ಹವಾಮಾನ ಇಲಾಖೆಯ ಮುನ್ಸೂಚನೆ ಮೇರೆಗೆ: ಜಿಲ್ಲಾಡಳಿತದಿಂದ ಸಾರ್ವಜನಿಕರಿಗೆ ಮುನ್ನೆಚ್ಚರಿಕಾ ಸೂಚನೆಗಳು
Based on the forecast of the Meteorological Department: Precautionary instructions to the public fro
ಗದಗ 12: ರಾಜ್ಯ ಹವಾಮಾನ ಇಲಾಖೆಯ ವರದಿಯಂತೆ, ಗದಗ ಜಿಲ್ಲೆಯಲ್ಲಿ ದಿನಾಂಕ 12-06-2025 ರಂದು ರೆಡ್ ಅಲರ್ಟ್, 13-06-2025 ್ಘ 15-06-2025 ರಂದು ಆರೆಂಜ್ ಅಲರ್ಟ್ ಹಾಗೂ ದಿನಾಂಕ 14-06-2025 ರಂದು ಯಲ್ಲೋ ಅಲರ್ಟ ನೀಡಲಾಗಿದ್ದು, ಇದರಿಂದ ಗದಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಂಭವ ಇರುತ್ತದೆ. ಸಾರ್ವಜನಿಕರು ಮುನ್ನೆಚ್ಚರಿಕೆಯಿಂದ ಇರುವಂತೆ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರು ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮಳೆಯಾಗುವ ಸಂದರ್ಭದಲ್ಲಿ ಗುಡುಗು-ಸಿಡಿಲಿನಿಂದಾಗುವ ಅಹಿತಕರ ಘಟನೆಗಳನ್ನು ತಪ್ಪಿಸಲು ಸಾರ್ವಜನಿಕರು ಮನೆಯಲ್ಲಿಯೇ ಇರಲು ಅಥವಾ ಸುರಕ್ಷಿತ ಸ್ಥಳಗಳಲ್ಲಿರ ಇರಬೇಕು. ಮಳೆಯಾಗುವ ಸಂದರ್ಭದಲ್ಲಿ ನದಿ/ಹಳ್ಳದ/ಕೆರೆ ದಡದಲ್ಲಿ ಬಟ್ಟೆ ತೊಳೆಯುವುದು, ಈಜಾಡುವುದು, ದನಕರುಗಳನ್ನು ಮೆಯಿಸುವುದು ಹಾಗೂ ಅಪಾಯವಿರುವ ಸೇತುವೆಗಳಲ್ಲಿ ಸಂಚರಿಸುವುದು ಮತ್ತು ಇತರೆ ಚಟುವಟಿಕೆ ನಡೆಸದಂತೆ ಮುನ್ನೆಚ್ಚರಿಕೆಯನ್ನು ತೆಗೆದುಕೊಳ್ಳುವುದು.
ಭಾರಿ ಮಳೆ/ಪುವಾಹ ಸಂದರ್ಭದಲ್ಲಿ ತಗ್ಗು ಪ್ರದೇಶದಲ್ಲಿ ವಾಸವಿದ್ದರೆ, ಸುರಕ್ಷತೆ ಇರುವ ಸ್ಥಳಗಳಿಗೆ ತೆರಳಬೇಕು. ಯುವಕರು ಮತ್ತು ಸಾರ್ವಜನಿಕರು ನದಿ/ಹಳ್ಳದ/ಕೆರೆ ದಡಗಳಲ್ಲಿ ಅಪಾಯವಿರುವ ಸೇತುವೆಗಳಲ್ಲಿ ಪೋಟೋ/ ಸೆಲ್ಫಿ ಗಳನ್ನು ತೆಗೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು.
ನಿರಂತರ ಮಳೆಯಿಂದ ಅಪಾಯವಿರುವ ಮನೆ, ಗೋಡೆ ಇತರೆ ಕಟ್ಟಡಗಳು ಕುಸಿಯುವ ಸಂದರ್ಭವಿರುತ್ತದೆ, ಇದರಿಂದ ಸಾವು ನೋವುಗಳು ಸಂಭವಿಸುವ ಸಂದರ್ಭವಿರುವುದರಿಂದ ಸಾರ್ವಜನಿಕರಿಗೆ ಸುರಕ್ಷತೆಯ ದೃಷ್ಠಿಯಿಂದ ಮುನ್ನೆಚ್ಚರಿಕೆಯ ಕ್ರಮಗಳನ್ನು ತೆಗೆದುಕೊಳ್ಳಬೇಕು.
ಸಾರ್ವಜನಿಕರ ಅನುಕೂಲಕ್ಕಾಗಿ ಸಹಾಯವಾಣಿಗಳನ್ನು ತೆರೆಯಲಾಗಿದ್ದು ಸಾರ್ವಜನಿಕರು ತುರ್ತು ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ 08372-239177 ಅಥವಾ 1077 ನಂಬರಿಗೆ ಸಂಪರ್ಕಿಸಬಹುದಾಗಿದೆ.
ಕಾಲಕಾಲಕ್ಕೆ ರಾಜ್ಯ/ ಜಿಲ್ಲಾಡಳಿತ ತಾಲೂಕಾಡಳಿತದಿಂದ ನೀಡುವ ಹವಾಮಾನದ ಮುನ್ನೆಚ್ಚರಿಕೆಯನ್ನು ಸಾರ್ವಾಜನಿಕರು ಪಾಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎನ್.ಶ್ರೀಧರ್ ಅವರು ಸಾರ್ವಜನಿಕರಿಗೆ ಕೋರಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 