ಬಸವೇಶ್ವರ-ಶಂಕರಾಚಾರ್ಯ ಜಯಂತಿ ಅರ್ಥಪೂರ್ಣ ಮತ್ತು ವಿಜೃಂಭಣೆಯಿಂದ ಆಚರಣೆ -ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಎಲ್‌

ಬಸವೇಶ್ವರ-ಶಂಕರಾಚಾರ್ಯ ಜಯಂತಿ ಅರ್ಥಪೂರ್ಣ ಮತ್ತು ವಿಜೃಂಭಣೆಯಿಂದ ಆಚರಣೆ -ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಎಲ್‌ Basaveshwara-Shankaracharya Jayanti celebrated with meaning and grandeur - Additional Deputy Commiss

ಲೋಕದರ್ಶನ ವರದಿ

         ಹಾವೇರಿ 08: ಜಿಲ್ಲಾಡಳಿತದಿಂದ ಜಗಜ್ಯೋತಿ ಶ್ರೀ ಬಸವೇಶ್ವರ ಹಾಗೂ  ಶ್ರೀ ಶಂಕರಾಚಾರ್ಯ ಜಯಂತಿಗಳ ಕಾರ್ಯಕ್ರಮ ಅರ್ಥಪೂರ್ಣ  ಹಾಗೂ ವಿಜೈಂಭಣೆಯಿಂದ ಆಚರಣೆಗೆ  ಎಲ್ಲ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ್ ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜಗಜ್ಯೋತಿ ಶ್ರೀ ಬಸವೇಶ್ವರ, ಶ್ರೀ ಶಂಕರಾಚಾರ್ಯ ಜಯಂತಿ ಆಚರಣೆ ಕುರಿತು ಪೂರ್ವಭಾವಿ  ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  

ಸಮಾಜದ ಮುಖಂಡರೊಂದಿಗೆ ಚರ್ಚಿಸಿ, ಶ್ರೀ ಬಸವೇಶ್ವರ ಜಯಂತಿ ಏಪ್ರಿಲ್ 20 ರಂದು ಬೆಳಿಗ್ಗೆ 9 ಗಂಟೆಗೆ ಬಸವೇಶ್ವರ ಪುತ್ಥಳಿಗೆ ಮಾಲಾರೆ​‍್ಣ, ಬೆಳಿಗ್ಗೆ 10 ಗಂಟೆಗೆ ಹಾವೇರಿ ನಗರದ ಶ್ರೀ ಹುಕ್ಕೇರಿಮಠದಲ್ಲಿ ವೇದಿಕೆ ಕಾರ್ಯಕ್ರಮ ಹಾಗೂ ಸಂಜೆ 4 ಗಂಟೆಗೆ ಬಸವೇಶ್ವರ ಭಾವಚಿತ್ರ ಮೆರವಣಿಗೆ,  ಶ್ರೀ ಶಂಕರಾಚಾರ್ಯ ಜಯಂತಿ ಏ.21 ರಂದು  ಹಾವೇರಿ ನಗರದ ಸೀತಾರಾಮ ಮಂಗಲ ಕಾರ್ಯಾಲಯದಲ್ಲಿ ವೇದಿಕೆ ಕಾರ್ಯಕ್ರಮ ಹಾಗೂ ಸಂಜೆ 4 ಗಂಟೆಗೆ ಶಂಕರ ಭಾರತಿ ಮಠದಿಂದ ಭಾವಚಿತ್ರ ಮೆರವಣಿಗೆ    ನಡೆಸಲು ಸಭೆಯಲ್ಲಿ ನಿರ್ಣಯಿಸಲಾಯಿತು.  

ಮಹನೀಯರ  ಭಾವಚಿತ್ರ ಮೆರವಣಿಗೆ, ಪೊಲೀಸ್ ಬಂದೋಬಸ್ತ್‌, ಕಲಾ ತಂಡಗಳ ನೇಮಕ, ಉಪನ್ಯಾಸಕರು, ಆಮಂತ್ರಣ ಪತ್ರಿಕೆ, ವೇದಿಕೆ, ಧ್ವನಿ-ಬೆಳಕು, ಆಸನ, ಕುಡಿಯುವ ನೀರು, ಉಪಹಾರ, ವ್ಯವಸ್ಥೆಯನ್ನು ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಸಮನ್ವಯದಿಂದ ಮಾಡಬೇಕೆಂದು ಸಲಹೆ ನೀಡಿದರು. ಈ ಮಹನೀಯರ ಜಯಂತಿಯನ್ನು ಎಲ್ಲ ಶಾಲಾ-ಕಾಲೇಜುಗಳಲ್ಲಿ ಹಾಗೂ ಗ್ರಾಮ ಪಂಚಾಯತಿಗಳಲ್ಲಿ ಆಚರಣೆ ಮಾಡಲು ಆದೇಶ ಹೊರಡಿಸಲಾಗುವುದು ಎಂದರು. ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಹಿರೇಮಠ, ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಹಾಜರಿದ್ದರು.