ಕಾರಿನಲ್ಲಿ ಬಿಟ್ಟು ಹೋದ ಲ್ಯಾಟ್ ಟಾಪ್ ಮೊಬೈಲ್ ಮರಳಿಸಿ ಪ್ರಾಮಾಣಿಕತೆ ಮೆರೆದ ಬಸವರಾಜ್ ಸಂಗಮೇಶ್ವರ
Basavaraj Sangameshwara showed his honesty by returning the laptop he left in the car.
ಕಾರಿನಲ್ಲಿ ಬಿಟ್ಟು ಹೋದ ಲ್ಯಾಟ್ ಟಾಪ್ ಮೊಬೈಲ್ ಮರಳಿಸಿ ಪ್ರಾಮಾಣಿಕತೆ ಮೆರೆದ ಬಸವರಾಜ್ ಸಂಗಮೇಶ್ವರ
ಮುಂಡಗೋಡ 18 : ಟಿಬೇಟಿಯನ್ ಕ್ಯಾಂಪ್ ಲಾಮಾ ಗುರೂಜಿ ರವರು ಗುರುವಾರ ಹುಬ್ಬಳಿಗೆ ಹೋಗುವಾಗ ಕಾರಿನಲ್ಲಿ ಬಿಟ್ಟು ಹೋಗಿದ್ದ ಲ್ಯಾಪ್ ಟಾಪ್ ಹಾಗೂ ಮೊಬೈಲ್ ನ್ನು ಶುಕ್ರವಾರ ಮರಳಿ ನೀಡುವ ಮೂಲಕ ಸಾಮಾಜಿಕ ಕಾರ್ಯಕರ್ತ ಬಸವರಾಜ ಸಂಗಮೇಶ್ವರ ಪ್ರಾಮಾಣಿಕತೆ ಮೆರೆದಿದ್ದಾರೆ. ಗುರುವಾರ ಬಸವರಾಜ ಅವರು ತಮ್ಮ್ ಕಾರಿನಲ್ಲಿ ಹುಬ್ಬಳ್ಳಿಗೆ ಹೋಗುತ್ತಿದ್ದ ವೇಳೆ ಇಬ್ಬರು ಬೌದ್ಧ ಬಿಕ್ಕುಗಳ ತಾವು ಹುಬ್ಬಳ್ಳಿಗೆ ಹೋಗುತ್ತಿದ್ದು, ಅಲ್ಲಿಯವರೆಗೆ ಬಿಡುವಂತೆ ಹೇಳಿದಾಗ ಕರೆದುಕೊಂಡು ಹೋಗಿದ್ದಾರೆ. ನಂತರ ಹುಬ್ಬಳ್ಳಿ ತಲುಪಿದಾಗ ಲಾಮ್ ಗುರೂಜಿಯ್ ಲ್ಯಾಪ್ ಟಾಪ್ ಹಾಗೂ ಮೊಬೈಲ್ ಇರುವ ಬ್ಯಾಗನ್ನು ಕಾರಿನಲ್ಲೇ ಬಿಟ್ಟು ಹೋಗಿದ್ದಾರೆ. ಶುಕ್ರವಾರ ಬೆಳಗ್ಗೆ ಕಾರಿನಲ್ಲಿ ಬ್ಯಾಗ್ ಇರುವುದನ್ನು ನೋಡಿದ ಬಸವರಾಜ ಕೂಡಲೇ ಪೊಲೀಸ್ ಠಾಣೆಗೆ ವಿಷಯ ತಿಳಿಸಿದ್ದಾರೆ. ಇಬ್ಬರು ಬೌದ್ಧ ಬಿಕ್ಕುಗಳನ್ನು ಪತ್ತೆ ಹಚ್ಚಿದ ಪೊಲೀಸರು ಠಾಣೆಗೆ ಕರೆಯಿಸಿ ಸಾಮಾಜಿಕ ಕಾರ್ಯಕರ್ತ ಬಸವರಾಜ ಸಂಗಮೇಶ್ವರ ಅವರ ಸಮ್ಮುಖದಲ್ಲಿ ಲ್ಯಾಪ್ ಟಾಪ್ ಹಾಗೂ ಮೊಬೈಲ್ನ್ನು ಹಸ್ತಾಂತರಿಸಿದ್ದಾರೆ. ಈ ವೇಳೆ ಸಿಪಿಐ ರಂಗನಾಥ ನೀಲಮ್ಮನವರ ಹಾಗೂ ಸಿಬ್ಬಂದಿಗಳು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 