ಬೆಳಗಾವಿ : ಪೊಲೀಸ್ ಧ್ವಜ ದಿನಾಚರಣೆ ಶಾಂತಿ- ಸುವ್ಯವಸ್ಥೆ ರಕ್ಷಣೆಗೆ ಪೊಲೀಸ್ ಸಿಬ್ಬಂದಿ ಅವಿರತ ಶ್ರಮ
ಬೆಳಗಾವಿ, 02 ಪೊಲೀಸ್ ಇಲಾಖೆಯ ಸಿಬ್ಬಂದಿಯು ಹಗಲು ರಾತ್ರಿಯನ್ನು ಲೆಕ್ಕಿಸದೇ ತಮ್ಮ ಕುಟುಂಬ ಮತ್ತು ಆರೋಗ್ಯದ ಬಗ್ಗೆ ಕಾಳಜಿ ವಹಿಸದೇ ನಿಷ್ಠೆಯಿಂದ ಕಾರ್ಯನಿರ್ವಹಿಸುವ ಮೂಲಕ ಸಮಾಜದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡುತ್ತಿದ್ದಾರೆ ಎಂದು ಬೆಳಗಾವಿ ಉತ್ತರ ವಲಯದ ಆರಕ್ಷಕ ಮಹಾನಿರೀಕ್ಷಕರಾದ ಹೆಚ್.ಜಿ. ರಾಘವೇಂದ್ರ ಸುಹಾಸ ಅವರು ಹೇಳಿದರು.
ಬೆಳಗಾವಿ ಪೊಲೀಸ್ ಕಮಿಷನರೇಟ್ ಹಾಗೂ ಜಿಲ್ಲಾ ಪೊಲೀಸ್ ವತಿಯಿಂದ ಮಂಗಳವಾರ(ಏ.2)ರಂದು ನಡೆದ ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
1965 ರಿಂದ ಪ್ರತಿ ವರ್ಷವು ಏಪ್ರಿಲ್ 2 ರಂದು ಪೊಲೀಸ್ ಧ್ವಜ ದಿನಾಚರಣೆಯನ್ನು ಇಲಾಖೆ ವತಿಯಿಂದ ಎಲ್ಲ ಪೊಲೀಸ್ ಘಟಕದ ಕೇಂದ್ರ ಸ್ಥಾನಗಳಲ್ಲಿ ಆಚರಿಸುತ್ತ ಬರಲಾಗುತ್ತಿದೆ.
ಇಲಾಖೆಯಲ್ಲಿ ಕಾರ್ಯ ನಿರ್ವಹಿಸಿ ನಿವೃತ್ತಿ ಹೊಂದಿದವರಿಗೆ ಹಾಗೂ ಅವರ ಕುಟುಂಬದವರಿಗೆ ಗೌರವ ನೀಡುವ ಉದ್ದೇಶದಿಂದ ಈ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದರು. ಪೊಲೀಸ್ ಇಲಾಖೆಯ ಸಿಬ್ಬಂದಿಗೆ ಅನುಕೂಲವಾಗುವ ದೃಷ್ಟಿಯಿಂದ ಪೊಲೀಸ್ ಭವನವನ್ನು ನಿರ್ಮಾಣ ಮಾಡುವುದಾಗಿ ಹೇಳಿದರು.
ಅಷ್ಟೇ ಅಲ್ಲದೆ ಮಕ್ಕಳ ಪಾಲನೆ ಪೋಷಣೆ ಅವರ ಆರೋಗ್ಯ ಹಾಗೂ ವಿದ್ಯಾಭ್ಯಾಸದ ಕಡೆಗೆ ಗಮನ ವಹಿಸಿ ಎಂದು ಇಲಾಖೆಯ ಸಿಬ್ಬಂದಿಗಳಿಗೆ ಕಿವಿಮಾತು ಹೇಳಿದರು.
ಬೆಳಗಾವಿ ವಿಭಾಗದ ಆಂತರಿಕ ಭದ್ರತೆ ನಿವೃತ್ತ ಎಸ್.ಪಿ ದಯಾನಂದ ಎಸ್ ಪವಾರ ಅವರು ಮಾತನಾಡಿ, ಕರ್ತವ್ಯದ ಜೊತೆಗೆ ಸದೃಢವಾದ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಪ್ರಮುಖವಾದದ್ದು ಎಂದರು. ನಾವು 24 ಗಂಟೆಗಳ ಕಾಲ ಸಾರ್ವಜನಿಕ ರೊಂದಿಗೆ ಬೆರೆತು ಅವರ ಪರವಾಗಿ ಕಾರ್ಯ ನಿರ್ವಹಿಸುತ್ತಿದ್ದೆವೆಂದು ನಿವೃತ್ತಿ ಹೊಂದಿದಾಗ ಗೊತ್ತಾಗುತ್ತದೆ ಎಂದರು.
ನಿವೃತ್ತ ಪಿಎಸ್ಐ ಡಿ.ಎಮ್. ಮುಲ್ಲಾ ಅವರು ಮಾತನಾಡಿ, ಇಲಾಖೆಯಲ್ಲಿ ಎಲ್ಲರು ಶಿಸ್ತು ಬದ್ದವಾಗಿ ಕಾರ್ಯನಿರ್ವಹಿಸಿ ಪೊಲೀಸ್ ಇಲಾಖೆಗೆ ಗೌರವ ತರುವ ಕೆಲಸ ಮಾಡಬೇಕಾದದ್ದು ನಮ್ಮ ನಿಮ್ಮೆಲ್ಲರ ಕರ್ತವ್ಯ ಎಂದರು.
ಇದೇ ಸಂದರ್ಭದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಗಳಿಗೆ ನೆನಪಿನ ಕಾಣಿಕೆಯನ್ನು ನೀಡಿ ಗೌರವಿಸಲಾಯಿತು.
ಸಿ.ಎ.ಆರ್. ಬೆಳಗಾವಿ ನಗರ, ಡಿ.ಎ.ಆರ್ ಬೆಳಗಾವಿ ಜಿಲ್ಲೆ, ಬೆಳಗಾವಿ ಜಿಲ್ಲಾ ನಾಗರಿಕ ತುಕಡಿ, ಬೆಳಗಾವಿ ನಗರ ಮಹಿಳಾ ತುಕಡಿ, ಕೆ ಎಸ್ ಆರ್.ಪಿ ಮಹಿಳಾ ತುಕಡಿಗಳು ಅವರ ಗುಂಪಿನ ನಾಯಕರ ನೇತೃತ್ವದಲ್ಲಿ ಪಥಸಂಚಲನ ನಡೆಯಿತು.
ಇದೇ ವೇಳೆ ಪೊಲೀಸ್ ದ್ವಜಗಳ ಬಿಡುಗಡೆ ಮತ್ತು ವಿತರಣೆ ಕಾರ್ಯಕ್ರಮ ನಡೆಯಿತು.
ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಬಿ.ಎಸ್. ಲೋಕೇಶ್ ಕುಮಾರ ಅವರು ಪುಷ್ಪ ಗುಚ್ಛ ನೀಡಿ ಅತಿಥಿಗಳನ್ನು ಸ್ವಾಗತಿಸಿದರು. ಪೊಲೀಸ್ ವರಿಷ್ಠಾಧಿಕಾರಿಗಳಾದ ಸಿ.ಎಚ್. ಸುಧೀರ್ ಕುಮಾರ ರೆಡ್ಡಿ ಅವರು ವಂದಿಸಿದರು. ನಗರದ ಕಾನೂನು ಮತ್ತು ಸುವ್ಯವಸ್ಥೆಯ ಉಪಪೊಲೀಸ್ ಆಯುಕ್ತರಾದ ಸಿಮಾ ಲಾಟ್ಕರ್, ನಗರದ ಅಪರಾಧ ಮತ್ತು ಸಂಚಾರ ವಿಭಾಗದ ಉಪ ಪೊಲೀಸ್ ಆಯುಕ್ತರಾದ. ಯಶೋಧಾ ವಂಟಗೋಡಿ, ಬೆಳಗಾವಿಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ರಾಮ ಲಕ್ಷ್ಮಣ ಅರಸಿದ್ದಿ, ಮಾರ್ಕೆಟ್ ಠಾಣೆಯ ಎಸಿಪಿ ಎಸ್.ವ್ಹಿ ಭರಮನಿ, ಹಾಗೂ ಕೆ.ಎಸ್.ಆರ್.ಪಿ, ಡಿ.ಆರ್ ನ ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್ 