ಅಂತರಾಷ್ಟ್ರೀಯ ಮಟ್ಟಕ್ಕೆ ಬೆಳಗಾವಿಯ ಸ್ಟೀಮ್ ಎಚ್ ವಿದ್ಯಾರ್ಥಿಗಳು ಆಯ್ಕೆ
Belgaum STEAM H students selected for international level
ಲೋಕದರ್ಶನ ವರದಿ
ಬೆಳಗಾವಿ 13: ಇಲ್ಲಿನ ಶಿವಬಸವ ನಗರದ ನಾಗನೂರು ರುದ್ರಾಕ್ಷಿ ಮಠದಲ್ಲಿನ ಸ್ಟೀಮ್ ಹೆಚ್ ತರಬೇತಿ ಮತ್ತು ಸಂಶೋಧನಾ ಪ್ರತಿಷ್ಠಾನದ ವಿದ್ಯಾರ್ಥಿಗಳು ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಯನ ಮಾಡುತ್ತಿರುವ ಸುಶಾಂತ ಲಕ್ಕಪ್ಪ ಬಂಡಿವಡ್ದರ ಹಾಗೂ ವಿಠ್ಠಲ ಮಲ್ಲಿಕಾರ್ಜುನ ಗದಗ ಎಂಬ ಇಬ್ಬರು ವಿದ್ಯಾರ್ಥಿಗಳು ಮಾರ್ಚ 11 ಮತ್ತು 12 ರಂದು ಬೆಂಗಳೂರಿನ ಗೀತಂ ವಿಶ್ವವಿದ್ಯಾಲಯದಲ್ಲಿ ಜರುಗಿದ ರಾಷ್ಟ್ರಮಟ್ಟದ ಕೊಡವಿಯರ್ ಸ್ಪರ್ಧೆಯಲ್ಲಿ ಭಾಗವಹಿಸಿ ಮೊದಲ ಸ್ಥಾನ ಗಳಿಸಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಯು ಮೇ 16 ಮತ್ತು 17ರಂದು ಇಂಡೋನೇಷ್ಯಾದ ಜಕಾರ್ತನಲ್ಲಿ ಜರುಗಲಿದೆ. ಪರಿಣಿತರಂತೆ ಫುಟ್ಬಾಲ್ ಆಟವಾಡುವ ರೋಬೋಟ್ ಸಾಕರ್ ತಯಾರಿಸಿರುವ ವಿದ್ಯಾರ್ಥಿಗಳ ಈ ವಿಶೇಷ ಸಾಧನೆಗೆ ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ. ಇವರಿಗೆ ಪ್ರಾಚಾರ್ಯ ವಿ.ಎಸ್. ಹೊಸಮನಿ, ಸಂಯೋಜಕಿ ಹೇಮಲತಾ ಹಿರೇಮಠ, ಉಪನ್ಯಾಸಕ ದಯಾನಂದ ಮಗದುಮ ಮಾರ್ಗದರ್ಶನ ಮಾಡಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 