ಭೂ ಸುಧಾರಣಾ ತಿದ್ದುಪಡಿ ಕಾಯಿದೆ ವಿರೋಧಿಸಿ ಸರ್ಕಾರಕ್ಕೆ ಪತ್ರ ಬರೆದ ಬಸವರಾಜ ಹೊರಟ್ಟಿ
ಬೆಂಗಳೂರು, ಜೂನ್ 14, ರೈತ ನಾಯಕನೆಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿ ರೈತರ ಬಾಯಿಗೆ ಮಣ್ಣು ಹಾಕಲು ಹೊರಟಿದ್ದೀರಿ ಎಂದು ಮೇಲ್ಮನೆ ಜೆಡಿಎಸ್ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಮುಖ್ಯಮಂತ್ರಿಯವರಿಗೆ ಖಾರವಾಗಿ ಪತ್ರ ಬರೆದಿದ್ದಾರೆ.ಕರ್ನಾಟಕ ಹೈಕೋರ್ಟ್ ಆದೇಶದ ನೆಪವೊಡ್ಡಿ ಭೂಕಂದಾಯ ನಿಯಮಾವಳಿಗೆ ತಿದ್ದುಪಡಿ ತಂದಿರುವುದು ದೊಡ್ಡ ಆಘಾತ ತಂದಿದೆ. ಬೇರೆ ಯಾವುದೇ ರಾಜ್ಯದಲ್ಲಿಯೂ ಇಲ್ಲದ ಕಾನೂನು ನಮ್ಮ ರಾಜ್ಯದಲ್ಲಿ ತಂದು ಕೃಷಿಕರ ಭೂಮಿ ಕಬಳಿಸುವ ಹುನ್ನಾರು ಅಡಗಿದೆ. ಕಪ್ಪು ಹಣವುಳ್ಳವರಿಗೆ, ರಿಯಲ್ ಎಸ್ಟೇಟ್ ಮಾಡುವವರಿಗೆ ಅನ್ನದಾತರ ಜಮೀನು ಕಬಳಿಸಲು ರಹದಾರಿ ನೀಡಿದ್ದೀರಿ ಎಂದು ಪತ್ರದಲ್ಲಿ ಹೊರಟ್ಟಿ ಟೀಕಿಸಿದ್ದಾರೆ.
ಸರ್ಕಾರದ ನಿಲುವು ಮೂರ್ಖತನದ ಪರಮಾವಧಿ. ಕಾನೂನು ಜಾರಿಗೊಳಿಸಿದ್ದೇ ಆದರೆ ರೈತರು ಬಂಡಾಯವೇಳುವ ಕಾಲ ಸನ್ನಿಹಿತವಾಗಿದೆ. ಅನ್ನ ನೀಡುವ ರೈತ ಬಾಯಿಗೆ ಮಣ್ಣುಹಾಕುವ ಕೆಟ್ಟ ಕಾನೂನು ಜಾರಿಗರ ತರುವುದು ಸೂಕ್ತವಲ್ಲ. ರೈತರ ಮತ್ತಷ್ಟು ಆತ್ಮಹತ್ಯೆ ಮಾಡಿಕೊಳ್ಳಲು ಪ್ರೇರೇಪಣೆ ನೀಡಿದ್ದೀರಿ. ಕೃಷಿ ಮಾಡುವುದು ಕಂಪ್ಯೂಟರ್ ದ ಕೆಲಸದಂತಲ್ಲ. ಪುಸ್ತಕ ಓದಿ ಅಡುಗೆ ಮಾಡಿದಂತೆ ಕೃಷಿ ಮಾಡಲು ಸಾಧ್ಯವಿಲ್ಲ. ಕರಾಳ ಶಾಸನ ತರುವುದೇ ಅವಿವೇಕದ ಪರಮಾವಧಿ. ಆದ್ದರಿಂದ ಭೂ ಸುಧಾರಣಾ ಕಾಯಿದೆ ತದ್ದುಪಡಿ ಹಿಂಪಡೆದು ವಿಧಾನ ಸಭೆ ಅಧಿವೇಶನದಲ್ಲಿ ವಿಧೇಯಕ ಮಂಡಿಸಿ ಅಲ್ಲಿಯವರೆಗೆ ತಿದ್ದುಪಡಿ ಜಾರಿ ತಡೆಹಿಡಿಯಿರಿ ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 