆ” ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಮತ್ತು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಮಾನವೀಯ ಮೌಲ್ಯಗಳ ಬೆಳವಣಿಗೆಗೆ ಬಸವಣ್ಣನವರ ಸಂದೇಶಗಳು ಸದಾ ಪ್ರೇರಣೆಯಾಗಿವೆ ಕಾರ್ಯಕ್ರಮ ಕುರಿತು ಮಾತನಾಡಿದರು.
ಕಾರ್ಯಕ್ರಮದ ಆರಂಭದಲ್ಲಿ ಜಗಜ್ಯೋತಿ ಬಸವೇಶ್ವರರ ಭಾವಚಿತ್ರಕ್ಕೆ ಪುಸ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಲಾಯಿತು. ಬಳಿಕ ಬಸವಣ್ಣನವರ ಜೀವನ ಮೌಲ್ಯಗಳು, ಸಮಾಜ ಸುಧಾರಣೆಯಲ್ಲಿ ಅವರ ಕೊಡುಗೆ, ಸಮಾನತೆ, ಕಾಯಕ ಮತ್ತು ದಾಸೋಹ ತತ್ವಗಳ ಕುರಿತು ಆಸ್ಪತ್ರೆಯ ಆಡಳಿತ ಅಧಿಕಾರಿ ಶ್ರೀ. ನವೀಣ ಎನ್ ಮಾತನಾಡಿದರು.
ಯು.ಎಸ್.ಎಂ ಕೆ.ಎಲ್.ಇ ನಿರ್ದೇಶಕರಾದ ಡಾ.ಎಚ್.ಬಿ ರಾಜಶೇಖರ ಮಾತನಾಡುತ್ತ, ಬಸವಣ್ಣ ಹಿತವಚನಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುಂದಿನ ಪೀಳಿಗೆಗಳಿಗೆ ಮಾರ್ಗದರ್ಶಕರಾಗಿ ಎಂದು ಹೇಳುತ್ತ, ಎಲ್ಲ ಸಿಬ್ಬಂದಿಗಳಿಗೆ ಶುಭಾಶಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯರು, ನಸಿಂರ್ಗ್ ಸಿಬ್ಬಂದಿ, ಆಡಳಿತ ಸಿಬ್ಬಂದಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಪ್ರಭಾವತಿ ತೇಗೂರ ನಿರೂಪಿಸಿ ವಂದಿಸಿದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 