ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ

ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ Belagavi Chalo, protest by State Weavers' Association tomorrow; list of demands to be placed before

ಬೆಳಗಾವಿ : ರಾಜ್ಯದ ಲಕ್ಷಾಂತರ ವೃತ್ತಿಪರ ನೇಕಾರರ ವಿವಿಧ ಬೇಡಿಕೆಗಳು ಹಾಗೂ ಸಮಸ್ಯೆಗಳ ಹಿನ್ನೆಲೆ ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ನೇತೃತ್ವದಲ್ಲಿ ನಾಳೆ ದಿ. 9ರಂದು "ಬೆಳಗಾವಿ ಚಲೋ" ಎಂಬ ಘೋಷಣೆಯೊಂದಿಗೆ ರಾಜ್ಯದ ನೇಕಾರರಿಗೆ ಕರೆ ನೀಡಿದೆ. ಬಳಿಕ ಬೆಳಗಾವಿ ಗೆ ಆಗಮಿಸಲಿರುವ ಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಲಿದ್ದಾರೆ.

   ದಿ. 9ರಂದು ಬೆಳಿಗ್ಗೆ 11.30 ಗಂಟೆಗೆ ಬೆಳಗಾವಿಯಲ್ಲಿ ನೇಕಾರರು ಬೃಹತ್ ಮಟ್ಟದಲ್ಲಿ ಸೇರಲಿದ್ದಾರೆ.

   ಬಳಿಕ ಮುಖ್ಯಮಂತ್ರಿಗಳಿಗೆ ಸಲ್ಲಿಸಲಿರುವ ಮನವಿಯಲ್ಲಿ ವೃತ್ತಿಪರ ನೇಕಾರರ ಸಂಪೂರ್ಣ ಸಾಲ ಮನ್ನಾ, ಆತ್ಮಹತ್ಯೆಗೆ ಶರಣಾದ ನೇಕಾರರ ಕುಟುಂಬಗಳಿಗೆ ಸೂಕ್ತ ಪರಿಹಾರ, ಬಡ್ಡಿ ಸಹಾಯಧನವನ್ನು ತಕ್ಷಣ ಬಿಡುಗಡೆ, 55 ವರ್ಷ ಮೇಲ್ಪಟ್ಟ ನೇಕಾರರಿಗೆ ತಿಂಗಳಿಗೆ ₹5,000 ಮಾಸಾಶನ, ಕಟ್ಟಡ ಕಾರ್ಮಿಕರ ಮಾದರಿಯಲ್ಲಿ ನೇಕಾರರಿಗೂ ಕಲ್ಯಾಣ ಯೋಜನೆಗಳ ಜಾರಿ ಹಾಗೂ ಕರ್ನಾಟಕ ಹ್ಯಾಂಡ್‌ಲೂಮ್ ಡೆವಲಪ್ಮೆಂಟ್ ಕಾರ್ಪೊರೇಷನ್ (KHDC) ನಲ್ಲಿ ನಡೆದಿದೆ ಎನ್ನಲಾದ ನೂರಾರು ಕೋಟಿ ರೂಪಾಯಿಗಳ ಅವ್ಯವಹಾರದ ಕುರಿತು ನ್ಯಾಯಸಮ್ಮತ ತನಿಖೆ ನಡೆಸಬೇಕು.

   ಜೊತೆಗೆ, ಹೋರಾಟಗಾರರ ಮೇಲೆ ನಡೆದ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗುವುದು ಎಂದು ತಿಳಿಸಲಾಗಿದೆ.

   ಈ ವಿಷಯವನ್ನು ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ಮುಖಂಡ ಶಿವಲಿಂಗ ಜಿ. ತಿರಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.