ಬೆಳಗಾವಿ ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರಿಕೆ ಬಿಡುಗಡೆ ಕನ್ನಡ ಕೈಂಕರ್ಯಕ್ಕೆ ಕೈಜೋಡಿಸಿ : ಈರಣ್ಣಗೌಡ
Belagavi District 17th Kannada Sahitya Sammelan invitation letter released Join hands with Kannada K
ಹಾರೂಗೇರಿ, 01 : ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಮನಸ್ಸುಗಳನ್ನು ಕಟ್ಟುವ ಮಹತ್ತರ ಕಾರ್ಯವಾಗಿದ್ದು, ಇತರ ಸಮ್ಮೇಳನಗಳಿಗಿಂತ ಬೆಳಗಾವಿ ಜಿಲ್ಲಾ ಸಮ್ಮೇಳನ ವಿಶೇಷ ಹಾಗೂ ಉತ್ಕೃಷ್ಟವಾಗಿರಲು ಕನ್ನಡದ ಕೈಂಕರ್ಯಕ್ಕೆ ಪ್ರತಿಯೊಬ್ಬರೂ ಕೈ ಜೋಡಿಸಬೇಕೆಂದು ರಾಯಬಾಗ ತಾಲೂಕು ಕಸಾಪ ಅಧ್ಯಕ್ಷ ಈರಣ್ಣಗೌಡ ಪಾಟೀಲ ಹೇಳಿದರು.
ಪಟ್ಟಣ ಸಮೀಪದ ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ ಕಚೇರಿಯ ಆವರಣದಲ್ಲಿ ಗುರುವಾರ ಬೆಳಗಾವಿ ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು ಪಟ್ಟಣದಲ್ಲಿ ಕನ್ನಡ ಸಾಹಿತ್ಯ ಸಂಸ್ಕೃತಿ ಬೆಳಗುವ ಕಾರ್ಯಕ್ರಮಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಪ್ರತಿಯೊಬ್ಬ ಕನ್ನಡಾಭಿಮಾನಿಗಳು ತನು, ಮನ, ಧನ ಸಹಾಯ ಮಾಡುವ ಮೂಲಕ ಸಮ್ಮೇಳನದ ಯಶಸ್ಸಿಗೆ ಶ್ರಮಿಸಬೇಕೆಂದು ಹೇಳಿದರು.
ಹಾರೂಗೇರಿ ತಾಲೂಕು ಹೋರಾಟ ಸಮಿತಿ ಅಧ್ಯಕ್ಷ ಜಿನ್ನಪ್ಪ ಅಸ್ಕಿ ಮಾತನಾಡುತ್ತ ಗಡಿ ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಪಸರಿಸಲು ರಾಯಬಾಗ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯನಿರ್ವಹಿಸುತ್ತಿದೆ. ಬೆಳಗಾವಿ ಜನರು ಕನ್ನಡವನ್ನು ಹೃದಯದಿಂದ ಪ್ರೀತಿಸುತ್ತಿರುವುದರಿಂದ ಈ ಭಾಗದಲ್ಲಿ ಕನ್ನಡ ಕಟ್ಟುವ ಕೆಲಸವನ್ನು ಜನರೇ ಮಾಡುತ್ತಿರುವುದು ವಿಶೇಷವಾಗಿದೆ ಎಂದರು.
ಜನೇವರಿ 10 ಹಾಗೂ 11 ರಂದು ಎರಡು ದಿನಗಳವರೆಗೆ ಹಾರೂಗೇರಿ ಆದಿನಾಥ ಜೈನ ದಿಗಂಬರ ಸಭಾಭವನದಲ್ಲಿ ನಡೆಯಲಿರುವ ಬೆಳಗಾವಿ ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಗಳನ್ನು ಸ್ವಾಗತ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಮಹೇಂದ್ರ ತಮ್ಮಣ್ಣವರ ಬಿಡುಗಡೆಗೊಳಿಸಿದರು.
ಪುರಸಭೆ ಅಧ್ಯಕ್ಷ ವಸಂತ ಲಾಳಿ, ಕುಡಚಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಪ್ರದೀಪ ಹಾಲ್ಗುಣಿ, ಲೇಖಕಿ ಡಾ.ರತ್ನಾ ಬಾಳಪ್ಪನವರ, ಸಿದ್ದಪ್ಪ ನಾಗನೂರ, ಸುಭಾಸ ಮಧರಖಂಡಿ, ಕಲ್ಮೇಶ ಕಾಂಬಳೆ, ಸಚೀನ ಹಳಕಲ್ಲ, ಪರಮಾನಂದ ಗಲಗಲಿ ಮತ್ತಿತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 