ಕನ್ನಡ ಜಾನಪದ ಸಾಹಿತ್ಯ ಪರಿಷತ್ ತಾಳಿಕೋಟೆ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಬಸವರಾಜ ಗೋರಜಿ ನೇಮಕ

ಕನ್ನಡ ಜಾನಪದ ಸಾಹಿತ್ಯ ಪರಿಷತ್ ತಾಳಿಕೋಟೆ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಬಸವರಾಜ ಗೋರಜಿ ನೇಮಕ  Basavaraja Goraji has been appointed as the President of Talikote Taluk Unit of Kannada Folk Literat


ತಾಳಿಕೋಟೆ, ಆ.7: ಕನ್ನಡ ಜಾನಪದ ಸಾಹಿತ್ಯ ಪರಿಷತ್ ತಾಳಿಕೋಟೆ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಕೊಡಗನೂರು ಗ್ರಾಮದ ಹಿರಿಯ ಗುರುಗಳು ಹಾಗೂ ಸಾಹಿತಿಗಳಾದ ಬಸವರಾಜ ಗೋರಜಿ ಅವರನ್ನು ನೇಮಕ ಮಾಡಲಾಗಿದೆ.  

ಈ ಕುರಿತು ಕನ್ನಡ ಜಾನಪದ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಡಾ. ಎಸ್‌. ಬಾಲಾಜಿ ಆದೇಶ ಹೊರಡಿಸಿದ್ದು, ಬಸವರಾಜ ಗೋರಜಿ ಅವರು ಈ ದಿನದಿಂದಲೇ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಕಾರ್ಯನಿರ್ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.  

ಕನ್ನಡ ಜಾನಪದ ಸಾಹಿತ್ಯ ಪರಿಷತ್ತು ರಾಜ್ಯಾದ್ಯಂತ ಜಾನಪದ ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿಯ ಸಂರಕ್ಷಣೆ ಮತ್ತು ಅಭಿವೃದ್ಧಿಗಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಜಾನಪದ ಕಲೆಗಳ ದಾಖಲೀಕರಣ, ತರಬೇತಿ, ವಸ್ತು ಸಂಗ್ರಹ, ಧ್ವನಿ ಮುದ್ರಣ, ಜಾನಪದ ಕಲಾವಿದರಿಗೆ ಗೌರವ-ಸನ್ಮಾನ ಹಾಗೂ ಪ್ರಶಸ್ತಿ ಪ್ರದಾನ ಸೇರಿದಂತೆ ಹಲವು ಚಟುವಟಿಕೆಗಳನ್ನು ಪರಿಷತ್ತು ನಡೆಸುತ್ತಿದೆ.  

ಇದೇ ಉದ್ದೇಶದಿಂದ ತಾಲ್ಲೂಕು, ಗ್ರಾಮ ಹಾಗೂ ಹೋಬಳಿ ಮಟ್ಟದಲ್ಲೂ ಜಾನಪದ ಚಟುವಟಿಕೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ವಿಸ್ತರಿಸುವ ನಿಟ್ಟಿನಲ್ಲಿ ಬಸವರಾಜ ಗೋರಜಿ ಅವರನ್ನು ತಾಳಿಕೋಟೆ ತಾಲ್ಲೂಕು ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಅವರ ನೇತೃತ್ವದಲ್ಲಿ ಜಾನಪದ ಸಾಹಿತ್ಯ ಮತ್ತು ಕಲಾ ಚಟುವಟಿಕೆಗಳಿಗೆ ಇನ್ನಷ್ಟು ಉತ್ತೇಜನ ದೊರೆಯಲಿದೆ ಎಂಬ ವಿಶ್ವಾಸವನ್ನು ಪರಿಷತ್ತು ವ್ಯಕ್ತಪಡಿಸಿದೆ.