ಗ್ರಂಥಾಲಯದಲ್ಲಿ ಬಸವ ಜಯಂತಿ ಆಚರಣೆ
Basava Jayanti celebration at the library
ಲೋಕದರ್ಶನ ವರದಿ
ಕೊಪ್ಪಳ 21: ನಗರದ ಗಣೇಶ ನಗರದ ಮುಖ್ಯ ಶಾಖೆಯಲ್ಲಿ ಹಾಗೂ ಎನ್.ಜಿ.ಓ ಕಾಲೋನಿಯ ಮುಖ್ಯ ಗ್ರಂಥಾಲಯಾಧಿಕಾರಿ ಕಛೇರಿಯಲ್ಲಿ ಸೋಮವಾರ ಬಸವ ಜಯಂತಿ ಆಚರಿಸಲಾಯಿತು. ಗಣೇಶ ನಗರದ ಶಾಖೆಯಲ್ಲಿ ಓದುಗರೊಂದಿಗೆ ಆಚರಿಸಿದರೆ, ಜಿಲ್ಲಾ ಕೇಂದ್ರ ಗ್ರಂಥಾಲಯದ ಕಛೇರಿಯಲ್ಲಿ ಮುಖ್ಯ ಗ್ರಂಥಾಲಯಾಧಿಕಾರಿ ಯಮನೂರ್ಪ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಪುಷ್ಪ ನಮನ ಸಲ್ಲಿಸಿದ ಬಳಿಕ ಮಾತನಾಡಿ ಬಸವಣ್ಣ ಕರ್ನಾಟಕ ಅಷ್ಟೇ ಅಲ್ಲ ಇಡೀ ಮನುಕುಲಕ್ಕೆ ಸಕಾರಾತ್ಮಕ ಹಾದಿಯಲ್ಲಿ ಬದುಕಲು ನೆರವಾಗುವಂತ ವಚನಗಳನ್ನು ಕೊಟ್ಟಿದ್ದಾರೆ. ಎಲ್ಲರೂ ವಚನಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಬದುಕುವುದೆ ನಾವು ಮಹನೀಯರಿಗೆ ಸಲ್ಲಿಸುವ ಗೌರವ ಎಂದರು. ಕಾರ್ಯಕ್ರಮದಲ್ಲಿ ಸಿಬ್ಬಂದಿಗಳಾದ ವಿಜಯಲಕ್ಷ್ಮೀ ವಡ್ಡಟ್ಟಿ, ವಿರೇಶ ಮಜ್ಗಿ, ಉಮಾ ಹಳ್ಯಾಳ, ಇದ್ದರು ನಾಗರಾಜನಾಯಕ ಡಿ.ಡೊಳ್ಳಿನ ನಿರೂಪಿಸಿದರು ಬಿ.ಕೊಟ್ರ್ಪ ವಂದಿಸಿದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 