ಜಿಲ್ಲಾಡಳಿತದಿಂದ ಆಯೋಜಿಸಿದ್ದ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವೇಶ್ವರ ಜಯಂತಿ ಕಾರ್ಯಕ್ರಮ

ಜಿಲ್ಲಾಡಳಿತದಿಂದ ಆಯೋಜಿಸಿದ್ದ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವೇಶ್ವರ ಜಯಂತಿ ಕಾರ್ಯಕ್ರಮ Basaveshwara Jayanti program organized by the district administration to celebrate the cultural lead

ಲೋಕದರ್ಶನ ವರದಿ 

ಧಾರವಾಡ 23 : ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಏಪ್ರೀಲ್ 20, 2026 ರಂದು ಸಂಜೆ ಕರ್ನಾಟಕ ಕುಲಪುರೋಹಿತ ಆಲೂರ ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ಕರ್ನಾಟಕದ ಸಾಂಸ್ಕೃತಿಕ ನಾಯಕ  ಬಸವೇಶ್ವರ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.  ಕಾರ್ಯಕ್ರಮವನ್ನು ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಅವರು ಕರ್ನಾಟಕದ ಸಾಂಸ್ಕೃತಿಕ ನಾಯಕ ಶ್ರೀ ಬಸವೇಶ್ವರ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ದೀಪ ಬೆಳಗಿಸುವುದರೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.  

ಕಾನೂನು ತಜ್ಞರು ಹಾಗೂ ಚಿಂತಕಡಾ. ಲೋಹಿತ ಡಿ. ನಾಯ್ಕರ, ಅವರು ಶ್ರೀ ಬಸವೇಶ್ವರರು ಮತ್ತು ಮಾನವ ಹಕ್ಕುಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ದರ್ಗಾ, ಕರ್ನಾಟಕ ಕುಲಪುರೋಹಿತ ಆಲೂರ ವೆಂಕಟರಾವ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ ಅಧ್ಯಕ್ಷ ರಂಜಾನ, ಡಾ. ಎಂ.ಎಂ. ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಟಾನದ ಅಧ್ಯಕ್ಷ ಡಾ. ವೀರಣ್ಣ ರಾಜೂರ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪ್ರಕಾಶ ಹಳಿಯಾಳ, ಎ.ಸಿ.ಪಿ. ಪ್ರಶಾಂತ ಸಿದ್ಧನಗೌಡರ, ಸಮಾಜದ ಮುಖಂಡರು ಹಾಗೂ ಇನ್ನಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.