ಹೂವಿನಹಡಗಲಿಯಲ್ಲಿ ಬಸವಣ್ಣನವರ ಜಯಂತಿ
Basavanna's birthday in a flower boat
ಲೋಕದರ್ಶನ ವರದಿ
ಹೂವಿನಹಡಗಲಿ 21: 12ನೇ ಶತಮಾನದಲ್ಲಿ ಶರಣರ ಚಿಂತನ-ಮಂಥನಗಳಲ್ಲಿ ಶೋಷಿತರ ಧ್ವನಿಯಾಗಿ, ಸಮ ಸಮಾಜ ನಿರ್ಮಾಣಕ್ಕೆ ಬಸವಣ್ಣ ಶ್ರಮಿಸಿದ್ದಾರೆ ಎಂದು ಮಾಡಿದ್ದಾರೆಂದು ಶಾಸಕ ಕೃಷ್ಣನಾಯ್ಕ ಹೇಳಿದರು.ಇಲ್ಲಿನ ಹಿರೇಮಲ್ಲಕೆರೆ ಮಠದಲ್ಲಿ ತಾಲೂಕು ಆಡಳಿತ, ಅಖಿಲ ಭಾರತ ವೀರಶೈವ ಮಹಾಸಭಾ ಸಹಯೋಗದಲ್ಲಿ ಆಯೋಜಿಸಿದ್ದ ಬಸವಣ್ಣನವರ 893ನೇ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್ ಕೆ.ಎಂ. ಗುರುಬಸವರಾಜ ಮಾತನಾಡಿದರು.ಅಖಿಲ ವೀರಶೈವ ಮಹಾಸಭಾ ನಗರ ಘಟಕದ ಅಧ್ಯಕ್ಷ ಉಮೇಶ ಮುಂಡವಾಡ, ಪ್ರಾಚಾರ್ಯಡಾ.ಬಸವರಾಜ ಟಿ.ಎಚ್. ಮಾತನಾಡಿದರು. ಸಾನಿಧ್ಯವನ್ನು ಗವಿಸಿದ್ದೇಶ್ವರ ಮಠದ ಡಾ.ಹಿರಿಶಾಂತವೀರಸ್ವಾಮೀಜಿ, ಹಿರೇಮಲ್ಲನಕೆರೆ ಮಠದ ಅಭಿನವ ಚೆನ್ನಬಸವಸ್ವಾಮೀಜಿ, ಶ್ರೀರಾಮ ದೇವರ ದೇವಸ್ಥಾನದ ಧರ್ಮದರ್ಶಿ ರಾಕೇಶಯ್ಯ ರಾಮಸ್ವಾಮಿ ವಹಿಸಿದ್ದರು.ಪ್ರವಚನಕಾರ ಶೇಖರಯ್ಯ, ಕೋಡಿಹಳ್ಳಿ ಮುದುಕಪ್ಪ, ಬಿ.ಬಿ.ಅಸುಂಡಿ, ಬಸೆಟ್ಟಿ ಸಿದ್ದೇಶ, ರಾಜಣ್ಣ, ಸೊಪ್ಪಿನ ಮಂಜುನಾಥ ಇದ್ದರು.ಇದಕ್ಕೂ ಮುನ್ನ ಪಟ್ಟಣದ ಮುಖ್ಯ ರಸ್ತೆಯಲ್ಲಿ ಮಂಗಳ ವಾದ್ಯಗಳೊಂದಿಗೆ, ಬಸವಣ್ಣನವರ ಭಾವಚಿತ್ರವನ್ನು ಮೆರವಣಿಗೆ ಮಾಡಲಾಯಿತು.
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್ 