ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದಿದ್ದರೆ, ಉಗುಳಿದರೆ ದಂಡ ಹಾಕುವ ಎಚ್ಚರಿಕೆ
ಹಾವೇರಿ: ಮೇ 02: ಕೋವಿಡ್ ಸೋಂಕಿನ ಕಟ್ಟುನಿಟ್ಟಿನ ನಿಯಂತ್ರಣದಿಂದ ಹಸಿರುವ ವಲಯದಲ್ಲಿರುವ ಹಾವೇರಿ ಜಿಲ್ಲೆಯಲ್ಲಿ ಕೆಲವೊಂದು ವ್ಯಾಪಾರ ವಹಿವಾಟು, ಚಟುವಟಿಕೆಗಳಿಗೆ ವಿನಾಯಿತಿ ನೀಡಲಾಗಿದೆ. ಆದರೆ ಸಾರ್ವಜನಿಕರಿಗೆ ಅವಶ್ಯ ಸೇವೆಗಳ ಪೂರೈಕೆ, ವಲಸೆ ಕಾಮರ್ಿಕರಿಗೆ ವಸತಿ, ಸುರಕ್ಷತೆ ಹಾಗೂ ಸಾರ್ವಜನಿಕ ಕುಂದುಕೊರತೆಗಳ ಬಗ್ಗೆ ನಿಗಾವಹಿಸುವುದು ಸೇರಿದಂತೆ ನಿಷೇಧಾಜ್ಞೆ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಹಾಗೂ ರಿಯಾಯಿತಿಯಿಂದ ರೋಗ ಹರಡದಂತೆ ತಡೆಯಲು ಅಪರ ಜಿಲ್ಲಾಧಿಕಾರಿ ಯೋಗೇಶ್ವವರ ಅವರನ್ನು ನೋಡಲ್ ಅಧಿಕಾರಿಯಾಗಿ ನಿಯೋಜಿಸಲಾಗಿದೆ.
ಗ್ರಾಮೀಣ ಮತ್ತು ನಗರ ವಲಯದಲ್ಲಿ ಕೋವಿಡ್ ಸೋಂಕು ತಡೆಯುವ ನಿಟ್ಟಿನಲ್ಲಿ ನಿಯಮಗಳ ಪಾಲನೆಯ ನಿಗಾಕ್ಕೆ ನಗರ ವಲಯಕ್ಕೆ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿದರ್ೆಶಕರನ್ನು ಹಾಗೂ ಗ್ರಾಮೀಣ ವಲಯಕ್ಕೆ ಜಿಲ್ಲಾ ಪಂಚಾಯತಿಯ ಡಿ.ಆರ್.ಡಿಎ. ಯೋಜನಾ ನಿದರ್ೆಶಕರನ್ನು ನೇಮಕ ಮಾಡಲಾಗಿದೆ ಹಾಗೂ ತಾಲೂಕಾವಾರು ಸೆಕ್ಟರ್ ಅಧಿಕಾರಿಗಳನ್ನು ನಿಯೋಜಿಸಿ ಈಗಾಗಲೇ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಸಕರ್ಾರದ ನಿದರ್ೆಶನದಂತೆ ಹಸಿರು ವಲಯದಲ್ಲಿ ಸಾಂಕ್ರಾಮಿಕ ರೋಗ ತಡೆಯುವ ನಿಟ್ಟಿನಲ್ಲಿ ಸಾರ್ವಜನಿಕರು ಮತ್ತು ಅಂಗಡಿ ಮಾಲೀಕರು ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಐದು ಜನಕ್ಕಿಂತ ಹೆಚ್ಚು ಜನ ಒಂದೆಡೆ ಸೇರಬಾರದು. ಸಾರ್ವಜನಿಕರು ಅಂಗಡಿಯ ಒಳಭಾಗದಲ್ಲಿ ಹಾಗೂ ಹೊರಭಾಗದಲ್ಲಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಕನಿಷ್ಠ ಒಂದು ಮೀಟರ್ ಅಂತರವನ್ನು ಕಡ್ಡಾಯವಾಗಿ ಕಾಯ್ದುಕೊಳ್ಳಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮದುವೆ, ಸಂತೆ, ಜಾತ್ರೆ ಇತ್ಯಾದಿ ಸಾರ್ವಜನಿಕ ಸಮಾರಂಭಗಳು ನಡೆಯದಂತೆ ನೋಡಿಕೊಳ್ಳಬೇಕು. ಸಾರ್ವಜನಿಕ ಸ್ಥಳದಲ್ಲಿ ಉಗುಳದಂತೆ ಕ್ರಮಕೈಗೊಳ್ಳಬೇಕು. ಅಂಗಡಿ ಮಾಲೀಕರು ಕಡ್ಡಾಯವಾಗಿ ಸಾರ್ವಜನಿಕರು ಅಂಗಡಿಗಳ ಒಳಬರುವ ಪೂರ್ವದಲ್ಲಿ ಜ್ವರ ಪರೀಕ್ಷೆ ಮತ್ತು ಸ್ಯಾನಿಟೈಜರ್ ಬಳಕೆಯನ್ನು ಕಡ್ಡಾಯವಾಗಿ ಪಾಲಿಸುವಂತೆ ನೋಡಿಕೊಳ್ಳುವುದು, ಸಾಮಾಜಿಕ ಅಂತರ ಕಾಪಾಡದ ಅಂಗಡಿ ಮಾಲೀಕರ ಲೈಸನ್ಸ್ ರದ್ದುಪಡಿಸಿ ದಂಡವಿಧಿ ವರದಿ ಸಲ್ಲಿಸುವುದು, ಪ್ರತಿನಿತ್ಯ ಜನಜಂಗುಳಿ ಇರುವ ಅಂಗಡಿಗಳ ವಿಡಿಯೋಗ್ರಾಫೀಮಾಡಿ ಡಿವಿಡಿಯೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಕಡ್ಡಾಯವಾಗಿ ವರದಿ ಸಲ್ಲಿಸಬೇಕು. ಪ್ರತಿನಿತ್ಯ ಸೆಕ್ಟರ್ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಈ ಮೇಲ್ಕಂಡ ನಿಯಮ ಪಾಲನೆ ಕುರಿತಂತೆ ಛಾಯಾಚಿತ್ರದೊಂದಿಗೆ ವರದಿ ಸಲ್ಲಿಸಬೇಕು. ಈ ಕುರಿತಂತೆ ನಿದರ್ೆಶನ ಪಾಲಿಸದೇ ಇದ್ದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಚ್ಚರಿಸಲಾಗಿದೆ.
ಮೇಲಿನ ನಿಯಮಗಳನ್ನು ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ಪಾಲಿಸದೇ ಇದ್ದರೆ ವಿಪತ್ತು ನಿರ್ವಹಣಾ ಕಾಯ್ದೆಯಂತೆ ದಂಡ ವಿಧಿಸಲು ಅವಕಾಶವಿದೆ. ಮೊದಲನೇ , ಎರಡನೇ ಹಾಗೂ ಮೂರನೇ ಉಲ್ಲಂಘನೆ ಪ್ರಕರಣಗಳಿಗೆ ತಲಾ 100 ರೂ. ಹಾಗೂ ನಂತರದ ಪದೆ ಪದೆ ಉಲ್ಲಂಘನೆ ಮುಂದುವರಿಸಿದರೆ ವಿಪತ್ತು ನಿರ್ವಹಣೆ ಕಾಯ್ದೆ ಕಲಂ 51 ರಂತೆ ಪ್ರಕರಣಗಳನ್ನು ದಾಖಲಿಸಲು ಕೋವಿಡ್ ಸಾಂಕ್ರಾಮಿಕ ರೋಗ ತಡೆಯ ಜಿಲ್ಲಾ ನೋಡಲ್ ಅಧಿಕಾರಿಗಳಾದ ಅಪರ ಜಿಲ್ಲಾ ದಂಡಾಧಿಕಾರಿ ಯೋಗೇಶ್ವರ ಅವರು ಆದೇಶಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 