ಕೆಎಲ್‌ಇ ಶತಮಾನೋತ್ಸವ ಚಾರಿಟೇಬಲ್ ಆಸ್ಪತ್ರೆಯಲ್ಲಿ ಚಾಲಕರು ಹಾಗೂ ನಸಿಂರ್ಗ್ ಸಿಬ್ಬಂದಿಗಾಗಿ ಬೆಸಿಕ್ ಲೈಫ್ ಸಪೊರ್ಟ್ ತರಬೇತಿ ಕಾರ್ಯಕ್ರಮ
Basic Life Support Training Program for Drivers and Nursing Staff at KLE Centenary Charitable Hospit
ಲೋಕದರ್ಶನ ವರದಿ
ಬೆಳಗಾವಿ 16 : ಚಾಲಕರು ಕೇವಲ ವಾಹನ ಚಾಲನೆ ಮಾಡುವವರು ಮಾತ್ರವಲ್ಲ. ಅನೇಕ ಸಂದರ್ಭಗಳಲ್ಲಿ ರಸ್ತೆ ಅಪಘಾತಗಳು, ಹೃದಯಾಘಾತ, ತುರ್ತು ಆರೋಗ್ಯ ಸಮಸ್ಯೆಗಳ ಸಮಯದಲ್ಲಿ ಅವರು ಮೊದಲ ಪ್ರತಿಕ್ರಿಯೆ ನೀಡುವ ವ್ಯಕ್ತಿಗಳಾಗಿರುತ್ತಾರೆ. ಃಐಖ ತರಬೇತಿ ಪಡೆದ ಚಾಲಕನು ಕೇವಲ ಉತ್ತಮ ಚಾಲಕನಲ್ಲ, ಅವನು ಜೀವ ಉಳಿಸುವ ಜವಾಬ್ದಾರಿಯುತ ವ್ಯಕ್ತಿಯಾಗುತ್ತಾನೆ ಎಂದು ಕೆ ಎಲ್ ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರುಗಳಾದ ಡಾ. ಸಂಜಯ ಕಂಬಾರ ಅವರು ಮಾತನಾಡುತ್ತಿದ್ದರು. ಅವರು ಇಂದು ನಗರದ ಯಳ್ಳೂರ ರಸ್ತೆಯಲ್ಲಿನ ಕೆ ಎಲ್ ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆಯಲ್ಲಿ ಆಯೋಜಿಸಲಾದ ಬೆಸಿಕ್ ಲೈಫ್ ಸಪೊರ್ಟ್ ತರಬೇತಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.
ಆಸ್ಪತ್ರೆಯ ತುರ್ತು ಸೇವೆಗಳಲ್ಲಿ ಪ್ರಮುಖ ಪಾತ್ರ ವಹಿಸುವ ಚಾಲಕರಿಗೆ ಜೀವ ರಕ್ಷಕ ಕೌಶಲ್ಯಗಳ ಮಹತ್ವವನ್ನು ತಿಳಿಸುವುದು ಮತ್ತು ತುರ್ತು ಪರಿಸ್ಥಿತಿಗಳಲ್ಲಿ ತಕ್ಷಣದ ಪ್ರಾಥಮಿಕ ಚಿಕಿತ್ಸೆ ನೀಡುವ ಸಾಮರ್ಥ್ಯವನ್ನು ಹೆಚ್ಚಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು. ಕಾರ್ಯಕ್ರಮದಲ್ಲಿ ನಸಿಂರ್ಗ್ ಸಿಬ್ಬಂದಿಯೂ ಸಹ ಭಾಗವಹಿಸಿ ತಮ್ಮ ಕೌಶಲ್ಯಗಳನ್ನು ವೃದ್ಧಿಸಿಕೊಂಡರು. ಈ ತರಬೇತಿ ಕಾರ್ಯಕ್ರಮವನ್ನು ಚಿಕ್ಕಮಕ್ಕಳ ವಿಭಾಗದ ಹೆಸರಾಂತ ವೈದ್ಯರುಗಳಾದ ಡಾ. ಸೌಮ್ಯಾ ವೆರ್ನೇಕರ್ ಹಾಗೂ ಡಾ. ಸಂತೋಷ ಕರಮಸಿ ಅವರು ನಡೆಸಿಕೊಟ್ಟರು. ಅವರು ಹೃದಯ ಸ್ಥಂಭನ, ಉಸಿರಾಟ ತೊಂದರೆ ಹಾಗೂ ಇತರ ತುರ್ತು ಸಂದರ್ಭಗಳಲ್ಲಿ ಅನುಸರಿಸಬೇಕಾದ ಮೂಲ ಜೀವ ರಕ್ಷಕ ಕ್ರಮಗಳ ಕುರಿತು ಪ್ರಾಯೋಗಿಕ ಹಾಗೂ ಸೈದ್ಧಾಂತಿಕ ಮಾಹಿತಿ ನೀಡಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 