ಯರಗಟ್ಟಿಯಲ್ಲಿ ಬೀರ್ಪ ದೇವರ ಜಾತ್ರೆ
Beerpa Devara Jathre in Yaragatti
ಯರಗಟ್ಟಿ 08: ಸ್ಥಳೀಯ ಬೀರ್ಪನ ಗುಡ್ಡದಲ್ಲಿ ಬೀರ್ಪ ದೇವರ ಜಾತ್ರಾ ಮಹೋತ್ಸವ ಅತ್ಯಂತ ಸಂಭ್ರಮ ಹಾಗೂ ವಿಜೃಂಭಣೆಯಿಂದ ನಡೆಯಿತು. ಜಾತ್ರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಶಾಸಕ ವಿಶ್ವಾಸ ವೈದ್ಯ ಭಾಗವಹಿಸಿ ಬೀರ್ಪ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಶಾಸಕರು, ದೇವಾಲಯಕ್ಕೆ 24 ಗಂಟೆಗಳ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ದೇವಾಲಯ ಅಭಿವೃದ್ಧಿ ಮಂಡಳಿಗೆ ಮನವಿ ಮಾಡಿದರು. ದೇವಾಲಯದಲ್ಲಿ ಜಾಗವಿದ್ದು, ಸುಸಜ್ಜಿತ ಸಮುದಾಯ ಭವನ ನಿರ್ಮಿಸಿ ನೀಡುವುದಾಗಿ ಭರವಸೆ ನೀಡಿದರು.
ಬೀರ್ಪ ದೇವರ ಕೃಪಾಕಟಾಕ್ಷ ಹಾಗೂ ಆಶೀರ್ವಾದ ಸದಾ ಸವದತ್ತಿ ಕ್ಷೇತ್ರದ ಜನತೆಯ ಮೇಲಿರಲಿ. ಎಲ್ಲರಿಗೂ ಸುಖ, ಶಾಂತಿ, ಸಮೃದ್ಧಿ ಹಾಗೂ ಆರೋಗ್ಯ ದೊರೆಯಲಿ ಎಂದು ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ. ಸದಸ್ಯರಾದ ಹನುಮಂತ ಹಾರೂಗೊಪ್ಪ, ನಿಖಿಲ್ ಪಾಟೀಲ್, ಎಪಿಎಂಸಿ ಅಧ್ಯಕ್ಷ ನೀಲಕಂಠ ಸಿದ್ದಬಸವರ, ಮಾಜಿ ತಾ.ಪಂ. ಸದಸ್ಯ ವಿಠ್ಠಲಗೌಡ ದೇವರಡ್ಡಿ ಸೇರಿದಂತೆ ಹಲವು ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 