ಏಳನೇ ಆರ್ಥಿಕ ಗಣತಿ ಆರಂಭ: ವ್ಯವಸ್ಥಿತ ಗಣತಿ ಕಾರ್ಯಕ್ಕೆ ಡಿಸಿ ಸೂಚನೆ

ಹಾವೇರಿ: ಸರಕುಗಳ ಉತ್ಪಾದನೆ, ವಿತರಣೆ ಮತ್ತು ಮಾರಾಟ ಸೇವೆಗಳ ಚಟುವಟಿಕೆಗಳನ್ನು ಒಳಗೊಂಡ ಏಳನೇ ಆಥರ್ಿಕ ಗಣತಿಯು ಹಾವೇರಿ ಜಿಲ್ಲೆಯಲ್ಲಿ ಇದೇ ಜೂನ್ 15 ರಿಂದ ಮೂರು ತಿಂಗಳ ಕಾಲ ನಡೆಯಲಿದ್ದು ವ್ಯವಸ್ಥಿತ ಗಣತಿ ಕಾರ್ಯಕ್ಕೆ ಎಲ್ಲ ಇಲಾಖಾ ಅಧಿಕಾರಿಗಳು ಹಾಗೂ ಸಾರ್ವಜನಿಕರ ಸಹಕರಿಸುವಂತೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ತಿಳಿಸಿದರು.

ಏಳನೇ ಆಥರ್ಿಕ ಗಣತಿಯ ಪೂರ್ವ ಸಿದ್ಧತೆ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸಭೆ ನಡೆಸಿದ ಅವರು ಏಳನೇ ಆಥರ್ಿಕ ಗಣತಿಯು ದೇಶದ ಭೌಗೋಳಿಕ ಗಡಿಯೊಳಗೆ ನೆಲೆಗೊಂಡು ಸ್ವಂತ ಉಪಯೋಗಕ್ಕಲ್ಲದ ಸರಕುಗಳ ಉತ್ಪಾದನೆ ಅಥವಾ ಅವುಗಳ ವಿತರಣೆ ಅಥವಾ ಮಾರಾಟ ಅಥವಾ ಸೇವೆ ಇತ್ಯಾದಿ ಆಥರ್ಿಕ ಚಟುವಟಿಕೆಗಳಲ್ಲಿ ತೊಡಗಿರುವ ಉದ್ಯಮಗಳ ಅಥವಾ ಘಟಕಗಳ ಪೂರ್ಣ ಎಣಿಕೆಯಾಗಿರುತ್ತದೆ. ಈ ಗಣತಿಯು ಕೇಂದ್ರ ಹಾಗೂ ರಾಜ್ಯ ಸಕರ್ಾರಗಳಿಗೆ ಆಥರ್ಿಕ ಚಟುವಟಿಕೆ ಕುರಿತು ಯೋಜನೆಗಳನ್ನು ಕೈಗೊಳ್ಳಲು ಕೈಗೊಳ್ಳಲು ಅಂಕಿಅಂಶಗಳನ್ನು ಒದಗಿಸಲು ಪೂರಕವಾಗಿರುವ ಕಾರಣ ಅತ್ಯಂತ ವ್ಯವಸ್ಥಿತವಾಗಿ ನಿಖರವಾಗಿ ಗಣತಿ ಕಾರ್ಯಕೈಗೊಳ್ಳಲು ಗಣತಿದಾರರಿಗೆ ಮೇಲ್ವಿಚಾರಕರಿಗೆ ಸೂಕ್ತ ತರಬೇತಿಗಳನ್ನು ಆಯೋಜಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಏಳನೇ ಆಥರ್ಿಕ ಗಣತಿಯು ಜೂನ್ 15 ರಿಂದ ಆರಂಭವಾಗಿ ಅಕ್ಟೋಬರ್ 15ರವರೆಗೆ ಮೂರು ತಿಂಗಳ ಕಾಲ ನಡೆಯಲಿದೆ. ಮೊದಲ ಹಂತದಲ್ಲಿ ಕಾಮನ್ ಸವರ್ಿಸ್ ಸೆಂಟರ್(ಸಿ.ಎಸ್.ಸಿ.)ನವರು ಗಣತಿ ಕೈಗೊಳ್ಳಲಿದ್ದಾರೆ. ಎರಡನೇ ಹಂತದಲ್ಲಿ ಕೈಗಾರಿಕಾ ಇಲಾಖೆ ಹಾಗೂ ಸಾಂಖಿಕ ಇಲಾಖೆ ಮತ್ತು ಎನ್.ಎಸ್.ಎಸ್.ಒ ಮೇಲ್ವಿಚಾರಣೆಯಲ್ಲಿ ನಡೆಯಲಿದೆ. ಗಣತಿಮಾಡುವ ಸಿಬ್ಬಂದಿಗಳು ಮನೆಗಳಿಗೆ ಬಂದಾಗ ಸಾರ್ವಜನಿಕರು ಸರಿಯಾದ ಮಾಹಿತಿಯನ್ನು ನೀಡಬೇಕು. ಆಥರ್ಿಕ ಚಟುವಟಿಕೆಗಳ ಮಾಹಿತಿಯನ್ನು ನೀಡಬೇಕು. ಶಿಕ್ಷಣ ಇಲಾಖೆ, ಗ್ರಾಮ ಪಂಚಾಯತಿ ಮಟ್ಟದಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಗಣತಿದಾರರಿಗೆ ಎಲ್ಲ ರೀತಿಯ ಸಹಕಾರ ನೀಡಬೇಕು. ವಿವಿಧ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಆಥರ್ಿಕ ಗಣತಿಯನ್ನು ಯಶಸ್ವಿಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಸಾಂಖಿಕ ಅಧಿಕಾರಿ ಬಂಡಿವಡ್ಡರ ಅವರು ಮಾತನಾಡಿ, ಪ್ರಥಮ ಬಾರಿಗೆ ಏಳನೇ ಆಥರ್ಿಕ ಗಣತಿ ಕಾರ್ಯವನ್ನು ಮೊಬೈಲ್ ಆ್ಯಪ್ ಮೂಲಕ ನಡೆಸಲಾಗುತ್ತಿದೆ. ಭಾರತ ಸಕರ್ಾರದ ಕೇಂದ್ರ ಸಾಂಖಿಕ ಇಲಾಖೆ ಮಾರ್ಗದರ್ಶನದಲ್ಲಿ ಗಣತಿ ಕಾರ್ಯ ನಡೆಯಲಿದೆ. ಗ್ರಾಮೀಣ ಮತ್ತು ನಗರ ಪ್ರದೇಶಗಳ ಸಾರ್ವಜನಿಕ ಹಾಗೂ ಖಾಸಗಿ ವಲಯಗಳಲ್ಲಿರುವ ಸಂಘಟಿತ ಹಾಗೂ ಅಸಂಘಟಿತ ವಲಯಗಳ ಆಥರ್ಿಕ ಚಟುವಟಿಕೆಗಳ ಗಣತಿ ಕಾರ್ಯ ನಡೆಯಲಿದೆ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಸಮಿತಿ ರಚನೆಯಾಗಿರುತ್ತದೆ ಎಂದು ವಿವರಿಸಿದರು.

ಗಣತಿ ಕಾರ್ಯದಲ್ಲಿ ಜಿಲ್ಲಾ ಪಂಚಾಯತ್ ಹಾಗೂ  ನಗರ ಸ್ಥಳೀಯ ಮುಖ್ಯಸ್ಥರು, ನಗರ ಮತ್ತು ಗ್ರಾಮ ಮಟ್ಟದಲ್ಲಿ ಗ್ರಾಮದ ನಕಾಶೆ ಒದಗಿಸಿವುದು, ಗಣತಿ ಕುರಿತಂತೆ ಸಾರ್ವಜನಿಕರಿಗೆ ಮಾಹಿತಿ ನೀಡಲು ಡಂಗೂರ ಹೊಡೆಸುವುದು, ಜನಪ್ರತಿನಿಧಿಗಳಿಗೆ ಮಾಹಿತಿ ನೀಡುವುದು ಹಾಗೂ ಪೊಲೀಸ್ ಇಲಾಖೆಯಿಂದ ಅವಶ್ಯ ಕಂಡಲ್ಲಿ ಗಣತಿದಾರರಿಗೆ ರಕ್ಷಣೆ ಒದಗಿಸಬೇಕಾಗುತ್ತದೆ. ಸಾರ್ವಜನಿಕ ಶಿಕ್ಷಣ ಇಲಾಖೆಯು ಗಣತಿ ಕುರಿತಂತೆ ವಿದ್ಯಾಥರ್ಿಗಳಿಗೆ ಹಾಗೂ ಪಾಲಕರಿಗೆ ಅರಿವು ಮೂಡಿಸುವ ಕೆಲಸವಾಗಬೇಕು ಹಾಗೂ ವಿವಿಧ ಇಲಾಖೆಗಳು ಗಣತಿ ಕಾರ್ಯಕ್ಕೆ ಸಹಕಾರ ಬೇಕಾಗಿದೆ. ಅಗತ್ಯ ಸಹಕಾರ ನೀಡುವಂತೆ ಕೋರಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಎನ್.ತಿಪ್ಪೇಸ್ವಾಮಿ, ನಗರಾಭಿವೃದ್ಧಿ ಕೋಶದ ಯೋಜನಾ ನಿದರ್ೆಶಕ ವಾಸಣ್ಣ, ಕೈಗಾರಿಕಾ ಇಲಾಖೆ ಜಂಟಿ ನಿದರ್ೆಶಕ ಸಿದ್ದರಾಜು, ವಾತರ್ಾಧಿಕಾರಿ ಬಿ.ಆರ್.ರಂಗನಾಥ್ ವಿವಿಧ ತಾಲೂಕಿನ ತಹಶೀಲ್ದಾರರು, ಮುಖ್ಯಾಧಿಕಾರಿಗಳು, ಜಿಲ್ಲಾ ಕಾಖರ್ಾನೆ ಮತ್ತು ಬಾಯ್ಲರ್ ಇಲಾಖೆಯ ಸಹಾಯಕ ನಿದರ್ೆಶಕರು, ಜಿಲ್ಲಾ ನೋಂದಣಾಧಿಕಾರಿಗಳು, ತಾಲೂಕು ಪಂಚಾಯತಿ ಕಾರ್ಯನಿವರ್ಾಹಣಾಧಿಕಾರಿಗಳು ಇತರರು ಉಪಸ್ಥಿತರಿದ್ದರು.