ಸಾಂಪ್ರದಾಯಿಕ ಗುಲಾಮಗಿರಿಯಿಂದ ಮುಕ್ತರಾಗಿರಿ; ಪ್ರೊ ಸಿದ್ದರಾಮಯ್ಯ
ವಿಜಯನಗರ 08: ದೇಶವು ಸಾಂಪ್ರದಾಯಿಕ ಗುಲಾಮಗಿರಿಯಿಂದ ಮುಕ್ತವಾದರೆ ಮಾತ್ರ ಸಂಪೂರ್ಣ ಸ್ವಾತಂತ್ರ್ಯ ಹೊಂದಬಹುದು ಎಂದು ಖ್ಯಾತ ಸಾಹಿತಿಯಾದ ಪ್ರೊ. ಎಸ್.ಜಿ ಸಿದ್ದರಾಮಯ್ಯ ಹೇಳಿದರು. ನಗರದ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಹಾಗೂ ಗಾಲಿ ರುಕ್ಮಣಮ್ಮ ಚೆಂಗಾರೆಡ್ಡಿ ಸ್ಮಾರಕ ಸರ್ಕಾರಿ ವಾಣಿಜ್ಯ ಮತ್ತು ನಿರ್ವಹಣ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಕಾಲೇಜು ಸಭಾಂಗಣದಲ್ಲಿ ಅಯೋಜಿಸಲಾಗಿದ್ದ “ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣ” ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಗಣ್ಯರೊಂದಿಗೆ ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಹನ್ನೇರಡನೆ ಶತಮಾನದಲ್ಲಿ ಬಸವಣ್ಣನವರ ಕ್ರಾಂತಿಕಾರಕ ‘ಮಾನವ ಧರ್ಮ’ ಹೊಸ ವೈಚಾರಿಕತೆಯೆಡೆಗೆ ಸಾಗಿತ್ತು. ಭಾಷೆ, ಸಂಸ್ಕೃತಿ, ಪರಂಪರೆಯಲ್ಲಿ ಚಳುವಳಿಗಳಿಂದ ಮೂಡಿದ ಹೊಸ ಬದಲಾಣೆಯಿಂದಾಗಿ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಸರ್ಕಾರ ಗುರುತಿಸಿದೆ. ಕೇವಲ ಜನಾಂಗ, ರಾಜಕೀಯದಿಂದ ದೇಶಕ್ಕೆ ಸ್ವಾತಂತ್ರ್ಯ ದೊರೆತಿದೆ ಎನ್ನುವುದಕ್ಕಿಂತ ಅಭಿವೃದ್ಧಿಪರ ವಾಸ್ತವಿಕತೆಯಲ್ಲಿ ಜನರು ಜೀವಿಸಿದಾದ ನಿಜವಾದ ಸ್ವಾತಂತ್ರ್ಯದ ಅನುಭವ ಸಿಗುತ್ತದೆ ಎಂದರು. ಮಹಾನ್ ವ್ಯಕ್ತಿತ್ವವುಳ್ಳ ಗಾಂಧೀಜಿ, ಅಂಬೇಡ್ಕರ್ ಅವರ ವೈಚಾರಿಕ ತತ್ವಗಳಿಂದ ಇಂದು ದೇಶವನ್ನು ಗುರಿತಿಸಲಾಗುತ್ತಿದೆ ಎಂದು ಹೇಳಿದರು. ಕಾರ್ಯಕ್ರಮದ ಉದ್ಘಾಟಕರಾಗಿದ್ದ ವಿವಿಯ ಕುಲಪತಿಗಳಾದ ಪ್ರೊ. ಎಂ. ಮುನಿರಾಜು ಮಾತನಾಡಿ, ವಿದ್ಯಾರ್ಥಿಗಳು ಕೌಶಲ್ಯ ಭರಿತ ಕೋರ್ಸುಗಳನ್ನು ಕಲಿತಲ್ಲಿ ಭವಿಷ್ಯದಲ್ಲಿ ಅವು ಉದ್ಯೋಗ ಸೃಷ್ಟಿಸುತ್ತವೆ. ಇನ್ಪೋಸಿಸ್‌ನ ನಾರಾಯಣ ಮೂರ್ತಿ, ಅಂಬಾನಿ, ಅದಾನಿಯವರ ಸಾಧನೆಯನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. ಮುಂಬರುವ ದಿನಗಳಲ್ಲಿ ಕೌಶಲ್ಯಾಧಾರಿತ ಕೋರ್ಸಗಳನ್ನು ವಿಶ್ವವಿದ್ಯಾಲಯದಲ್ಲಿ ಪ್ರಾರಂಭಿಸಲಾಗುವುದು ಎಂದರು. ವಿವಿಯ ಕಲಾ ನಿಕಾಯದ ಡೀನರದ ಪ್ರೊ. ಎನ್. ಶಾಂತನಾಯ್ಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ವೇದಿಕೆ ಮೇಲೆ ಕಾಲೇಜು ಪ್ರಾಂಶುಪಾಲರಾದ ಡಾ. ಎನ್ ಸತ್ಯವತಿ, ಗಣಕಯಂತ್ರ ವಿಭಾಗದ ಡಾ. ಹೆಚ್ ರಾಚಪ್ಪ, ಡಾ. ಹನುಮೇಶ್, ಜಯಶೀಲ, ಡಾ. ವೇದಾಂತ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಹನುಮಂತಪ್ಪ ನಿರೂಪಿಸಿ ವಂದಿಸಿದರು. ಕಾಲೇಜು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.