ಶ್ರದ್ಧಾಭಕ್ತಿಯಿಂದ ಜರುಗಿದ ಬಸವಣ್ಣ-ವೀರಭದ್ರೇಶ್ವರ ರಥೋತ್ಸವ!
Basavanna-Veerabhadreshwara chariot festival celebrated with devotion!
ಲೋಕದರ್ಶನ ವರದಿ
ಮುಂಡಗೋಡ 28 : ಪಟ್ಟಣದ ಆರಾಧ್ಯ ದೈವಗಳಾದ ಬಸವಣ್ಣ ಹಾಗೂ ವೀರಭದ್ರೇಶ್ವರ ದೇವಸ್ಥಾನದ ವಾರ್ಷಿಕ ರಥೋತ್ಸವವು ಶುಕ್ರವಾರ ಸಂಜೆ ಅಪಾರ ಭಕ್ತಿಭಾವ ಮತ್ತು ಸಡಗರ-ಸಂಭ್ರಮದೊಂದಿಗೆ ಅದ್ದೂರಿಯಾಗಿ ನೆರವೇರಿತು. ಶಾಸಕ ಶಿವರಾಮ ಹೆಬ್ಬಾರ ಅವರು ರಥೋತ್ಸವಕ್ಕೆ ಚಾಲನೆ ನೀಡಿದ್ದು, ಬಂಕಾಪುರದ ಅರಳೆಲೆ ಹಿರೇಮಠದ ರೇವಣಸಿದ್ದೇಶ್ವರ ಶಿವಾಚಾರ್ಯರು ಹಾಗೂ ಮುಂಡಗೋಡ ಹಿರೇಮಠದ ವೇದಮೂರ್ತಿ ರುದ್ರಮುನಿ ಶ್ರೀಗಳು ದಿವ್ಯ ಸಾನ್ನಿಧ್ಯ ವಹಿಸಿದರು.
ದೇವಸ್ಥಾನದ ಆವರಣದಿಂದ ಆರಂಭವಾದ ಭವ್ಯ ರಥ ಮೆರವಣಿಗೆಯು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿತು. ಈ ವೇಳೆ ಪಂಚವಾದ್ಯ, ವೀರಗಾಸೆ, ಡೊಳ್ಳು ಕುಣಿತ ಹಾಗೂ ವಿವಿಧ ವೇಷಧಾರಿ ಕಲಾವಿದರ ನೃತ್ಯಗಳು ಮೆರಗು ತಂದವು. ವಿಶೇಷವಾಗಿ ಜಾಂಜ್ ಮೇಳದ ಲಯಬದ್ಧ ವಾದನವು ಭಕ್ತರನ್ನು ಆಕರ್ಷಿಸಿತು. ಬಸವನಬೀದಿಯಿಂದ ಬನ್ನಿ ಮಹಾಕಾಳಿ ದೇವಸ್ಥಾನದವರೆಗೆ ಸಾಗಿದ ಮೆರವಣಿಗೆಯಲ್ಲಿ ಭಕ್ತರು ಜಯಘೋಷಗಳನ್ನು ಕೂಗಿ ಸಂಭ್ರಮಿಸಿದರು.
ತಮ್ಮ ಹರಕೆಯಂತೆ ರಥದ ಮೇಲೆ ಬಾಳೆಹಣ್ಣು, ಉತ್ತುತ್ತಿ ಹಾಗೂ ವಿವಿಧ ದವಸ-ಧಾನ್ಯಗಳನ್ನು ಎಸೆಯುವ ಮೂಲಕ ಭಕ್ತಿ ಸಮರ್ಿಸಿದರು. ತಾಲ್ಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ್ದ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ನಡೆದ ಈ ರಥೋತ್ಸವವು ಪಟ್ಟಣದ ಧಾರ್ಮಿಕ ಏಕತೆ ಹಾಗೂ ಸಮೃದ್ಧ ಸಾಂಸ್ಕೃತಿಕ ಪರಂಪರೆಯ ಪ್ರತೀಕವಾಗಿ ಗಮನಸೆಳೆಯಿತು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 