ಸಮಾನತೆಗೆ ಶ್ರಮಿಸಿದ ಬಸವಣ್ಣವರು: ಶಾಸಕ ಪಠಾಣ
Basavanna worked for equality: MLA Pathana
ಶಿಗ್ಗಾವಿ 22 : ಬಸವಣ್ಣನವರು ತುಳಿತಕ್ಕೊಳಗಾದ, ಕೆಳವರ್ಗದ ಜನಾಂಗದ ಏಳಿಗೆಗೆ ಅನುಭವ ಮಂಟಪ ಸ್ಥಾಪಿಸುವ ಮೂಲಕ ಸಮಾನತೆಗೆ ಶ್ರಮಿಸಿದ ಮಹಾನ್ ಚೇತನರು ಎಂದು ಶಾಸಕ ಯಾಸೀರಖಾನ್ ಪಠಾಣ ಹೇಳಿದರು.
ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಆಡಳಿತ ಭವನದಲ್ಲಿ ತಾಲೂಕು ಆಡಳಿತ ಆಯೋಜಿಸಿದ್ದ ಜಗಜ್ಯೋತಿ - ಬಸವೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಬಸವಣ್ಣನವರು 12ನೇ ಶತಮಾನದಲ್ಲಿ ಅನುಭವ ಮಂಟಪದ ಮೂಲಕ ಸಮಾಜದಲ್ಲಿ ಸಮಾನತೆ ಸಂದೇಶ ಸಾರಿದ್ದು, ಅಂಬೇಡ್ಕರ್ ಅವರು ಸಂವಿಧಾನ ರಚಿಸುವ ಮೂಲಕ ಎಲ್ಲ ಸಮುದಾಯದವರು ಸಮಾನತೆಯಿಂದ ಬದುಕಲು ಶ್ರಮಿಸಿದವರಾಗಿದ್ದಾರೆ ಎಂದರು. ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಮಾತನಾಡಿ ಬಸವಣ್ಣನವರು ಸಮಾನತೆಯ ಹರಿಕಾರರಾಗಿ, ಅನುಭವ ಮಂಟಪದಲ್ಲಿ ಮಹಿಳೆಯರಿಗೆ ಸಮಾನತೆ ಕೊಡುವ ಮೂಲಕ ಎಲ್ಲ ಸಮುದಾಯದವರು ಸಮಾನತೆಯಿಂದ ಬದುಕಲು ಶ್ರಮಿಸಿದ್ದಾರೆ ಎಂದರು. ಮಾಜಿ ಸಂಸದ ಮಂಜುನಾಥ ಕುನ್ನೂರ ಹಾಗೂ ವೀರಶೈವ ಲಿಂಗಾಯತ ಮಹಾಸಭಾ ತಾಲೂಕ ಅಧ್ಯಕ್ಷ ಬಸವರಾಜ ರಾಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಿಇಒ ಎಂ.ಬಿ.ಅಂಬಿಗೇರ ಉಪನ್ಯಾಸ ನೀಡಿದರು. ವಿರಕ್ತಮಠದ ಸಂಗನಬಸವ ಸ್ವಾಮಿಗಳು ಸಾನ್ನಿಧ್ಯವಹಿಸಿದ್ದರು.
ತಹಸೀಲ್ದಾರ್ ಯಲ್ಲಪ್ಪ ಗೋಣೆಣ್ಣವರ, ಇಓ ಮಂಜುನಾಥ ಸಾಳೊಂಕೆ, ಅರುಣ ಹುಡೇದಗೌಡ, ಶ್ರೀಕಾಂತ ದುಂಡಿಗೌಡ್ರ, ರವಿ ಕುಡವಕ್ಕಲಗೇರ, ಲಲಿತಾ ಹಿರೇಮಠ, ಸಿ.ವ್ಹಿ.ಮತ್ತಿಗಟ್ಟಿ ಡಾ.ಲತಾ ನಿಡಗುಂದಿ, ಜಿ.ಎನ್.ಯಲಿಗಾರ, ಮಂಜುನಾಥ ಮಣ್ಣಣ್ಣವರ, ರಮೇಶ ವನಹಳ್ಳಿ, ಬಸಲಿಂಗಪ್ಪ ನರಗುಂದ, ವೀರಶೈವ ಲಿಂಗಾಯತ ಮಹಾಸಭಾ ಸದಸ್ಯರು, ಮುಖಂಡರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 