ಬಸವಾದಿ ಶರಣರ ಹಿಂದೂ ಸಮಾವೇಶಕ್ಕೆ ಅನುಮತಿ ನೀಡಬಾರದು: ಬಸವ ಪರ ಸಂಘಟನೆಗಳ ಒತ್ತಾಯ
Basavadi Sharanar's Hindu gathering should not be allowed: Pro-Basava organizations insist
ಲೋಕದರ್ಶನ ವರದಿ
ಬೆಳಗಾವಿ 24: ಬಸವ ಕಲ್ಯಾಣದಲ್ಲಿ ಜೂನ್ 28ರಂದು ನಡೆಯಲಿರುವ ‘ಬಸವಾದಿ ಶರಣರ ಹಿಂದೂ ಸಮಾವೇಶ’ಕ್ಕೆ ಅನುಮತಿ ನೀಡಬಾರದು ಹಾಗೂ ಕಾರ್ಯಕ್ರಮವನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಬಸವಪರ ಸಂಘಟನೆಗಳ ಒಕ್ಕೂಟವು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಮನವಿಯಲ್ಲಿ, ಕೆಲವು ಧಾರ್ಮಿಕ ಮುಖಂಡರು ಲಿಂಗಾಯತ ಸಮಾಜ, ಬಸವಾದಿ ಶರಣರು ಹಾಗೂ ಮಠಾಧೀಶರ ಕುರಿತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿರುವುದಾಗಿ ಆರೋಪಿಸಿ, ಇಂತಹ ಹಿನ್ನೆಲೆಯಲ್ಲೇ ಬಸವಕಲ್ಯಾಣದಲ್ಲಿ ಸಮಾವೇಶ ಆಯೋಜನೆ ಮಾಡುವುದು ಸಮಾಜದಲ್ಲಿ ಗೊಂದಲ ಮತ್ತು ಅಶಾಂತಿಗೆ ಕಾರಣವಾಗಬಹುದು ಎಂದು ತಿಳಿಸಲಾಗಿದೆ.
ಬಸವಣ್ಣನವರ ಕಾರ್ಯಭೂಮಿಯಾಗಿರುವ ಬಸವಕಲ್ಯಾಣವು ಅನುಭವ ಮಂಟಪದ ನೆಲೆಯಾಗಿದ್ದು, ಅಲ್ಲಿ ನಡೆಯಲಿರುವ ಈ ಸಮಾವೇಶವು ಬಸವ ತತ್ವಗಳಿಗೆ ವಿರುದ್ಧವಾಗಿದೆ ಎಂದು ಸಂಘಟನೆಗಳ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ. ಕಾರ್ಯಕ್ರಮದಿಂದ ಕೋಮು ಸೌಹಾರ್ದತೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಇರುವುದರಿಂದ ಸರ್ಕಾರ ಮಧ್ಯಪ್ರವೇಶಿಸಿ ಅನುಮತಿ ನಿರಾಕರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸಲ್ಲಿಸಲಾದ ಮನವಿಯಲ್ಲಿ ರಾಜ್ಯದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಸಾಮಾಜಿಕ ಸಾಮರಸ್ಯ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.ಮನವಿ ಸಲ್ಲಿಕೆ ಸಂದರ್ಭದಲ್ಲಿ ಜಾಗತಿಕ ಲಿಂಗಾಯತ ಮಹಾಸಭೆ ಜಿಲ್ಲಾಧ್ಯಕ್ಷ ಬಸವರಾಜ ರೊಟ್ಟಿ , ಪ್ರಧಾನ ಕಾರ್ಯದರ್ಶಿ ಅಶೋಕ್ ಮಳಗಲಿ ನಗರ ಅಧ್ಯಕ್ಷ ಎಸ್ಸಿ.ಜಿ.ಸಿದ್ನಾಳ, ರಾಷ್ಟ್ರೀಯ ಬಸವದಳ, ಲಿಂಗಾಯತ ಕ್ಷೇಮಾಭಿವೃದ್ಧಿ ಸಂಘ ಸೇರಿದಂತೆ ವಿವಿಧ ಬಸವಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 