ನವದೆಹಲಿ, ಏ 2,ದೇಶಾದ್ಯಂತ ಭಾರೀ ಆತಂಕ ಸೃಷ್ಟಿಸಿರುವ ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ದೇಶದ ಜನತೆ ಆರೋಗ್ಯದ ಕಡೆಗೆ ಹೆಚ್ಚು ಆದ್ಯತೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಸಲಹೆ ಮಾಡಿದ್ದಾರೆ. ಆರೋಗ್ಯವಂತ ಬದುಕು ಸಾಗಿಸಲು ಪ್ರತಿಯೊಬ್ಬರೂ ಆಯುಷ್ ಸಚಿವಾಲಯ ಹೊರಡಿಸಿರುವ ಸೂಚನೆಗಳನ್ನು ಪಾಲಿಸಬೇಕು. ಇದು ಜೀವನದ ಒಂದು ಭಾಗವಾಗುವ ಜತೆಗೆ ಇತರರಿಗೂ ಇಂತಹ ಆರೋಗ್ಯ ಸೂತ್ರಗಳನ್ನು ಹಂಚಿ ಎಂದು ಸಲಹೆ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮೋದಿ, ಆರೋಗವಂತರಾಗಿರುವುದು ಸಂತಸದ ಜೀವನಕ್ಕೆ ಮುನ್ನುಡಿ ಬರೆದಂತೆ. ಕೋವಿಡ್ 19 ಸೋಂಕು ವ್ಯಾಪಿಸಿರುವ ಇಂತಹ ಸಂದರ್ಭದಲ್ಲಿ ಆಯುಷ್ ಸಚಿವಾಲಯ ರೋಗ ನಿರೋಧಕ ಶಕ್ತಿ ವೃದ್ಧಿಸುವ ಕುರಿತು ನೀಡಿರುವ ಕ್ರಮಗಳನ್ನು ಅಳವಡಿಸಿಕೊಂಡು ತಮ್ಮ ಆರೋಗ್ಯವನ್ನು ತಾವೇ ತಾವೇ ನೋಡಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದ್ದಾರೆ.