ಪವರ್ ಹೌಸ್ ಬಳಿ ಕರಡಿ ಸಂಚಾರ
Bear traffic near the power house
ದಾಂಡೇಲಿ 27 : ಅಂಬಿಕಾನಗರ ಪವರ್ ಹೌಸ್ ಸಮೀಪ ಬೆಳಗಿನ ಜಾವ ಕರಡಿಯೊಂದು ರಸ್ತೆಯಲ್ಲಿ ಸಂಚರಿಸಿದ್ದು, ಇದು ಕೆಪಿಸಿ ನೌಕರರು ಹಾಗೂ ಸ್ಥಳೀಯರಲ್ಲಿ ಆತಂಕ ತಂದಿದೆ. ಶನಿವಾರ ಬೆಳಗ್ಗೆ ಸುಮಾರು 6 ಗಂಟೆಗೆ ದಟ್ಟ ಅರಣ್ಯದ ನಡುವಿನಿಂದ ಬಂದ ಕರಡಿಯೊಂದು ಅಂಬಿಕಾನಗರದ ಮುಖ್ಯ ರಸ್ತೆಯಲ್ಲಿ ಸಂಚರಿಸಿದೆ. ಕರಡಿ ಓಡಾಟವನ್ನು ವಾಹನ ಸವಾರರ ಗಮನಕ್ಕೆ ಬಂದಿದೆ. ರಸ್ತೆಯಲ್ಲಿ ಸಹಜವಾಗಿ ಸಾಗುತ್ತಿದ್ದ ಕರಡಿಯ ಎದುರಿಗೆ ವಾಹನವ ಕಂಡು ಗಾಬರಿಯಾದ ಕರಡಿ, ತಕ್ಷಣ ಹಿಂದಿರುಗಿ ಅದೇ ರಸ್ತೆಯಲ್ಲೇ ಓಡಿದೆ.
ಈ ಅಪರೂಪದ ದೃಶ್ಯವನ್ನು ವಾಹನದಲ್ಲಿದ್ದವರು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ. ಕರಡಿ ರಸ್ತೆಯಲ್ಲಿ ಓಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ದಾಂಡೇಲಿ ಸುತ್ತಮುತ್ತ ದಟ್ಟ ಅರಣ್ಯ ಪ್ರದೇಶ ಇರುವುದರಿಂದ ಇತ್ತೀಚಿನ ದಿನಗಳಲ್ಲಿ ವನ್ಯಜೀವಿಗಳ ಸಂಚಾರ ಹೆಚ್ಚಾಗಿದೆ. ಆಹಾರ ಅರಸಿ ಕಾಡುಪ್ರಾಣಿಗಳು ಜನವಸತಿ ಪ್ರದೇಶಗಳತ್ತ ಬರುತ್ತಿರುವುದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.ಕರಡಿ ಸೇರಿದಂತೆ ವನ್ಯಜೀವಿಗಳ ಚಲನವಲನದ ಬಗ್ಗೆ ಅರಣ್ಯ ಇಲಾಖೆ ನಿಗಾ ವಹಿಸಿ, ಸಾರ್ವಜನಿಕರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 