ಅಂರ್ತಜಾಲ ಬಳಕೆಯಲ್ಲಿ ಎಚ್ಚರಿಕೆಯಿರಲಿ : ಅಪರ ಜಿಲ್ಲಾಧಿಕಾರಿ
Be careful when using the internet: Additional District Collector
ಕಾರವಾರ, ಫೆ.10:- ತಂತ್ರಜ್ಞಾನ ಯುಗದಲ್ಲಿ ಅಂತರ್ಜಾಲವನ್ನು ಎಚ್ಚರಿಕೆಯಿಂದ ಬಳಸಬೇಕು ಹಾಗೂ ಅನಾವಶ್ಯಕ ಲಿಂಕ್‌ಗಳನ್ನು ತೆರೆದು ವಂಚನೆಗೆ ಒಳಗಾಗಬಾರದು ಎಂದು ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ ಹೇಳಿದರು. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಪೊಲೀಸ್ ಇಲಾಖೆ ಹಾಗೂ ಮಾಹಿತಿ ತಂತ್ರಜ್ಞಾನ ಇಲಾಖೆ ಇವರ ಸಯೋಗದಲ್ಲಿ ನಡೆದ ವಿಶ್ವ ಸುರಕ್ಷಿತ ಅಂತರ್ಜಾಲ ದಿನದ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದರು.
ಇತ್ತಿಚೀನ ದಿನಗಳಲ್ಲಿ ಪ್ರತಿಯೊಬ್ಬರು ಅಂತರ್ಜಾಲ ಬಳಸುತ್ತಿದ್ದು, ಪ್ರತಿಯೊಬ್ಬರ ಜೀವನದಲ್ಲಿ ಅಂತರ್ಜಾಲ ಅವಿಭಾಜ್ಯ ಅಂಗವಾಗಿದೆ. ಅಂತರ್ಜಾಲ ಬಳಕೆಯಿಂದ ಆಗುವ ಉಪಯೋಗದಕ್ಕಿಂತ ಅದರಿಂದ ಆಗುವ ಅನಾಹುತಗಳೇ ಹೆಚ್ಚಾಗಿವೆ. ಅಂತರ್ಜಾಲ ಬಳಕೆ ಹೆಚ್ಚಾದಂತೆ ಆನ್‌ಲೈನ್ ವಂಚನೆಗಳು ಹೆಚ್ಚಾಗಿದ್ದು, ಬಹುತೇಕ ವಿದ್ಯಾವಂತರೇ ಈ ವಂಚನೆಗಳಿಗೆ ಒಳಗಾಗುತ್ತಿದ್ದಾರೆ. ವೈಯಕ್ತಿಕ ಮಾಹಿತಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವುದು, ಆನ್‌ಲೈನ್ ಮೂಲಕ ಹೂಡಿಕೆ ಮಾಡುವುದು, ಅವಶ್ಯಕವಲ್ಲದ ಲಿಂಕ್‌ಗಳನ್ನು ತೆರೆಯುವ ಮೂಲಕ ವಂಚನೆಗಳಿಗೆ ಒಳಗಾಗುತ್ತಿದ್ದು, ಇವುಗಳನ್ನು ತಡೆಯಲು ಜನರಲ್ಲಿ ಹೆಚ್ಚಿನ ಅರಿವು ಮೂಡಿಸುವ ಕಾರ್ಯವಾಗಬೇಕಿದೆ ಎಂದರು.
ತಂತ್ರಜ್ಞಾನ ಬೆಳದಂತೆ ಜನರ ಜೀವನ ಶೈಲಿಯೂ ವೇಗವಾಗಿ ಬೆಳೆಯುತ್ತಿದೆ ಜಾಹೀರಾತುಗಳಿಂದ ಪ್ರೇರೇಪಿತವಾಗಿ ಜನರು ತಮ್ಮ ಎಲ್ಲಾ ಮಾಹಿತಿಗಳನ್ನು ಹಂಚಿಕೊಳ್ಳುವ ಮೂಲಕ ವಂಚನೆಗಳಿಗೆ ಒಳಗಾಗುತ್ತಿದ್ದಾರೆ. ಂಋ ಯುಗದಲ್ಲಿ ಒಂದು ಚಿಕ್ಕ ವೈಯಕ್ತಿಕ ಮಾಹಿತಿಯು ಜೀವನದ ದಿಕ್ಕು ಬದಲಿಸಬಹುದಾಗಿದ್ದು, ತಂತ್ರಜ್ಞಾನವನ್ನು ಜ್ಞಾನ ವೃದ್ಧಿಗೆ ಬಳಸಬೇಕೆ ಹೊರತು ತಂತ್ರಜ್ಞಾನದ ಬಳಕೆಯಿಂದ ತೊಂದರೆಗೆ ಒಳಗಾಗಬಾರದು ಎಂದರು.
ಸೈಬರ್ ಕ್ರೈಂ ವಿಭಾಗದ ಅಧಿಕಾರಿ ಸುದರ್ಶನ ಮಾತನಾಡಿ, ವಿದ್ಯಾವಂತರು ಹೆಚ್ಚಿನ ಸಂಖ್ಯೆಯಲ್ಲಿ ಈ ಸೈಬರ್ ವಂಚನೆಯ ಜಾಲಕ್ಕೆ ಒಳಗಾಗುತ್ತಿದ್ದು, ಸರಿಯಾದ ಜ್ಞಾನ-ತಿಳುವಳಿಕೆ ಇಲ್ಲದೇ ನಾವಾಗಿಯೇ ಅಂತರ್ಜಾಲ ಬಳಕೆ ವೇಳೆ ತಪ್ಪುಗಳನ್ನು ಮಾಡಿ ತೊಂದರೆಗೀಡಾಗುತ್ತೇವೆ. ಆನ್‌ಲೈನ್ ಹೂಡಿಕೆ, ಆಕರ್ಷಕ ಜಾಹೀರಾತುಗಳು ಸೇರಿದಂತೆ ಅನೇಕ ವಂಚನೆಗಳಿಗೆ ಒಳಗಾಗುವ ಯುವ ಜನತೆಗೆ ಪ್ರಾಥಮಿಕ ಮಾಹಿತಿ ಇಲ್ಲದೇ ಇರುವದೇ ಇದಕ್ಕೆ ಕಾರಣವಾಗಿದೆ. ಇ-ಮೇಲ್ ಹಾಗೂ ಮೊಬೈಲ್ ಸಂಖ್ಯೆಗೆ ಬರುವ ಅನವಶ್ಯಕ ಲಿಂಕ್ ಒತ್ತುವ ಮೂಲಕ ತಮ್ಮ ವೈಯಕ್ತಿಕ ಮಾಹಿತಿ ನೀಡುವುದರಿಂದ ವಂಚನೆಗಳು ಹೆಚ್ಚಾಗುತ್ತಿವೆ. ವೈಯಕ್ತಿಕ ಮಾಹಿತಿ, ಒಟಿಪಿ, ಬ್ಯಾಂಕ್ ವಿವರ ಮತ್ತಿತರ ಮಾಹಿತಿಯನ್ನು ಯಾರೊಂದಿಗೂ ಹಂಚಿಕೊಳ್ಳಬಾರದು ಎಂದರು.
ಜಿಲ್ಲಾ ಮಾಹಿತಿ ಕೇಂದ್ರದ ಅಧಿಕಾರಿ ಸಾಗರ ಮಾತನಾಡಿ, ಪ್ರತಿ ವರ್ಷ ಫೆಬ್ರವರಿ ತಿಂಗಳ 2ನೇ ಮಂಗಳವಾರ ರಂದು ವಿಶ್ವ ಸುರಕ್ಷಿತ ಅಂತರ್ಜಾಲ ದಿನ ಆಚರಿಸಲಾಗುತ್ತಿದ್ದು, ಇಂಟರ್ನೆಟ್ ಮೂಲಕ ನಡೆಯುವ ಅಪರಾಧಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಹಾಗೂ ಸುರಕ್ಷಿತ ಅಂತರ್ಜಾಲ ಬಳಕೆಯ ಬಗ್ಗೆ ಅರಿವು ಮೂಡಿಸಲು ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ಯಾವುದೇ ರೀತಿಯ ಸೈಬರ್ ವಂಚನೆಯಾದಲ್ಲಿ ಉಚಿತ ದೂರವಾಣಿ ಸಂಖ್ಯೆ. 1930 ಸಂಪರ್ಕಿಸುವಂತೆ ತಿಳಿಸಿದರು. ಕಾರ್ಯಾಗಾರದಲ್ಲಿ ಭೂ ದಾಖಲೆಗಳ ಉಪ ನಿರ್ದೇಶಕ ಸಂದೀಪ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 