ಅ.5 ರಿಂದ ಬಸವರಾಜ ರಾಯರಡ್ಡಿ ಕೊಪ್ಪಳ ಜಿಲ್ಲಾ ಪ್ರವಾಸ
Basavaraja Rayareddy Koppal district tour from October 5th
ಕೊಪ್ಪಳ 04 : ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಅಕ್ಟೋಬರ್ 5 ರಿಂದ 7 ರವರೆಗೆ ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಅ.5 ರಂದು ಬೆಳಿಗ್ಗೆ 10.30 ಗಂಟೆಗೆ ಕೊಪ್ಪಳಕ್ಕೆ ಆಗಮಿಸಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಸಂಜೆ 7 ಗಂಟೆಗೆ ಹೊಸಪೇಟೆಗೆ ತೆರಳಿ ವಾಸ್ತವ್ಯ ಮಾಡುವರು. ಅ.6 ರಂದು ಬೆಳಿಗ್ಗೆ 10 ಗಂಟೆಗೆ ಹೊಸಪೇಟೆಯಿಂದ ನಿರ್ಗಮಿಸಿ 10.30 ಗಂಟೆಗೆ ಕೊಪ್ಪಳಕ್ಕೆ ಆಗಮಿಸಿ, ಕೊಪ್ಪಳ ಜಿಲ್ಲಾ ವ್ಯಾಪ್ತಿಯ ನೂತನ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯಕ್ರಮಗಳಲ್ಲಿ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳೊಂದಿಗೆ ಭಾಗವಹಿಸುವರು. ಸಂಜೆ 5 ಗಂಟೆಗೆ ಕೊಪ್ಪಳದಿಂದ ನಿರ್ಗಮಿಸುವರು. ಅ.7 ರಂದು ಬೆಳಿಗ್ಗೆ 10 ಗಂಟೆಗೆ ಹೊಸಪೇಟೆಯಿಂದ ನಿರ್ಗಮಿಸಿ 11 ಗಂಟೆಗೆ ಯಲಬುರ್ಗಾದ ಶಾಸಕರ ಕಚೇರಿಯಲ್ಲಿ ಸಾರ್ವಜನಿಕರ ಭೇಟಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 6.30 ಗಂಟೆಗೆ ಯಲಬುರ್ಗಾದಿಂದ ನಿರ್ಗಮಿಸಿ ಹೊಸಪೇಟೆಗೆ ಪ್ರಯಾಣ ಬೆಳೆಸುವರು ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 