ಯಾವುದೇ ಅರ್ಹ ಮತದಾರರ ಹೆಸರು ಕೈಬಿಡದಂತೆ ಎಚ್ಚರಿಕೆ ವಹಿಸಿ: ತಹಶೀಲ್ದಾರ್

ಯಾವುದೇ ಅರ್ಹ ಮತದಾರರ ಹೆಸರು ಕೈಬಿಡದಂತೆ ಎಚ್ಚರಿಕೆ ವಹಿಸಿ: ತಹಶೀಲ್ದಾರ್  Be careful not to leave out the name of any eligible voter: Tahsildar

ಲೋಕದರ್ಶನ ವರದಿ   

ಶಿಗ್ಗಾವಿ 1: ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಯಾವುದೇ ಅರ್ಹ ಮತದಾರರ ಹೆಸರು ಪಟ್ಟಿಯಿಂದ ಕೈಬಿಡಬಾರದು. ಸಾರ್ವಜನಿಕರಿಂದ ಸಮಗ್ರ ಮಾಹಿತಿ ಪಡೆದು ಚುನಾವಣಾ ಆಯೋಗದ ನಿಯಮಾನುಸಾರ ಪಟ್ಟಿ ಸಿದ್ಧಪಡಿಸಬೇಕು ಎಂದು ತಾಲೂಕು ದಂಡಾಧಿಕಾರಿ ಯಲ್ಲಪ್ಪ ಗೋಣೆಣ್ಣವರ ಬೂತ್ ಮಟ್ಟದ ಅಧಿಕಾರಿಗಳಿಗೆ (ಬಿಎಲ್‌ಒ) ಸೂಚನೆ ನೀಡಿದರು.  ಪಟ್ಟಣದ ಪುರಸಭೆ ಎದುರಿನ ರಾಣಿ ಚೆನ್ನಮ್ಮ ವೃತ್ತದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.  ಮನೆ-ಮನೆ ಸಮೀಕ್ಷೆಗೆ ಸಾರ್ವಜನಿಕರ ಸಹಕಾರ ಅಗತ್ಯ  ಹೊಸ ಮತದಾರರ ಸೇರೆ​‍್ಡ, ಮೃತರ ಹೆಸರುಗಳ ತೆರವು ಹಾಗೂ ಸ್ಥಳಾಂತರಗೊಂಡ ಮತದಾರರ ವಿವರಗಳ ಪರಿಷ್ಕರಣೆ ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ಒಂದೇ ವ್ಯಕ್ತಿಯ ಹೆಸರು ಎರಡು ಕಡೆ ಮತದಾರರ ಪಟ್ಟಿಯಲ್ಲಿ ಇರಬಾರದು ಎಂದು ಅವರು ತಿಳಿಸಿದರು.  

ಮನೆ-ಮನೆ ಭೇಟಿ ನೀಡುವ ಬಿಎಲ್‌ಒಗಳಿಗೆ ಅಗತ್ಯ ದಾಖಲೆಗಳನ್ನು ನೀಡಿ, ಸರಿಯಾದ ಮಾಹಿತಿ ಒದಗಿಸುವ ಮೂಲಕ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.  ತಾಂತ್ರಿಕ ಸಮಸ್ಯೆಗಳಿಗೆ ಸಹಾಯ ಕೇಂದ್ರ  ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಯಾವುದೇ ತಾಂತ್ರಿಕ ಸಮಸ್ಯೆಗಳು ಎದುರಾದರೆ ಅಥವಾ ಮಾಹಿತಿ ತಿದ್ದುಪಡಿ ಅಗತ್ಯವಿದ್ದರೆ, ಪ್ರತಿ ಗ್ರಾಮ ಪಂಚಾಯಿತಿ ಕೇಂದ್ರದಲ್ಲಿ ಸ್ಥಾಪಿಸಿರುವ ನೆರವು ಕೇಂದ್ರವನ್ನು ಸಂಪರ್ಕಿಸಿ ಸಮಸ್ಯೆ ಪರಿಹರಿಸಿಕೊಳ್ಳಬಹುದು ಎಂದು ಹೇಳಿದರು.  ಇಂದಿನಿಂದ ಬಿಎಲ್‌ಒಗಳು ್ಕ್ಪೂಹ್ಕಿ್ಪೂ ಸಮೀಕ್ಷೆ ಆರಂಭಿಸಿದ್ದು, ರಾಜ್ಯಾದ್ಯಂತ ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ದಾಖಲೆ ಪರೀಶೀಲನೆ ಕಾರ್ಯ ನಡೆಯಲಿದೆ ಎಂದರು. 

ಅಧಿಕಾರಿಗಳ ಉಪಸ್ಥಿತಿ  ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ. ಅಂಬಿಗೇರ, ಕಂದಾಯ ಇಲಾಖೆಯ ಅಧಿಕಾರಿಗಳು, ಪುರಸಭೆಯ ಮುಖ್ಯಾಧಿಕಾರಿ ರವೀಂದ್ರ ಬಾಗಲಕೋಟಿ, ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ನೃಪತಿ ಭೂಸರೆಡ್ಡಿ, ಪ್ರಕಾಶ್ ಓಂದಕಾರ, ಸುರೇಶ್ ತೆಗ್ಗಿಹಳ್ಳಿ, ರಾಯಪ್ಪ ನಾಗಪ್ಪನವರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಿಬ್ಬಂದಿ ಹಾಗೂ ಪುರಸಭೆ ಸಿಬ್ಬಂದಿ ಉಪಸ್ಥಿತರಿದ್ದರು.