ವಿಜಯಪುರ ಮೇ.29 : ಜಿಲ್ಲೆಯ ಭೀಮಾ ಮತ್ತು ಕೃಷ್ಣಾ ನದಿ ಪಾತ್ರದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಿಯಂತ್ರಿಸುವ ಜೊತೆಗೆ ಅಕ್ರಮವಾಗಿ ಸಾಗಾಣಿಕೆ ಬಗ್ಗೆಯೂ ತೀವ್ರ ನಿಗಾ ಇಡುವಂತೆ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ವಿಡಿಯೋ ಸಂವಾದ ಸಭಾಂಗಣದಲ್ಲಿಂದು ತಾಲೂಕಾ ಮಟ್ಟದ ಕಂದಾಯ, ಪೊಲೀಸ್, ಗಣಿ ಮತ್ತು ಭೂವಿಜ್ಞಾನ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು ತಾಲೂಕಾ ಮಟ್ಟದಲ್ಲಿ ಉಪವಿಭಾಗಾಧಿಕಾರಿಗಳ ನೇತೃತ್ವದಲ್ಲಿರುವ ತಾಲೂಕಾ ಕಾರ್ಯಪಡೆ ಸಮಿತಿ ಇನ್ನೂ ಚುರುಕಾಗಿ ಕಾರ್ಯನಿರ್ವಹಿಸುವ ಮೂಲಕ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಭೀಮಾ ನದಿ ತೀರ ವಿಶೇಷವಾಗಿ ಇಂಡಿ ತಾಲೂಕಾ ವ್ಯಾಪ್ತಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ತಡೆಗಾಗಿ ಉಪ ವಿಭಾಗಾಧಿಕಾರಿಗಳ ಕಾಯರ್ಾಲಯದಲ್ಲಿ ವಿಶೇಷವಾದ ಇಬ್ಬರು ಅಧಿಕಾರಿಗಳನ್ನು 24*7 ಕಾಲ ನಿಯೋಜಿಸಿ, ಭೀಮಾ ನದಿ ನೀರು ಬರುವವರೆಗೆ ತೀವ್ರ ನಿಗಾ ಇಡಲು ಉದ್ದೇಶಿಸಲಾಗಿದೆ. ಅದರಂತೆ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ತಾಲೂಕಾ ಟಾಸ್ಕ್ಫೋಸರ್್ ಸಮಿತಿ ಇದ್ದು, ಪೊಲೀಸ್ ಉಪ ಅಧೀಕ್ಷಕರು, ತಹಶೀಲ್ದಾರ, ಲೋಕೋಪಯೋಗಿ ಇಲಾಖೆ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳನ್ನು ಒಳಗೊಂಡ ಸಮಿತಿಯು ಚುರುಕಾಗಿ ಕಾರ್ಯನಿರ್ವಹಿಸಬೇಕು. ಅಕ್ರಮ ಮರಳು ಗಣಿಗಾರಿಕೆ ಕುರಿತು ಬರುವ ದೂರುಗಳಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಮತ್ತು ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸುವಂತೆ ತಿಳಿಸಿ, ಅವಶ್ಯಕ ಸಂದರ್ಭದಲ್ಲಿ ಪೊಲೀಸ್ ಇಲಾಖೆ ನೆರವು ಪಡೆಯಲು ತಿಳಿಸಿದರು.
ಅದರಂತೆ ಇಂಡಿ, ಮೊರಟಗಿ ಚೆಕ್ಪೋಸ್ಟ್ ವ್ಯಾಪ್ತಿಯಲ್ಲಿ ತೀವ್ರ ನಿಗಾ ಇಡಬೇಕು. ಪ್ರಾದೇಶಿಕ ಸಾರಿಗೆ ಅಧಿಕಾರಿಯೊಬ್ಬರನ್ನು ತಾಲೂಕಾ ಟಾಸ್ಕ್ಫೋಸರ್್ ಸಮಿತಿ ಅಡಿಯಲ್ಲಿ ನೇಮಿಸಬೇಕು. ದೂರುಗಳು ಬಂದ ತಕ್ಷಣ ವಿಳಂಬವಿಲ್ಲದೆ ತಕ್ಷಣ ಕ್ರಮ ಕೈಗೊಳ್ಳಬೇಕು, ತಾಳಿಕೋಟೆಯಲ್ಲಿ ತಹಶೀಲ್ದಾರರು ಪೊಲೀಸ್ ಇಲಾಖೆಯೊಂದಿಗೆ ಸಮನ್ವಯತೆ ಸಾಧಿಸಿ ಕ್ರಮ ಕೈಗೊಳ್ಳಬೇಕು.
ಯಾವುದೇ ರೀತಿಯ ನಿರ್ಲಕ್ಷ ಮತ್ತು ಸಮನ್ವಯತೆ ಕೊರತೆಯಿಂದ ಲೋಪವಾದಲ್ಲಿ ಸೂಕ್ತ ಕ್ರಮಕೈಗೊಳ್ಳುವುದಾಗಿ ತಿಳಿಸಿದ ಅವರು ವಿಜಯಪುರ ಕೃಷ್ಣಾ ನದಿ ತೀರದ ವ್ಯಾಪ್ತಿಯಲ್ಲಿಯೂ ತೀವ್ರ ನಿಗಾ ಇಡುವ ಕಾರ್ಯವನ್ನು ಸಂಬಂಧಪಟ್ಟ ಅಧಿಕಾರಿಗಳು ಮಾಡಬೇಕು. ವಿಶೇಷವಾಗಿ ಬಬಲೇಶ್ವರ ತಹಶೀಲ್ದಾರ ಈ ಕುರಿತು ವಿಶೇಷ ನಿಗಾ ಇಡುವಂತೆ ಸೂಚಿಸಿ ಆಡಳಿತದ ಸಮರ್ಪಕ ನಿರ್ವಹಣೆಗೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಲೋಪಕ್ಕೆ ಅವಕಾಶ ನೀಡದಂತೆ ಅವರು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್ ಅವರು ಅಕ್ರಮ ಗಣಿಗಾರಿಕೆ ತಡೆಗೆ ತಾಲೂಕಾವಾರು ಸಹಾಯವಾಣಿ ಮತ್ತು ವಿಚಕ್ಷಣಾ ತಂಡಗಳ ರಚನೆ ಮತ್ತು ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸುವ ಕುರಿತಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ ನೂತನ ಮರಳು ನೀತಿ ಅನ್ವಯ ಕಾರ್ಯನಿರ್ವಹಿಸುವ ಕುರಿತು ಸಭೆಯಲ್ಲಿ ಚಚರ್ಿಸಲಾಯಿತು. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಸೇರಿದಂತೆ ಗಣಿ ಮತ್ತು ಭೂವಿಜ್ಞಾನ, ಪೊಲೀಸ್, ಲೋಕೋಪಯೋಗಿ, ಕಂದಾಯ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ತಂಬಾಕು ಉತ್ಪನ್ನ ಮಾರಾಟ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚನೆ