ಬಸವಣ್ಣನವರ ತತ್ವಾದರ್ಶಗಳು ನಮ್ಮೆಲ್ಲರಿಗೆ ದಾರಿ ದೀಪ
Basavanna's philosophies are a guiding light for all of us.
ಕಂಪ್ಲಿ 10: ಸಮಾಜದಲ್ಲಿನ ಅಸಮಾನತೆ ವಿರೋಧಿಸಿ ಸಾಮಾಜಿಕ ಕ್ರಾಂತಿಯನ್ನೇ ಹುಟ್ಟು ಹಾಕಿದ ಮಹಾನ್ ಮಾನವತಾವಾದಿ ಬಸವಣ್ಣನವರ ತತ್ವಾದರ್ಶಗಳು ನಮ್ಮೆಲ್ಲರ ಜೀವನಕ್ಕೆ ದಾರಿ ದೀಪವಾಗಿದೆ ಎಂದು ಘಟಕಾಧಿಕಾರಿ ಕೆ.ಹೊನ್ನೂರವಲಿ ಹೇಳಿದರು.
ಇಲ್ಲಿನ ಗೃಹ ರಕ್ಷಕದಳದ ಕಛೇರಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಶಿವಶರಣ ಬಸವಣ್ಣನವರ ಜಯಂತಿಯಲ್ಲಿ ಮಾತನಾಡಿ, ಕಾಯಕವೇ ಕೈಲಾಸ ಎನ್ನುವ ತತ್ವದಲ್ಲಿ ಕಾಯಕ ನಿಷ್ಠೆಗೆ ಪ್ರಾಧಾನ್ಯತೆ ನೀಡಿ ಪ್ರತಿಯೊಬ್ಬರಲ್ಲೂ ವತ್ತಿ ಗೌರವ ಬೆಳೆಸಿದ ಕೀರ್ತಿಯೂ ಕಾಯಕ ಯೋಗಿ ಬಸವಣ್ಣನವರಿಗೆ ಸಲ್ಲುತ್ತದೆ. ಬಸವಣ್ಣನವರು ಮನುಕುಲದ ಶ್ರೇಯಸ್ಸಿಗಾಗಿ ಅವಿರತ ಹೋರಾಟ ನಡೆಸುವ ಮೂಲಕ ಸಮಾನತೆಯ ಸಾಮಾಜಿಕ ಕ್ರಾಂತಿಯನ್ನು ಜನಮಾನಸದಲ್ಲಿ ಬೆಳೆಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಅವರ ತತ್ವ, ಆದರ್ಶಗಳು ಇಂದಿಗೂ ಜನ ಮಾನ್ಯತೆಯನ್ನು ಪಡೆದುಕೊಳ್ಳುತ್ತಿವೆ ಎಂದರು. ಈ ಸಂದರ್ಭದಲ್ಲಿ ಮಾಜಿ ಘಟಕಾಧಿಕಾರಿ ಹೆಚ್.ಗಿರಿಧರ, ಲೀಡರ್ ಕೆ.ಸುರೇಶ ಸೇರಿದಂತೆ ಸಿಬ್ಬಂದಿ ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 