ಬಸವನ ಬಾಗೇವಾಡಿಗೆ ಹೆಚ್ಚಿನ ಆದ್ಯತೆ ಅಗತ್ಯ: ಶಿವಾನಂದ ಪಾಟೀಲ
Basavana Bagewadi Needs Greater Priority: Shivanand Patil
ಕೊಲ್ಹಾರ 03: ಬಸವಣ್ಣನ ಜನ್ಮಸ್ಥಳವಾದ ಬಸವನ ಬಾಗೇವಾಡಿಯ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿ ಅಗತ್ಯ ಅನುದಾನ ಒದಗಿಸಬೇಕು. ಬಸವಕಲ್ಯಾಣ ಹಾಗೂ ಕೂಡಲಸಂಗಮಕ್ಕೆ ನೀಡುವ ಮಹತ್ವವನ್ನು ಬಸವನ ಬಾಗೇವಾಡಿಗೂ ನೀಡುವ ಅಗತ್ಯವಿದೆ ಎಂದು ಶಾಸಕ ಶಿವಾನಂದ ಪಾಟೀಲ ಹೇಳಿದರು. ತಾಲ್ಲೂಕಿನ ಮಸೂತಿ ಗ್ರಾಮದಲ್ಲಿ ಮಂಗಳವಾರ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ರೂ.70 ಲಕ್ಷ ವೆಚ್ಚದಲ್ಲಿ ಗಣಪತಿ ವೃತ್ತದಿಂದ ವೀರಭದ್ರೇಶ್ವರ ದೇವಸ್ಥಾನದವರೆಗೆ ನಿರ್ಮಿಸಲಾಗುವ ಸಿಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಬಸವಣ್ಣನ ಜನ್ಮಸ್ಥಳದ ಅಭಿವೃದ್ಧಿ ವಿಚಾರದಲ್ಲಿ ಸರ್ಕಾರ ಮೀನಮೇಷ ಎಣಿಸದೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು. ಮುಂದಿನ ದಿನಗಳಲ್ಲಿ ಬಸವನ ಬಾಗೇವಾಡಿಗೆ ಹೆಚ್ಚಿನ ಆದ್ಯತೆ ದೊರೆಯುವಂತೆ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು. ಮಸೂತಿ ಗ್ರಾಮವು ಶೈಕ್ಷಣಿಕ ಕ್ಷೇತ್ರದ ಹರಿಕಾರ ಬಂಥನಾಳ ಶಿವಯೋಗಿಗಳನ್ನು ನಾಡಿಗೆ ನೀಡಿದ ಹೆಗ್ಗಳಿಕೆ ಹೊಂದಿದೆ. ನೀರಾವರಿ ಹಾಗೂ ವಿದ್ಯುತ್ ಉತ್ಪಾದನೆಗಾಗಿ ಗ್ರಾಮಸ್ಥರು ತಮ್ಮ ಫಲವತ್ತಾದ ಜಮೀನುಗಳನ್ನು ತ್ಯಾಗ ಮಾಡಿದ್ದಾರೆ. ಇಂತಹ ತ್ಯಾಗಮಯ ಗ್ರಾಮಸ್ಥರ ಅಭಿವೃದ್ಧಿ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.
ಆಲಮಟ್ಟಿ ಆಣೆಕಟ್ಟು ವಿಚಾರದ ವ್ಯಾಜ್ಯ ಸುಪ್ರೀಂ ಕೋರ್ಟ್‌ನಲ್ಲಿ ಇತ್ಯರ್ಥವಾದರೆ 100 ಟಿಎಂಸಿ ನೀರಿನಲ್ಲಿ ಸುಮಾರು 80 ಟಿಎಂಸಿ ನೀರು ಜಿಲ್ಲೆಗೆ ದೊರೆಯಲಿದೆ. ಕಳೆದ ಎರಡು ದಶಕಗಳಲ್ಲಿ ಕ್ಷೇತ್ರದ ನೀರಾವರಿ ವ್ಯಾಪ್ತಿ ಗಣನೀಯವಾಗಿ ಹೆಚ್ಚಿದೆ. ಹಿಂದೆ 9ರಿಂದ 11 ಹೆಕ್ಟೇರ್‌ನಷ್ಟಿದ್ದ ನೀರಾವರಿ ಪ್ರದೇಶ ಇದೀಗ 99 ಹೆಕ್ಟೇರ್ ಗಡಿ ತಲುಪಿದೆ. ಕ್ಷೇತ್ರದ ಬಹುತೇಕ ರಸ್ತೆಗಳ ಅಭಿವೃದ್ಧಿ ಕೈಗೊಳ್ಳಲಾಗಿದೆ. ರೈತರ ಹೊಲಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಸಮಸ್ಯೆಯನ್ನೂ ಹಂತ ಹಂತವಾಗಿ ಬಗೆಹರಿಸಲಾಗುವುದು ಎಂದರು.
ಕಾಂಗ್ರೆಸ್ ಧುರೀಣ ತಾನಾಜಿ ನಾಗರಾಳ, ವೀರೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಸಂತೋಷ ಗಣಾಚಾರಿ ಮಾತನಾಡಿದರು. ತಹಸೀಲ್ದಾರ ಸಂತೋಷ ಮ್ಯಾಗೇರಿ, ತಾಪಂ ಇಒ ಸುನಿಲ ಮದ್ದಿನ, ಪಿಎಸ್‌ಐ ಮಲ್ಲಿಕಾರ್ಜುನ ತಳವಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಫೀಕ ಪಕಾಲಿ, ಬಸವರಾಜ ಸಾಲಳ್ಳಿ, ಸಿ.ಪಿ. ಪಾಟೀಲ, ಕೆ.ವಿ. ಕುಲಕರ್ಣಿ, ಬಸವರಾಜಗೌಡ ಪಾಟೀಲ, ರಾಜು ಬಿಸ್ಟಗೊಂಡ, ಡಾ.ವೈ.ಕೆ. ಹೂಗಾರ, ಶಿವನಗೌಡ ಪಾಟೀಲ, ಗುರುಶಾಂತಪ್ಪ ಸಾಲಳ್ಳಿ, ಗುರ್ಪ ಕಾಗಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 