ರಂಗೇರಿದ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಕೈ ವಶಕ್ಕೆ ಕಸರತ್ತು
Belgaum DCC Bank Election
ಯರಗಟ್ಟಿ 05: ಬಿಡಿಸಿಸಿ ಬ್ಯಾಂಕ್ ಚುನಾವಣೆಗೆ ಇನ್ನೂ ಮೂರು ತಿಂಗಳು ಇರುವಾಗಲೇ ಕಾವು ರಂಗೇರುತ್ತಿದ್ದು, ಶುಕ್ರವಾರ ಪಟ್ಟಣದ ರತ್ನ ಸಂಗಮ ಸಭಾಭವನದಲ್ಲಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹಾಗೂ ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರದ ಶಾಸಕ ವಿಶ್ವಾಸ ವೈದ್ಯ ಮತ್ತು ಕಾಂಗ್ರೆಸ್ ಮುಖಂಡರ ನೇತೃತ್ವದಲ್ಲಿ ಯರಗಟ್ಟಿ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರ, ಉಪಾಧ್ಯಕ್ಷರ ಹಾಗೂ ಆಡಳಿತ ಮಂಡಳಿ ಸದಸ್ಯರ ಸೌಹಾರ್ದ ಸಭೆ ಜರುಗಿತು.
ಸಭೆಯಲ್ಲಿ ಬೆಳಗಾವಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ನಿರ್ದೇಶಕ ಸ್ಥಾನದ ಚುನಾವಣೆಗೆ ಶಾಸಕ ವಿಶ್ವಾಸ ವೈದ್ಯ ಅವರನ್ನು ಸರ್ವಾನುಮತದಿಂದ ಅಭ್ಯರ್ಥಿಯಾಗಿ ಘೋಷಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಶಾಸಕ ವಿಶ್ವಾಸ ವೈದ್ಯ ಕ್ಷೇತ್ರದಲ್ಲಿ ಅಧಿಕಾರಗಳನ್ನು ಮಾಡುತ್ತಿದ್ದಾರೆ. ಆದ್ದರಿಂದ ಅವರನ್ನು ಮುಂಬರುವ ಬಿಡಿಸಿಸಿ ಬ್ಯಾಂಕ್ ಚುನಾವಣೆಗೆ ಸ್ಪರ್ಧಿಸಲು ಅರ್ಹರಾಗಿದ್ದಾರೆ. ಈಗಾಗಲೇ ನಮಗೆ ತಾಲೂಕಿನ 21 ಪಿಕೆಪಿಎಸ್‌ನ ಆಡಳಿತ ಮಂಡಳಿಯವರು ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.ನಂತರ ಮಾತನಾಡಿದ ಶಾಸಕ ವಿಶ್ವಾಸ ವೈದ್ಯ ಅವರು ರೇಣುಕಾ ಎಲ್ಲಮ್ಮನ ಹಾಗೂ ಶಾಸಕರ ಆಶೀರ್ವಾದದಿಂದ ನಾನು ಚುನಾವಣೆಯಲ್ಲಿ ಶಾಸಕನಾಗಿದ್ದೇನೆ ಮುಂಬರುವ ಬಿಡಿಸಿಸಿ ಬ್ಯಾಂಕ್‌ನ ಚುನಾವಣೆಯಲ್ಲಿ ನಿಮ್ಮ ಬೆಂಬಲ ನನಗಿರಲಿ ಎಂದು ವಿನಂತಿಸಿಕೊಂಡರು.
ಸದಾಶಿವ ಕೌಜಲಗಿ, ಬೆಮುಲ್ ನಿರ್ದೇಶಕ ಶಂಕರ ಇಟ್ನಾಳ, ರವಿಂದ್ರ ಯಲಿಗಾರ, ಛಾಯಪ್ಪಾ ಹುಂಡೆಕಾರ್, ಲಕ್ಷ್ಮಣ್ ಕುಂಟೀರ್ಪಗೊಳ, ಆರ್. ಕೆ ಪಟಾತ್, ಎಪಿಎಂಸಿ ಅಧ್ಯಕ್ಷ ನೀಲಕಂಠ ಶಿದಬಸನ್ನವರ, ಪ್ರಕಾಶ ವಾಲಿ, ಫಕ್ಕೀರ್ಪ ಹದ್ದನ್ನವರ, ಬಂಗಾರೆಪ್ಪ ಹರಳಿ, ಸಿ. ಬಿ. ಬಾಳಿ, ಡಿ. ಡಿ. ಟೋಪೋಜಿ, ಬಸು ಸತ್ತೂರಿ, ನಿಖಿಲ ಪಾಟೀಲ, ರಫೀಕ್ ಡಿಕೆ, ಪ್ರವೀಣ ರಾಮಪ್ಪನವರ, ಶಿವು ರಾಥೋಡ, ಗೋಪಾಲ ದಳವಾಯಿ, ಸುರೇಶ ಭಜಂತ್ರಿ, ಪಡೆಪ್ಪ ನರಿ, ಯಲ್ಲಪ್ಪ ನರಿ, ಉಮೇಶ ಮಾಗುಂಡನವರ ಹಾಗೂ ಯರಗಟ್ಟಿ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 