ಬೆಂಗಳೂರಿನ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಮನೆ ಬಾಗಿಲಿಗೆ ಅಗತ್ಯ ವಸ್ತುಗಳ ಪೂರೈಕೆ ಆರಂಭ
ಬೆಂಗಳೂರು, ಏ 12 ,ಲಾಕ್ ಡೌನ್ ಅವಧಿಯಲ್ಲಿ ಜನರು ಮನೆಗಳಿಂದ ಹೊರಗೆ ಬಾರದಂತೆ ತಡೆಯುವ ಉದ್ದೇಶದಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಇಂದಿನಿಂದ ಮನೆ ಬಾಗಿಲಿಗೆ ಅಗತ್ಯ ವಸ್ತುಗಳನ್ನು ಪೂರೈಸುವ ಯೋಜನೆ ಆರಂಭಿಸಲಾಗಿದೆ. ಬಸವನಗುಡಿ, ಜಯನಗರ, ಪದ್ಮನಾಭನಗರ ಹಾಗೂ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರಗಳ ಸಹಾಯವಾಣಿಗೆ ಕಂದಾಯ ಸಚಿವ ಆರ್. ಅಶೋಕ್ ಈ ಕುರಿತ ಸಹಾಯವಾಣಿಗೆ ಚಾಲನೆ ನೀಡಿದರು.
ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಆರ್. ಅಶೋಕ್, ಲಾಕ್ ಡೌನ್ ಸಂದರ್ಭದಲ್ಲಿ ಮನೆಯಲ್ಲಿರುವಂತೆ ಸೂಚಿಸಿದ್ದರೂ ಸಹ ಕಾಲ್ನಡಿಗೆಯಲ್ಲಿ ಮತ್ತು ವಾಹನಗಳಲ್ಲಿ ಜನ ಸಂಚರಿಸುವುದನ್ನು ತಪ್ಪಿಸುವುದು ಕಷ್ಟ ಸಾಧ್ಯವಾಗಿದೆ. ಈ ಕುರಿತು ಪೊಲೀಸರು ಪ್ರಶ್ನಿಸಿದಾಗ ಅಗತ್ಯ ವಸ್ತು ಖರೀದಿಸಲು ಹೊರಬಂದಿರುವುದಾಗಿ ಉತ್ತರಿಸುತ್ತಿದ್ದಾರೆ. ಕೊರೊನಾ ಸೋಂಕು ಹರಡದಂತೆ ಎಚ್ಚರವಹಿಸಲು ಜನಜಂಗುಳಿಯನ್ನು ಕಡಿಮೆ ಮಾಡುವುದೊಂದೇ ಸದ್ಯದ ಉಪಾಯವಾಗಿರುವ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳನ್ನು ಜನರಿಗೆ ಮನೆ ಬಾಗಿಲಲ್ಲೇ ತಲುಪಿಸುವ ಮೂಲಕ ಅವರು, ಹೊರಗೆ ಬರದಂತೆ ನೋಡಿಕೊಳ್ಳಬೇಕಾಗಿದೆ ಎಂದರು. ಈ ಉದ್ದೇಶದಿಂದಲೇ ದಿನಬಳಕೆಯ ಅಗತ್ಯ ವಸ್ತುಗಳು, ದಿನಸಿ, ತರಕಾರಿ, ಔಷಧಿ ಸಾಮಗ್ರಿಗಳನ್ನು ಮನೆ ಬಾಗಿಲಿಗೆ ತಲುಪಿಸುವ ಹೋಮ್ ಡಿಲವರಿ ಸಹಾಯವಾಣಿ ಸೇವೆಯನ್ನು ಬೆಂಗಳೂರು ದಕ್ಷಿಣ ಪೊಲೀಸ್ ಇಲಾಖೆಯ ವ್ಯಾಪ್ತಿಯಲ್ಲಿ ಈ ಸೇವೆ ಲಭ್ಯವಿದೆ. ಒಂದು ಕುಟುಂಬ ವಾರಕ್ಕೆ ಎರಡು ಬಾರಿ ಈ ಸೇವೆಯನ್ನು ಪಡೆಯಬಹುದು. ೦೮೦-೬೧೯೧ ೪೯೬೦ ಸಹಾಯವಾಣಿ ಸಂಖ್ಯೆಗೆ ಕರೆ ಮಾಡುವ ಮೂಲಕ ಅಥವಾ ಇದೇ ಸಂಖ್ಯೆಗೆ ವಾಟ್ಸಾಪ್ ಮೂಲಕ ಮನವಿ ಕಳುಹಿಸಿ ಸೇವೆ ಪಡೆಯಬಹುದಾಗಿದೆ ಎಂದರು.ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮಾತನಾಡಿ, ಈಗ ಹೇಳಿದ ನಾಲ್ಕು ಬಡಾವಣೆಗಳ ಎರಡೂವರೆ ಲಕ್ಷ ಮನೆಗಳ ಏಳೂವರೆ ಲಕ್ಷ ಜನರಿಗೆ ಸುಮಾರು ೨ ಸಾವಿರ ಅಂಗಡಿಗಳ ಮೂಲಕ ಅಗತ್ಯ ವಸ್ತುಗಳನ್ನು ಮನೆಬಾಗಿಲಿಗೆ ತಲುಪಿಸಲಾಗುವುದು ಎಂದು ತಿಳಿಸಿದರು.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 