ಶ್ರೇಷ್ಠ ಪತ್ರಕರ್ತರಾಗಿ ಸಮಾಜ ಸುಧಾರಣೆಯಲ್ಲಿ ತೊಡಗಿಸಿಕೊಳ್ಳಿ: ಡಾ. ಚರಂತಿಮಠ

ಶ್ರೇಷ್ಠ ಪತ್ರಕರ್ತರಾಗಿ ಸಮಾಜ ಸುಧಾರಣೆಯಲ್ಲಿ ತೊಡಗಿಸಿಕೊಳ್ಳಿ: ಡಾ. ಚರಂತಿಮಠ Be a great journalist and engage in social reform: Dr. Charantimath

ಮುಧೋಳ 16: ಎಸ್‌.ಆರ್‌.ಕಂಠಿ ಮಹಾವಿದ್ಯಾಲಯದ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿಗಳು ಕಂಪ್ಯೂಟರ್ ಲ್ಯಾಬ್ ಹಾಗೂ ಸ್ಟುಡಿಯೋದ ಉಪಯೋಗವನ್ನು ಪಡೆದು ಕೊಂಡು ನಾಡಿನ ಶ್ರೇಷ್ಠ ಪತ್ರಕರ್ತರಾಗಿ ಸಮಾಜ ಸುಧಾರಣೆಯಲ್ಲಿ ತಮ್ಮನ್ನು ತಾವು ತೊಡಗಿಸಿ ಕೊಳ್ಳಬೇಕೆಂದು ಬಾಗಲಕೋಟ ಬಿವ್ಹಿವ್ಹಿ ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಸಿ. ಚರಂತಿಮಠ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. 

ಬುಧವಾರ ನಗರದ ಎಸ್‌.ಆರ್‌.ಕಂಠಿ ಮಹಾವಿದ್ಯಾಲಯದ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿಗಳ ಪ್ರಾಯೋಗಿಕ ಸ್ಟುಡಿಯೋ ಉದ್ಘಾಟಿಸಿ ಮಾತನಾಡಿ ಬಿವ್ಹಿವ್ಹಿ ಸಂಘವು ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನ ಪಡೆದುಕೊಳ್ಳಲು ಕಂಪ್ಯೂಟರ್ ಲ್ಯಾಬ್ ಹಾಗೂ ಪ್ರಾಯೋಗಿಕ ಸ್ಟುಡಿಯೋ ಸೌಲಭ್ಯ ಒದಗಿಸಿ ಕೊಡಲಾಗಿದೆ. ಈ ಸೌಲಭ್ಯವನ್ನು ವಿದ್ಯಾರ್ಥಿಗಳು ಸಮರ​‍್ಕವಾಗಿ ಬಳಸಿಕೊಂಡು ತಮ್ಮ ಕೌಶಲ್ಯವನ್ನು ಹೆಚ್ಚಿಸಿಕೊಳ್ಳಬೇಕೆಂದು ಹೇಳಿದರು. ಡಾ.ವೀರಣ್ಣ ಚರಂತಿಮಠ ಅವರು ವಿದ್ಯಾರ್ಥಿಗಳ ಪ್ರಾಯೋಗಿಕ ಸ್ಟುಡಿಯೋ ಉದ್ಘಾಟಿಸಿದ ಬಳಿಕ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳೊಂದಿಗೆ ಸಂವಾದ ಮಾಡಿದರು, ನಂತರ ವಿದ್ಯಾರ್ಥಿಗಳು ಅವರ ಜೊತೆ ಛಾಯಾಚಿತ್ರ ತೆಗೆಸಿಕೊಂಡರು. 

ಬಿವ್ಹಿವ್ಹಿ ಸಂಘದ ಗೌರವ ಕಾರ್ಯದರ್ಶಿ ಮಹೇಶ ಎನ್‌. ಅಥಣಿ ಮಾತನಾಡಿ ಪ್ರಸ್ತುತ ಸಮಾಜ ಸುಧಾರಣೆಯಲ್ಲಿ ಪತ್ರಕರ್ತರ ಪಾತ್ರ ಮತ್ತು ಜವಾಬ್ದಾರಿ ಬಹು ಮುಖ್ಯವಾದದು, ಇಂದು ಪತ್ರಿಕೋದ್ಯಮ ಕ್ಷೇತ್ರವು ಶರವೇಗದಲ್ಲಿ ಬೆಳೆಯುತ್ತಿದ್ದು ಆಧುನಿಕ ಸೌಲಭ್ಯ ಮತ್ತು ಸೌಕರ್ಯಗಳ ಅವಶ್ಯಕತೆ ಇದ್ದು ಈ ನಿಟ್ಟಿನಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಅಧ್ಯಯನ ಮಾಡುತ್ತಿರುವ ಇಂದಿನ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನ ಮತ್ತು ಕೌಶಲ್ಯ ತರಬೇತಿಯ ಅವಶ್ಯಕತೆಯನ್ನು ಅರಿತು ಕೊಂಡು ಕಂಪ್ಯೂಟರ್ ಲ್ಯಾಬ್ ಮತ್ತು ಪ್ರಾಯೋಗಿಕ ಸ್ಟುಡಿಯೋ ಸಿದ್ದಪಡಿಸಲಾಗಿದೆ ಇದನ್ನು ವಿದ್ಯಾರ್ಥಿಗಳು ಸರಿಯಾಗಿ ಬಳಸಿಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಹೇಳಿದರು. 

ಸಂಘದ ಕಾಲೇಜುಗಳ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಗುರುಬಸವ ಎಸ್‌. ಸೂಳಿಭಾವಿ ಮಾತನಾಡಿ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಕೌಶಲ್ಯ ಅತೀ ಮುಖ್ಯವಾದದು ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪ್ರಾಯೋಗಿಕ ಜ್ಞಾನ ಪಡೆದುಕೊಂಡು ತಮ್ಮ ಉಜ್ವಲ ಭವಿಷ್ಯ ನಿರ್ಮಿಸಿ ಕೊಳ್ಳಲೆಂದು ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗಕ್ಕೆ ಕಂಪ್ಯೂಟರ್ ಲ್ಯಾಬ್ ಮತ್ತು ಪ್ರಾಯೋಗಿಕ ಸ್ಟುಡಿಯೋ ನಿರ್ಮಿಸಲಾಗಿದೆ ಇದನ್ನು ವಿದ್ಯಾರ್ಥಿಗಳು ಸಮರ​‍್ಕವಾಗಿ ಬಳಸಿ ಕೊಳ್ಳಬೇಕೆಂದರು. 

ಸಂಘದ ಶಾಲಾ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಮಹಾಂತೇಶ ಎಸ್‌. ಶೆಟ್ಟರ, ಪ್ರಾಚಾರ್ಯ ಪ್ರೊ.ಎಮ್‌.ವ್ಹಿ.ಜಿಗಬಡ್ಡಿ, ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ವಿಶ್ವನಾಥ ಮುನವಳ್ಳಿ, ಸಹ ಉಪನ್ಯಾಸಕಿ ಶ್ವೇತಾ ಶಿರಬಡಗಿ, ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿಗಳು ಹಾಗೂ ಮಹಾವಿದ್ಯಾಲಯ ಬೋಧಕ-ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.