ಸರಣಿ ಕೊಲೆಗಳ ಭೀತಿ ಮಾಸುವ ಮುನ್ನವೇ ಮತ್ತೊಂದು ಭೀಕರ ಕೊಲೆ ದುಷ್ಕರ್ಮಿಗಳಿಂದ ವ್ಯಕ್ತಿಯೊಬ್ಬನ ಬರ್ಬರ ಹತ್ಯೆ
Before the fear of serial killings subsides, another gruesome murder: a man brutally murdered by cri
ಲೋಕದರ್ಶನ ವರದಿ,
ಜಮಖಂಡಿ 15: ತಾಲೂಕಿನ ಸಾವಳಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಣಿ ಕೊಲೆಗಳ ಭೀತಿ ಮಾಸುವ ಮುನ್ನವೇ ಮತ್ತೊಂದು ಭೀಕರ ಕೊಲೆ ನಡೆದಿದ್ದು, ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಕುರಗೋಡ ಗ್ರಾಮದಲ್ಲಿ ವ್ಯಕ್ತಿಯೊಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ್ದಾರೆಂದು ಶಂಕಿಸಲಾಗಿದೆ. ಕುರಗೋಡ ಗ್ರಾಮದ ನಿವಾಸಿ ಸಿದ್ದನಗೌಡ ಮಲ್ಲಪ್ಪ ಬಿರಾದರ (34) ಎಂಬುವವರೇ ಕೊಲೆಯಾದ ದುರ್ದೈವಿ. ಗ್ರಾಮದ ಕಿನಾಲ್ ರಸ್ತೆಯ ಮೇಲೆ ಸಿದ್ದನಗೌಡ ಅವರು ತಮ್ಮ ಬಜಾಜ್ ವಿಕ್ರಾಂತ್ ಮೋಟಾರ್ ಬೈಕ್ ಮೇಲೆ ಸಂಚರಿಸುತ್ತಿದ್ದಾಗ ಈ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದೆ. ರಸ್ತೆಯ ಪಕ್ಕದಲ್ಲಿ ಬೈಕ್ ಬಿದ್ದಿದ್ದು, ಅದರ ಸಮೀಪದಲ್ಲೇ ರಕ್ತಸಿಕ್ತ ಸ್ಥಿತಿಯಲ್ಲಿ ಸಿದ್ದನಗೌಡ ಅವರ ಶವ ಪತ್ತೆಯಾಗಿದೆ.
ಘಟನಾ ಸ್ಥಳಕ್ಕೆ ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಡಿವೈಎಸ್ಪಿ ಸೈಯದ್ ರೋಷನ್ ಜಮೀರ, ಸಿಪಿಐ ಮಲ್ಲಪ್ಪ ಮಡ್ಡಿ ಹಾಗೂ ಸಾವಳಗಿ ಪಿಎಸ್ಐ ಅಪ್ಪಣ್ಣ ಐಗಳಿ ಅವರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ. ಸಾವಳಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ನಿಖರವಾದ ಮಾಹಿತಿ ತಿಳಿದುಬಂದಿರುವುದಿಲ್ಲ. ಪೋಲಿಸರಿಂದ ಸಂಪೂರ್ಣ ಮಾಹಿತಿ ತಿಳಿದುಬರಬೇಕಾಗಿದೆ.
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ 