ಬೆಳಗಾವಿ, ಏ 30, ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ 14 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟಾರೆ 69 ಕ್ಕೆ ಏರಿದಂತಾಗಿದೆ.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಮಾಹಿತಿ ಪ್ರಕಾರ ಹಿರೇಬಾಗೇವಾಡಿಯಲ್ಲಿ 11 ಹಾಗೂ ಹುಕ್ಕೇರಿ ತಾಲ್ಲೂಕಿನಲ್ಲಿ 3ಪ್ರಕರಣಗಳು ದೃಢಪಟ್ಟಿವೆ.ಇಲ್ಲಿಯವರೆಗೆ ಜಿಲ್ಲೆಯಲ್ಲಿ ಒಟ್ಟಾರೆ ಒಟ್ಟು 69 ಪ್ರಕರಣಗಳು ದೃಢಪಟ್ಟಿದ್ದು, ಎಂಟು ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಒಬ್ಬರು ಮೃತಪಟ್ಟಿದ್ದು, ಸೋಂಕು ನಿಯಂತ್ರಣಕ್ಕೆ ವ್ಯಾಪಕ ಕಟ್ಟೆಚ್ಚರ ಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.