ಬಸವ ಪಟ ಆರೋಹಣ: ಶ್ರೀ ಗವಿಮಠಜಾತ್ರೆಗೆ ವಿದ್ಯುಕ್ತವಾಗಿ ಚಾಲನೆ
Basava Pata Arohana: Sri Gavi Matha Jatra officially kicks off
ಕೊಪ್ಪಳ 01 : ನಗರದ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ದಿನಾಂಕ 01-01-2026 ರಂದು ಗುರುವಾರ ಮಧ್ಯಾಹ್ನ 2;00ಗಂಟೆಗೆ ಬಸವಪಟ ಆರೋಹಣ ಮೂಲಕ ಜಾತ್ರೆಯ ಸಕಲ ಕಾರ್ಯಕ್ರಮಗಳಿಗೆ ವಿದ್ಯುಕ್ತವಾಗಿ ಚಾಲನೆ ದೊರೆಯಿತು. ಇಂದು ಶ್ರೀಗವಿಮಠದ ಕರ್ತೃಗದ್ದುಗೆಯ ಮುಂಭಾಗದಲ್ಲಿ ‘ಬಸವ ಪಟ ಆರೋಹಣ’ ಎಂಬ ಧಾರ್ಮಿಕ ಕಾರ್ಯಕ್ರಮವೂ ಜರುಗಿತು. ಭಕ್ತರೆಲ್ಲರೂ ಕೂಡಿಕೊಂಡು ನಂದಿ, ಈಶ್ವರ, ಸೂರ್ಯ, ಚಂದ್ರ, ವರುಣ, ಪ್ರಣವ ಮಂತ್ರವಿರುವ ಬಸವಪಟಕ್ಕೆ ಭಕ್ತರು ಪೂಜೆ ಸಲ್ಲಿಸಿ, ನೈವೇದ್ಯ ಮಾಡಿ ಆ ಬಳಿಕ ಅದನ್ನು ಶ್ರದ್ಧೆಯಿಂದ ಕೈಯಲ್ಲಿ ಹಿಡಿದು ಶ್ರೀ ಗವಿಮಠದ ಕರ್ತೃ ಗದ್ದುಗೆಯ ಸುತ್ತ ಐದು ಸಾರಿ ಪ್ರದಕ್ಷಿಣೆ- ಹಾಕುತ್ತಾ ಗವಿಸಿದ್ಧೇಶ್ವರನ ಜಯಘೋಷಗಳೊಂದಿಗೆ ಕರ್ತೃಗದ್ದುಗೆಯ ಮುಂಭಾಗದ ಎದುರಿಗಿರುವ ಶಿಲಾಸ್ತಂಭಕ್ಕೆ್ಕೆ ಬಸವಪಟವನ್ನುಆರೋಹಣಗೊಳಿಸಿದರು.
ಬಸವಪಟ ಆರೋಹಣ ಮಾಡುವಉದ್ದೇಶ: ನಮ್ಮದು ಕೃಷಿ ಪ್ರಧಾನ ನಾಡು.ಆಕಾರಣಕ್ಕಾಗಿ ನಂದಿ, ಈಶ್ವರ, ಸೂರ್ಯ, ಚಂದ್ರ, ವರುಣ, ಪೃಕೃತಿ ಇವುಗಳಿಗೆ ಪೂಜೆ ಸಲ್ಲಿಸುವದು ನಮ್ಮ ಪ್ರಥಮ ಕರ್ತವ್ಯವಾಗಿದೆ. ಶ್ರೀ ಗವಿಸಿದ್ಧನ ಸನ್ನಿಧಿಯ ಈ ನಾಡಿನಲ್ಲಿ ಸದಾಕಾಲ ಉತ್ತಮ ಮಳೆ, ಉತ್ತಮ ಬೆಳೆ ಬಂದುರೈತಾಪಿ ವರ್ಗಕ್ಕೆ ಸುಖ, ಶಾಂತಿ, ಸಮೃದ್ಧಿ ಸದಾದೊರೆಯಲೆಂಬ ಆಶಯಕ್ಕಾಗಿ ‘ಬಸವಪಟ ಆರೋಹಣ’ ಕಾರ್ಯಕ್ರಮವು ಜರುಗುತ್ತದೆ. ಶ್ರೀಮಠದ ಜಾತ್ರಾ ಪರಂಪರೆಯಲ್ಲಿ ಬಸವ ಪಟ ಆರೋಹಣ ಕಾರ್ಯಕ್ರಮದ ಮೂಲಕವೇ ಜಾತ್ರೆಗೆ ವಿದ್ಯುಕ್ತವಾಗಿ ಚಾಲನೆ ಸಿಕ್ಕಂತಾಗುತ್ತದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 