ಬೆಳಗಾವಿ ಪಾಲಿಕೆಯ 442 ಕೋಟಿ ರೂ.ಗಳ ಉಳಿತಾಯ ಬಜೆಟ್ ಮಂಡನೆ ಪರಿಸರ ಸ್ನೇಹಿ ಮನೆಗಳಿಗೆ ಆಸ್ತಿ ತೆರಿಗೆಯಲ್ಲಿ ರಿಯಾಯಿತಿ ಘೋಷಣೆ
Belgaum Municipal Corporation presents Rs 442 crore savings budget Property tax concession announc
ಬೆಳಗಾವಿ 26: ಇಲ್ಲಿನ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ವಿಶೇಷ ಪರಿಷತ್ ಸಭೆ ಜರುಗಿತು. 2026-27ನೇ ಸಾಲಿನ ವಾರ್ಷಿಕ ಆಯವ್ಯಯವನ್ನು ಮಂಡಿಸಿದ ತೆರಿಗೆ ಮತ್ತು ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷೆ ರೇಖಾ ಹೂಗಾರ ಅವರು, ನಗರದ ಸಮಗ್ರ ಅಭಿವೃದ್ಧಿ ಹಾಗೂ ಜನಕಲ್ಯಾಣಕ್ಕೆ ಒತ್ತು ನೀಡುವ 92 ಲಕ್ಷ ರೂ.ಗಳ ಉಳಿತಾಯ ಬಜೆಟ್ಗೆ ಮಂಡನೆಗೆ ಮಂಡಿಸಲಾಯಿತು.
ಬುಧವಾರ ಮಹಾನಗರ ಪಾಲಿಕೆಯ ಆಡಳಿತಾರೂಢ ಮಂಡಳಿಯು, ಬೆಳಗಾವಿ ನಗರದ ಅಭಿವೃದ್ಧಿಗಾಗಿ 442.54 ಕೋಟಿ ರೂಪಾಯಿಗಳ ಬಜೆಟ್ ಮಂಡಿಸಿತು. ಸ್ಥಾಯಿ ಸಮಿತಿ ಅಧ್ಯಕ್ಷೆ ರೇಖಾ ಹೂಗಾರ ಅವರು ಮಂಡಿಸಿದರು. ಈ ಆಯವ್ಯಯದಲ್ಲಿ ಒಟ್ಟು 441.62 ಕೋಟಿ ರೂಪಾಯಿಗಳನ್ನು ಅಭಿವೃದ್ಧಿ ಕಾರ್ಯಗಳಿಗಾಗಿ ವೆಚ್ಚ ಮಾಡಲು ನಿರ್ಧರಿಸಲಾಗಿದ್ದು, ಅಂತಿಮವಾಗಿ 92.32 ಲಕ್ಷ ರೂಪಾಯಿಗಳ ಉಳಿತಾಯವನ್ನು ತೋರಿಸಲಾಗಿದೆ.
ಬಜೆಟ್ನಲ್ಲಿ ಎಸ್ಸಿ-ಎಸ್ಟಿ ವರ್ಗದ ಅಭಿವೃದ್ಧಿ, ಮಹಿಳಾ ಸಬಲೀಕರಣ ಹಾಗೂ ಸ್ವಚ್ಛ ನಗರದ ಗುರಿಯೊಂದಿಗೆ ವೈಜ್ಞಾನಿಕ ಘನತ್ಯಾಜ್ಯ ವಿಲೇವಾರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಈ ಬಾರಿಯ ಬಜೆಟ್ನಲ್ಲಿ ಪೌರಕಾರ್ಮಿಕರು ಮತ್ತು ಪಾಲಿಕೆ ಸಿಬ್ಬಂದಿಗೆ ವಿಶೇಷ ಆದ್ಯತೆ ನೀಡಲಾಗಿದ್ದು, ಅವರಿಗಾಗಿ ಆರೋಗ್ಯ ವಿಮೆ ಹಾಗೂ ದಿನನಿತ್ಯದ ಉಪಹಾರ ವ್ಯವಸ್ಥೆಯನ್ನು ಘೋಷಿಸಲಾಗಿದೆ. ವಿಶೇಷವಾಗಿ ಪರಿಸರ ಸ್ನೇಹಿ ಕಟ್ಟಡಗಳನ್ನು ಉತ್ತೇಜಿಸಲು ಅಂತಹ ಮನೆಗಳ ಆಸ್ತಿ ತೆರಿಗೆಯಲ್ಲಿ ರಿಯಾಯಿತಿ ನೀಡಲು ನಿರ್ಧರಿಸಲಾಗಿದೆ.
ಅಲ್ಲದೆ, ಸ್ವಾತಂತ್ರ್ಯ ಯೋಧರಿಗೆ ನೀಡಲಾಗುತ್ತಿರುವ ಶೇ. 10 ರಷ್ಟು ಆಸ್ತಿ ತೆರಿಗೆ ರಿಯಾಯಿತಿಯನ್ನು ಈ ವರ್ಷವೂ ಮುಂದುವರಿಸಲು ಪಾಲಿಕೆ ನಿರ್ಧರಿಸಿದೆ. ಆಡಳಿತ ಪಕ್ಷದ ನಾಯಕ ಹನಮಂತ ಕೊಂಗಾಲಿ ಅವರು 92.32 ಲಕ್ಷ ಉಳಿತಾಯ ಮೌಲ್ಯದ ಬಜೆಟ್ ಮೊದಲ ಬಾರಿ ಮಂಡಿಸಲಾಗುತ್ತಿದೆ. ಶೇಕಡಾ 85 ರಷ್ಟು ಕರ ಸಂಗ್ರಹವನ್ನು ನೀರೀಕ್ಷಿಸಲಾಗಿದೆ ಎಂದು ಹೆಚ್ಚಿನ ಮಾಹಿತಿಯನ್ನು ನೀಡಿದರು.
ವಿಪಕ್ಷ ಸದಸ್ಯ ರವಿ ಸಾಳುಂಕೆ ಅವರು ಮೊದಲಿನ ಕಮಿಷನರಂತೆ ರಸ್ತೆಗಿಳಿದು ಬಾಕಿ ಉಳಿದ ಕರವನ್ನು ಕೈಗಾರಿಕೋದ್ಯಮಗಳು, ವಾಣಿಜೋದ್ಯಮಗಳಿಂದ ಪಡೆಯಲು ಸಲಹೆ ನೀಡಿದರು. ಇನ್ನು ವಿಪಕ್ಷ ಸದಸ್ಯ ರಿಯಾಝ್ ಕಿಲ್ಲೇದಾರ ಅವರು ಬಾಕಿ ಕರ ಸಂದಾಯವಾಗುವವರೆಗೂ ಅಭಿವೃದ್ಧಿ ಅಸಾಧ್ಯ ಎಂದರು. ಇನ್ನು ಅಝೀಮ್ ಪಟ್ಟೆಗಾರ ಅವರು ಬಜೆಟಿಗೆ ಸಂಬಂಧಿಸಿದಂತೆ ಸಭೆ ಕರೆದು ಇನ್ನಷ್ಟು ಅಧ್ಯಯನ ಮಾಡಬೇಕಿದೆ ಎಂದರು. ಮೇಯರ್ ಮಂಗೇಶ ಪವಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಉಪಮೇಯರ್ ವಾಣಿ ಜೋಶಿ, ಆಯುಕ್ತ ಕಾರ್ತಿಕ್ ಎಂ. ಸೇರಿದಂತೆ ಹಲವು ಕಾರ್ೊರೇಟರ್ ಸೇರಿದಂತೆ ಹಲವರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 